ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು-ಅರಸೀಕೆರೆ ಜೋಡಿ ಮಾರ್ಗಕ್ಕೆ ಒಪ್ಪಿಗೆ

|
Google Oneindia Kannada News

ತುಮಕೂರು, ಏ.6 : ಬಹು ಬೇಡಿಕೆಯ ತುಮಕೂರು-ಅರಸೀಕೆರೆ ಜೋಡಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಇಲಾಖೆ ಒಪ್ಪಿಗೆ ನೀಡಿದೆ. ಸುಮಾರು 347 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, 2015ರ ಅಕ್ಟೋಬರ್‌ ವೇಳೆಗೆ ಆರಂಭವಾಗುವ ಸಾಧ್ಯತೆ ಇದೆ.

ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರಿದ ಈ ಪ್ರದೇಶದಲ್ಲಿ ಜೋಡಿ ಹಳಿ ನಿರ್ಮಿಸುವ ಬಗ್ಗೆ ಸಮೀಕ್ಷೆ ನಡೆಸಿ ಇಲಾಖೆಗೆ ವರದಿಯನ್ನು ನೀಡಲಾಗಿತ್ತು. ರೈಲ್ವೆ ಬಜೆಟ್‌ನಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದ್ದು 21 ಕೋಟಿ ಅನುದಾನ ಮೀಸಲಾಗಿಡಲಾಗಿದೆ. [ರೈಲ್ವೆ ಬಜೆಟ್ : ಮೈಸೂರಿಗೆ ಸಿಕ್ಕಿದ್ದೇನು?]

indian railways

ಸುಮಾರು 96 ಕಿ.ಮೀ. ನಡುವಿನ ಈ ಮಾರ್ಗದಲ್ಲಿ ಜೋಡಿ ಹಳಿ ನಿರ್ಮಾಣ ಮಾಡಲು ತಗಲುವ ವೆಚ್ಚ ಸೇರಿದಂತೆ ಯೋಜನೆಯ ವಿಸ್ತ್ರೃತ ವರದಿಯನ್ನು ತಯಾರಿಸಿ ರೈಲ್ವೆ ಇಲಾಖೆ ಮಾ.20ರಂದು ಸಲ್ಲಿಕೆ ಮಾಡಲಾಗಿತ್ತು. ಇದನ್ನು ಪರಿಶೀಲನೆ ನಡೆಸಿದ ಬಳಿಕ ಕಾಮಗಾರಿ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. [ರೈಲ್ವೆ ಬಜೆಟ್ ಮುಖ್ಯಾಂಶಗಳು]

ಯೋಜನೆ ಎಲ್ಲಾ ಕಾರ್ಯಗಳು, ನಕ್ಷೆ ಮುಂತಾದ ಪ್ರಕ್ರಿಯೆಗಳು 2015ರ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಅಕ್ಟೋಬರ್‌ನಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಕಾಮಗಾರಿ ಆರಂಭವಾದರೆ ಈ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ.

ಅರಸೀಕೆರೆ-ತುಮಕೂರು ಮಾರ್ಗದಲ್ಲಿ ಹಲವಾರು ರೈಲುಗಳು ಸಂಚಾರ ನಡೆಸಲಿದ್ದು ಜೋಡಿ ಮಾರ್ಗದ ಅಗತ್ಯವಿತ್ತು. ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಈ ಮಾರ್ಗದಲ್ಲಿ ಕಾಮಗಾರಿ ಕೈಗೊಳ್ಳಲು ಒಪ್ಪಿಗೆ ನೀಡಲಾಗಿತ್ತು.

English summary
Track-doubling between Arsikere and Tumakuru in the Mysuru division has got a new impetus. Railway Board issuing fresh directions that work should commence by October 1. 96 km stretch doubling work is expected to cost Rs. 347 core.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X