ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ಜೆಡಿಎಸ್ ನಾಯಕರ ಸಭೆ ಕರೆದ ದೇವೇಗೌಡರು!

|
Google Oneindia Kannada News

Recommended Video

lok sabha elections 2019: ತುಮಕೂರು ಜೆಡಿಎಸ್ ನಾಯಕರ ಸಭೆ ಕರೆದ ದೇವೇಗೌಡರು!

ತುಮಕೂರು, ಮಾರ್ಚ್ 20 : ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆಯೇ?. ಗುರುವಾರ ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ಎಚ್.ಡಿ.ದೇವೇಗೌಡ ಅವರು ಗುರುವಾರ ತುಮಕೂರು ಭಾಗದ ಪಕ್ಷದ ಶಾಸಕರು, ನಾಯಕರ ಸಭೆ ಕರೆದಿದ್ದಾರೆ. ತುಮಕೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಅವರು ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

ತುಮಕೂರು ಬಿಜೆಪಿ ಅಭ್ಯರ್ಥಿ ಆಯ್ಕೆ : ಅಮಿತ್‌ ಶಾ ಕೈಗೆ ವರದಿ!ತುಮಕೂರು ಬಿಜೆಪಿ ಅಭ್ಯರ್ಥಿ ಆಯ್ಕೆ : ಅಮಿತ್‌ ಶಾ ಕೈಗೆ ವರದಿ!

ಬೆಂಗಳೂರು ಉತ್ತರ ಮತ್ತು ತುಮಕೂರು ಕ್ಷೇತ್ರಗಳಲ್ಲಿ ಯಾವುದರಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಆದ್ದರಿಂದ, ಗುರುವಾರ ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ.

ದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿಎಸ್ ಬಿದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ: ಜಿಎಸ್ ಬಿ

ತುಮಕೂರು ಕ್ಷೇತ್ರದ ಹಾಲಿ ಸಂಸದರು ಕಾಂಗ್ರೆಸ್‌ನ ಮುದ್ದಹನುಮೇಗೌಡ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಕಾರಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಆದರೆ, ದೇವೇಗೌಡರು ಸ್ಪರ್ಧೆ ಮಾಡಲಿಲ್ಲ ಎಂದರೆ ಕ್ಷೇತ್ರವನ್ನು ನಮಗೆ ವಾಪಸ್ ಕೊಡಿ ಎಂದು ಕಾಂಗ್ರೆಸ್ ಬೇಡಿಕೆ ಇಡುತ್ತಿದೆ. ಆದರೆ, ಜೆಡಿಎಸ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ದೇವೇಗೌಡರಿಗೆ ಗಂಗೆ ಶಾಪ ಇದೆ, ತುಮಕೂರಲ್ಲಿ ಸ್ಪರ್ಧಿಸಿದರೆ ಸೋಲು ಖಚಿತ: ಸುರೇಶ್ ಗೌಡದೇವೇಗೌಡರಿಗೆ ಗಂಗೆ ಶಾಪ ಇದೆ, ತುಮಕೂರಲ್ಲಿ ಸ್ಪರ್ಧಿಸಿದರೆ ಸೋಲು ಖಚಿತ: ಸುರೇಶ್ ಗೌಡ

ತುಮಕೂರು ನಾಯಕರ ಆಹ್ವಾನ

ತುಮಕೂರು ನಾಯಕರ ಆಹ್ವಾನ

'ದೇವೇಗೌಡರು ತುಮಕೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದೇವೆ. ಇಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಅಪೇಕ್ಷೆಇದೆ. ಸ್ಥಳೀಯ ನಾಯಕರು ಈ ಕುರಿತು ಮನವಿ ಮಾಡಿದ್ದಾರೆ. ದೇವೇಗೌಡರು ನನ್ನ ಹೆಸರನ್ನು ಕೂಡಾ ಸೂಚಿಸಿದ್ದರು' ಎಂದು ಮಾಜಿ ಎಂಎಲ್‌ಸಿ ರಮೇಶ್ ಬಾಬು ಹೇಳಿದ್ದಾರೆ.

ಯಾವ ಕ್ಷೇತ್ರದಿಂದ ಸ್ಪರ್ಧೆ

ಯಾವ ಕ್ಷೇತ್ರದಿಂದ ಸ್ಪರ್ಧೆ

ಹಾಸನ ಕ್ಷೇತ್ರದ ಸಂಸದ ಎಚ್.ಡಿ.ದೇವೇಗೌಡರು ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಆದ್ದರಿಂದ, 2019ರ ಚುನಾವಣೆಗೆ ಅವರು ಬೇರೆ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಬೆಂಗಳೂರು ಉತ್ತರ ಅಥವ ತುಮಕೂರು ಕ್ಷೇತ್ರಗಳಲ್ಲಿ ದೇವೇಗೌಡರು ಕಣಕ್ಕಿಳಿಯಬಹುದು. ಆದರೆ, ಯಾವ ಕ್ಷೇತ್ರ ಎಂಬುದು ಇನ್ನೂ ಅಂತಿಮವಾಗಿಲ್ಲ.

ಕಾಂಗ್ರೆಸ್ ಬೇಡಿಕೆ

ಕಾಂಗ್ರೆಸ್ ಬೇಡಿಕೆ

ತುಮಕೂರು ಕ್ಷೇತ್ರದ ಹಾಲಿ ಸಂಸದರು ಕಾಂಗ್ರೆಸ್‌ನ ಮುದ್ದಹನುಮೇಗೌಡ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಕಾರಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಒಂದು ವೇಳೆ ದೇವೇಗೌಡರು ಸ್ಪರ್ಧೆ ಮಾಡದಿದ್ದರೆ ಕ್ಷೇತ್ರವನ್ನು ನಮಗೆ ಬಿಟ್ಟುಕೊಡಿ ಎಂದು ಕಾಂಗ್ರೆಸ್ ಬೇಡಿಕೆ ಇಟ್ಟಿದೆ.

ಬಿಜೆಪಿಯೂ ಕಾಯುತ್ತಿದೆ

ಬಿಜೆಪಿಯೂ ಕಾಯುತ್ತಿದೆ

ದೇವೇಗೌಡರು ತುಮಕೂರಿನಿಂದ ಕಣಕ್ಕಿಳಿಯಲಿದ್ದಾರೆಯೇ? ಎಂದು ಬಿಜೆಪಿ ಸಹ ಕಾಯುತ್ತಿದೆ. ತುಮಕೂರು ಕ್ಷೇತ್ರಕ್ಕೆ ಜಿ.ಎಸ್.ಬಸವರಾಜ್, ಬಿ.ಸುರೇಶ್ ಗೌಡ ಮತ್ತು ಎಂ.ಆರ್.ಹುಲಿನಾಯ್ಕರ್ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ. ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆಯೇ? ಎಂಬುದರ ಮೇಲೆ ಯಾರು ಅಭ್ಯರ್ಥಿ ಎಂದು ಪಕ್ಷ ತೀರ್ಮಾನಿಸಲಿದೆ.

English summary
JD(S) supremo H.D.Deve Gowda called Tumakuru party leaders meeting on March 21, 2019. Will he contest for Lok sabha elections 2019 from Tumakuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X