ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರಿನಿಂದ ಸ್ಪರ್ಧೆ ಏಕೆ, ದೇವೇಗೌಡರು ಹೇಳಿದ್ದೇನು?

|
Google Oneindia Kannada News

ತುಮಕೂರು, ಮಾರ್ಚ್ 25 : 'ಎಸ್‌.ಪಿ.ಮುದ್ದಹನುಮೇಗೌಡ ಅವರಿಗೆ ಅವಮಾನ ಮಾಡುವ ಉದ್ದೇಶ ನನಗಿದಲ್ಲ. ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್ ನಾಯಕರ ಒತ್ತಾಯದಿಂದ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದೇನೆ' ಎಂದು ಎಚ್.ಡಿ.ದೇವೇಗೌಡ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಸೋಮವಾರ ಎಚ್.ಡಿ.ದೇವೇಗೌಡರು ನಾಮಪತ್ರವನ್ನು ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜೆಡಿಎಸ್ ಸಂಸದರು ಏನು ವಿದ್ಯಾರ್ಹತೆ ಪಡೆದಿದ್ದಾರೆ?

'ತುಮಕೂರಿನಿಂದ ಸ್ಪರ್ಧಿಸುವ ನಿರ್ಧಾರ ಮಾಡಿದಾಗಲೇ ಹಾಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡರಿಗೆ ಅಪಮಾನವಾಗಲಿದೆ ಎಂಬುದು ತಿಳಿದಿತ್ತು. ನಾನು ಅವರಿಗೆ ಅಪಮಾನ ಮಾಡಲು ಬಯಸುವುದಿಲ್ಲ. ಕಾಂಗ್ರೆಸ್ ನಾಯಕರು ಅವರಿಗೆ ಎಲ್ಲವನ್ನು ಹೇಳಿದ್ದಾರೆ' ಎಂದು ದೇವೇಗೌಡರು ತಿಳಿಸಿದರು.

ತುಮಕೂರು : ದೇವೇಗೌಡ ವಿರುದ್ಧ ಇಬ್ಬರು ಕಾಂಗ್ರೆಸ್‌ ನಾಯಕರ ನಾಮಪತ್ರತುಮಕೂರು : ದೇವೇಗೌಡ ವಿರುದ್ಧ ಇಬ್ಬರು ಕಾಂಗ್ರೆಸ್‌ ನಾಯಕರ ನಾಮಪತ್ರ

'ತುಮಕೂರಿಗೆ ಇದೊಂದು ಐತಿಹಾಸಿಕ ದಿನವಾಗಿದೆ. ದೇಶದ ಹಿರಿಯ ನಾಯಕ, ಕನ್ನಡಿಗರನ್ನು ಹೆಮ್ಮೆ ಪಡುವಂತೆ ಮಾಡಿರುವ ಎಚ್.ಡಿ.ದೇವೇಗೌಡರು ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದಾರೆ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ತುಮಕೂರು ಕ್ಷೇತ್ರದಲ್ಲಿ ಜಿ.ಎಸ್.ಬಸವರಾಜು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಎಲ್ಲಾ ರಾಜ್ಯದಲ್ಲೂ ಪ್ರಚಾರ ಮಾಡುವೆ

ಎಲ್ಲಾ ರಾಜ್ಯದಲ್ಲೂ ಪ್ರಚಾರ ಮಾಡುವೆ

'ನಮ್ಮ ಬಳಿ ಕೇವಲ 37 ಸೀಟುಗಳಿದ್ದರೂ ಕಾಂಗ್ರೆಸ್ ನಮಗೆ ಮುಖ್ಯಮಂತ್ರಿ ಹುದ್ದೆ ನೀಡಿತು. ಸೋನಿಯಾ ಮತ್ತು ರಾಹುಲ್ ಗಾಂಧಿ ನಮಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟರು. ನಾನು ಎಲ್ಲಾ ರಾಜ್ಯಗಳಲ್ಲಿಯೂ ಪ್ರಚಾರ ಮಾಡುವೆ. ಚಂದ್ರಬಾಬು ನಾಯ್ಡು ಅವರು ಪ್ರಚಾರಕ್ಕೆ ಆಹ್ವಾನಿಸಿದ್ದಾರೆ' ಎಂದು ದೇವೇಗೌಡರು ಹೇಳಿದರು.

ಹಿರಿಯ ನಾಯಕರು ಸಲಹೆ ನೀಡಿದರು

ಹಿರಿಯ ನಾಯಕರು ಸಲಹೆ ನೀಡಿದರು

'29 ವರ್ಷದಿಂದ ನಾನು ಸಂಸದನಾಗಿ ಕೆಲಸ ಮಾಡಿದ್ದೇನೆ. ಆದ್ದರಿಂದ, ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದೆ. ಹಾಸನ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟೆ. ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬೀ ಆಜಾದ್ ಮುಂತಾದ ನಾಯಕರು ಸ್ಪರ್ಧಿಸುವಂತೆ ಒತ್ತಾಯಿಸಿದರು' ಎಂದು ದೇವೇಗೌಡರು ಹೇಳಿದರು.

ರಾಹುಲ್ ಗಾಂಧಿ ಅವರ ಸಲಹೆ

ರಾಹುಲ್ ಗಾಂಧಿ ಅವರ ಸಲಹೆ

'ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಿ ಎಂದು ರಾಹುಲ್ ಗಾಂಧಿ ಅವರು ಸಲಹೆ ನೀಡಿದರು. ದೇವೇಗೌಡರು ಇಲ್ಲಿಂದ ಕಣಕ್ಕಿಳಿಯಲಿದ್ದಾರೆ ಎಂದು ನಾವು ನಿರೀಕ್ಷೆ ಮಾಡಿರಲಿಲ್ಲ. ನನಗೆ ತುಮಕೂರಿನ ಜನರ ಮೇಲೆ ಅವರನ್ನು ಗೆಲ್ಲಿಸಲಿದ್ದಾರೆ ಎಂಬ ಭರವಸೆ ಇದೆ' ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ತುಮಕೂರು ಕ್ಷೇತ್ರ

ತುಮಕೂರು ಕ್ಷೇತ್ರ

ಸೋಮವಾರ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು.

ಹಾಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಸಹ ನಾಮಪತ್ರ ಸಲ್ಲಿಸಿದ್ದಾರೆ.

English summary
I know when we took this decision it might have hurt the sitting MP from Tumkur S.P.Muddahanumegowda. I don't want to hurt him said JD(S) supremo H.D.Deve Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X