ತುಮಕೂರು ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಈಗ ಹೇಗಿದೆ?
ತುಮಕೂರು, ಜನವರಿ 1: ಸಿದ್ದಗಂಗಾ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಎಂದು ಮಠದ ವೈದ್ಯ ಡಾ. ಪರಮೇಶ್ ಮಾಹಿತಿ ನೀಡಿದ್ದಾರೆ.
ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾತುಗಳು ಕೇಳಿಬಂದಿತ್ತು ಆದರೆ ಇದೆಲ್ಲದಕ್ಕೂ ಕಿವಿಗೊಡಬೇಡಿ, ಶ್ರೀಗಳು ಈಗ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ರಕ್ತದಲ್ಲಿ ಸೋಂಕು ಇದೆ ಎನ್ನುವ ಅಂಶ ಪತ್ತೆಯಾಗಿತ್ತು.
ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ, ಇನ್ನು ನಾಲ್ಕೈದು ದಿನಗಳ ಕಾಲ ಚಿಕಿತ್ಸೆ ನೀಡಿದರೆ ಸಂಪೂರ್ಣವಾಗಿ ಗುಣಮುಖವಾಗುತ್ತಾರೆ. ಮಂಗಳವಾರ ಇಷ್ಟಲಿಂಗ ಪೂಜೆ ನೆರವೇರಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯಾರೂ ಕೂಡ ಆತಂಕಪಡಬೇಕಾಗಿಲ್ಲ, ಈಗ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಯಾವುದೇ ಅಪಾಯವಿಲಲ್, ಭಕ್ತಾದಿಗಳು ಗಾಬರಿಯಾಗುವುದು ಬೇಡ ಎಂದು ಹೇಳಿದ್ದಾರೆ.












Click it and Unblock the Notifications