'ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಎಲ್ಲಾ ಬ್ಯಾಂಕುಗಳ ಸಾಲ ಮನ್ನಾ'
ತುಮಕೂರು, ಡಿಸೆಂಬರ್ 9: "ಮುಂದಿನ 2018 ವಿಧಾನಸಬಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತರ ಸಾಲಮನ್ನಾ ಮಾಡುವುದಾಗಿ"ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದರು.
ತಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, "ಕಾಂಗ್ರೆಸ್ ಸರ್ಕಾರ ಸಹಕಾರಿ ಸಂಘಗಳ ಸಾಲ ಮನ್ನಾ ಮಾಡಿದರೂ ರಾಜ್ಯದಲ್ಲಿ ರೈತರ ಸಮಸ್ಯೆಗಳು ದಿನೇ ದಿನೇ ಹೆಚ್ಚುತ್ತಿವೆ. ಮುಂದೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ, ಸಹಕಾರ ಗ್ರಾಮೀಣ ಬ್ಯಾಂಕುಗಳ ಸಾಲ ಮನ್ನಾ ಹಾಗು ಹೊಸ ಕೃಷಿ ಪದ್ಧತಿ ಅನುಷ್ಠಾನ ಮಾಡಲಾಗುವುದು" ಎಂದು ಹೇಳಿದರು.

ಡಿಸೆಂಬರ್ 10ರಂದು ತುಮಕೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಸಮಾವೇಶ, ಡಿಸೆಂಬರ್ 13ರಂದು ಬೆಂಗಳೂರಿನಲ್ಲಿ ಎಸ್ಸಿ, ಎಸ್ಟಿ ಸಮಾವೇಶ, ಜನವರಿ 9ರಂದು ಮಂಗಳೂರಿನಲ್ಲಿ ಸಮಾವೇಶ ನಡೆಯಲಿದೆ ಎಂದರು.
ತುಮಕೂರು ನಗರದಿಂದಲೇ ಚುನಾವಣಾ ಪ್ರಚಾರದ ಆರಂಭವಾಗಲಿದೆ. ಡಿಸೆಂಬರ್ 15ಕ್ಕೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು. ತುಮಕೂರಿನ 11 ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.












Click it and Unblock the Notifications