ಸಿದ್ದಗಂಗಾ ಮಠದ ಶ್ರೀಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಶೀರ್ವಾದ
ದೆಹಲಿ, ನವೆಂಬರ್.28: ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡಿದ ಸಿದ್ದಗಂಗಾ ಶ್ರೀಗಳು ಎಂದರೆ ಎಂಥವರಿಗೂ ಪೂಜ್ಯ ಭಾವನೆ. ಶ್ರೀಮಠದ ಭಕ್ತರು ರಾಜ್ಯವಷ್ಟೇ ಅಲ್ಲ ಬೇರೆ ರಾಷ್ಟ್ರಗಳಲ್ಲಿ ಇರುವುದು ಗೊತ್ತಿದೆ.
ಕರ್ನಾಟಕಕ್ಕೆ ಆಗಮಿಸದಾಗ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಶ್ರೀಮಠದ ಸ್ವಾಮೀಜಿಯವರ ಆಶೀರ್ವಾದ ಪಡೆದ ಉದಾಹರಣೆಗಳಿವೆ. ಈ ಹಿಂದೆ ಸಿದ್ದಗಂಗಾ ಮಠದಲ್ಲಿ ವಿಶೇಷ ಪೂಜೆಗಳು ನಡೆದಾಗ ಪ್ರಧಾನಿಯವರಿಗೆ ಪ್ರಸಾದವನ್ನು ಕಳುಹಿಸಿಕೊಟ್ಟಿದ್ದು ಇದೆ.
ಇದರ ನಡುವೆ ಇಂದು ತುಮಕೂರು ಸಿದ್ದಗಂಗಾ ಮಠದ ಶ್ರೀಶ್ರೀ ಸಿದ್ದಲಿಂಗ ಸ್ವಾಮೀಜಿ ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದರು. ಈ ಕುರಿತು ಸ್ವತಃ ಕೇಂದ್ರ ಸಚಿವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಟೋವನ್ನು ಅಪ್ ಲೋಡ್ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ ನಂತರ ಸಿದ್ದಗಂಗಾ ಮಠದ ಶ್ರೀಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿಯನ್ನು ಭೇಟಿ ಮಾಡಿ ಶ್ರೀಗಳು ಆಶೀರ್ವಾದ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳನ್ನು ಸ್ವಾಗತಿಸಲು ಸಂತಸವಾಗುತ್ತಿದೆ. ಶ್ರೀಗಳ ಭೇಟಿಯಿಂದ ಧನ್ಯನಾಗಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.












Click it and Unblock the Notifications