ಗೃಹ ಖಾತೆ ಬದಲಾವಣೆ: ಹೈಕಮಾಂಡ್ ನಿರ್ಧರಿಸುತ್ತೆ ಎಂದ ಪರಮೇಶ್ವರ
ತುಮಕೂರು, ಡಿಸೆಂಬರ್ 24: ಖಾತೆ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಖಾತೆ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.
ಸೋಮವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಗೃಹ ಖಾತೆಯನ್ನು ಎಂಬಿ ಪಾಟೀಲ್‌ಗೆ ಕೊಡುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ ಎನ್ನುವ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಆ ಬಗ್ಗೆ ನನಗೆ ಮಾಹಿತಿ ಇಲ್ಲ ಆದರೆ ಯಾರಿಗೆ ಯಾವ ಖಾತೆಯನ್ನು ನೀಡಬೇಕು ಎನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಅವರ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ ಎಂದು ಹೇಳಿದರು.

ಆದರೆ ಇನ್ನೊಂದು ಕಡೆಯಿಂದ ಬರುತ್ತಿರುವ ಮಾಹಿತಿ ಪ್ರಕಾರ ಜಲಸಂಪನ್ಮೂಲ ಇಲಾಖೆ ಬೇಕು ಎಂದು ಎಂಬಿ ಪಾಟೀಲ್ ಪಟ್ಟು ಹಿಡಿದಿದ್ದಾರೆ. ಆದರೆ ಈಗಾಗಲೇ ಆ ಇಲಾಖೆಯನ್ನು ನಿರ್ವಹಿಸುತ್ತಿರುವ ಸಚಿವ ಡಿಕೆ ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಆ ಖಾತೆಯನ್ನು ಬಿಟ್ಟುಕೊಡಲು ಸಿದ್ಧರಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications