ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ನಾಗೇಶ್ ಮನೆ ಮೇಲೆ ದಾಳಿ: ಕಠಿಣ ಕ್ರಮಕ್ಕೆ ಗೃಹ ಸಚಿವರ ಆಗ್ರಹ

By ತುಮಕೂರು ಪ್ರತಿನಿಧಿ
|
Google Oneindia Kannada News

ತಿಪಟೂರು, ಜೂ. 2: ಸಚಿವ ಬಿ.ಸಿ ನಾಗೇಶ್ ಅವರ ಮನೆಯ ಮೇಲಿನ ದಾಳಿ ನಡೆಸಿ, ಬೆಂಕಿ ಹಚ್ಚಲು ಮುಂದಾದ ಎನ್ ಎಸ್ ಯು ಐ ಕಾರ್ಯಕರ್ತರ ಕೃತ್ಯವನ್ನು ಖಂಡಿಸುತ್ತೇನೆ ಎಂದು ಗೃಹಸಚಿವರ ಆರಗ ಜ್ಞಾನೆಂದ್ರ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆಯ ಮೇಲೆ ಎನ್ ಎಸ್ ಯು ಐ ಕಾರ್ಯಕರ್ತರ ದಾಳಿ ನಡೆದ ಹಿನ್ನಲೆಯಲ್ಲಿ ಶಿಕ್ಷಣ ಸಚಿವರ ಮನೆಗೆ ಗೃಹಸಚಿವ ಭೇಟಿ ನೀಡಿ ಸಾಂತ್ವನ ಹೇಳಿದರು.

ಪಠ್ಯದಿಂದ ಅಧ್ಯಾಯ ಕೈಬಿಡಿ ಅಭಿಯಾನ ಕಾಂಗ್ರೆಸ್ ಉಪಕೃತರ ನಾಟಕ: ಪ್ರತಾಪ್ ಸಿಂಹಪಠ್ಯದಿಂದ ಅಧ್ಯಾಯ ಕೈಬಿಡಿ ಅಭಿಯಾನ ಕಾಂಗ್ರೆಸ್ ಉಪಕೃತರ ನಾಟಕ: ಪ್ರತಾಪ್ ಸಿಂಹ

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಗಾಗಲೇ ಸಚಿವರ ಮನೆ ಮೇಲೆ ದಾಳಿ ಮಾಡಲು ಯತ್ನಸಿದವರನ್ನು ಬಂಧಿಸಲಾಗಿದೆ. ಅಜಾತಶತ್ರು ಬಿ.ಸಿ.ನಾಗೇಶ್ ರವರಿಗೆ ಯಾರು ಶತ್ರುಗಳಿಲ್ಲ ಎಂದು ಭಾವಿಸಿ ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ತಲೆಬಾಗಿ ಸಾಮಾನ್ಯ ಕಾರ್ಯಕರ್ತರಂತೆ ರಾಜಕೀಯವೇ ಸೇವೆ ಮಾಡುತ್ತಿದ್ದವರನ್ನು ಸಹಿಸದ ಕೆಲ ಕಿಡಿಗೇಡಿ ಸಂಘಟನೆಗಳ ಹೇಯ ಕೃತ್ಯವಾಗಿದೆ. ಈ ಘಟನೆಗೆ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಶಂಕಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Home Minister Condemns Attack on Minister Nagesh Residence

ಡಾ.ಸಿ.ಎನ್. ಅಶ್ವತ್ಥನಾರಾಯಣ ಕಿಡಿ

ಪಠ್ಯಪುಸ್ತಕ ಮರುಪರಿಷ್ಕರಣೆಯನ್ನು ಭೌದ್ಧಿಕವಾಗಿ ಎದುರಿಸಲಾಗದ ಕಾಂಗ್ರೆಸ್ ಪಕ್ಷದ ಭಟ್ಟಂಗಿಗಳು ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ನಿವಾಸದ ಮೇಲೆ ದಾಳಿ ನಡೆಸಿರುವುದು ಹೇಡಿತನ ಮತ್ತು ಅವಿವೇಕದ ಪರಮಾವಧಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಖಂಡಿಸಿದ್ದಾರೆ.

ಪಠ್ಯ ವಾಪಸ್ ಪಡೆಯುತ್ತೇನೆ ಎಂದ ಸಾಹಿತಿಗಳೊಂದಿಗೆ ಚರ್ಚಿಸುತ್ತೇನೆ: ಸಿಎಂಪಠ್ಯ ವಾಪಸ್ ಪಡೆಯುತ್ತೇನೆ ಎಂದ ಸಾಹಿತಿಗಳೊಂದಿಗೆ ಚರ್ಚಿಸುತ್ತೇನೆ: ಸಿಎಂ

'ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ನಿಶ್ಚಿತ'

ಕಾಂಗ್ರೆಸ್ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನೇ ನಾಶ ಮಾಡಿ, ಗುಲಾಮಗಿರಿಯನ್ನು ಬೆಳೆಸಿದೆ. ಸ್ವತಂತ್ರ ಆಲೋಚನೆ ಇರುವವರಾರೂ ದಾಳಿಯಂಥ ಅನಾಗರಿಕ ಕೃತ್ಯಗಳಿಗೆ ಮುಂದಾಗುವುದಿಲ್ಲ. ಇದು ಕಾಂಗ್ರೆಸ್ಸಿನ ಸಾಂಸ್ಕೃತಿಕ, ಬೌದ್ಧಿಕ ಮತ್ತು ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ. ಆದರೆ, ಇಂತಹ ಕೀಳು ತಂತ್ರಗಳಿಂದ ಬಿಜೆಪಿ ಸರಕಾರದ ಸ್ಥೈರ್ಯವನ್ನು ಕುಗ್ಗಿಸಲು ಎಂದಿಗೂ ಸಾಧ್ಯವಿಲ್ಲ. ಏಕೆಂದರೆ, ಕಾಂಗ್ರೆಸ್ ಪಕ್ಷವನ್ನು ದೇಶದ ಜನ ಈಗಾಗಲೇ ಕಸದ ಬುಟ್ಟಿಗೆ ಎಸೆದಿದ್ದಾರೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

'ನಾಗೇಶ್ ಅವರ ಮನೆಯ ಮೇಲೆ ಮಾಡಿರುವ ದಾಳಿಯು ಅಸಹಿಷ್ಣುತೆಯ ಸಂಕೇತವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವೈಚಾರಿಕ ಸ್ವಾತಂತ್ರ್ಯಗಳ ಬಗ್ಗೆ ಬಿಜೆಪಿ ಬಗ್ಗೆ ಅನಗತ್ಯವಾಗಿ ಗೂಬೆ ಕೂರಿಸುತ್ತಿರುವ ಸಾಹಿತಿಗಳು ಈಗ ಜಾಣಮೌನಕ್ಕೆ ಜಾರಿರುವುದು ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ತಾನು ಅಧಿಕಾರದಲ್ಲಿಲ್ಲದಿದ್ದಾಗ ಹೆಚ್ಚು ಅಪಾಯಕಾರಿ ಎನ್ನುವ ವಾಜಪೇಯಿಯವರ ಮಾತು ನಿಜವೆಂದು ಇದರಿಂದ ಸಾಬೀತಾಗಿದೆ,' ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.

Home Minister Condemns Attack on Minister Nagesh Residence

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ ಕಾರ್ಯಕರ್ತರು ತಮ್ಮನ್ನು ತಾವು ಕುವೆಂಪು ಆರಾಧಕರು ಎಂದು ಹೇಳಿದ್ದಾರೆ. ಆದರೆ, ಸಚಿವರ ಮನೆ ಮೇಲೆ ದಾಳಿ ಮಾಡುವ ಮೂಲಕ ಮಹಾಕವಿಯ ತತ್ವಗಳಿಗೆ ಮಸಿ ಬಳಿದಿದ್ದಾರೆ. ಇಂತಹ ಗೂಂಡಾಗಿರಿಯನ್ನು ಸರಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ನಿಶ್ಚಿತ' ಎಂದು ಖಾರವಾಗಿ ನುಡಿದಿದ್ದಾರೆ.

(ಒನ್ಇಂಡಿಯಾ ಸುದ್ದಿ)

English summary
Home Minister Araga Jnanendra has strongly condemned the attack on residence of Minister BC Nagesh by alleged NSUI workers. Another Minister Ashwath Narayan too reacted in strongly worded statements.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X