ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಶಾಸಕ ಡಿ. ಸಿ. ಗೌರಿಶಂಕರ್‌ಗೆ ಕೋವಿಡ್ ಸೋಂಕು

|
Google Oneindia Kannada News

ತುಮಕೂರು, ಸೆಪ್ಟೆಂಬರ್ 15: ಜೆಡಿಎಸ್ ನಾಯಕ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ. ಸಿ. ಗೌರಿ ಶಂಕರ್‌ಗೆ ಕೋವಿಡ್ ಸೋಂಕು ತಗುಲಿದೆ. "ಕಳೆದ 7 ದಿನದಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ಗೆ ಒಳಗಾಗಿ" ಎಂದು ಶಾಸಕರು ಮನವಿ ಮಾಡಿದ್ದಾರೆ.

ಶಾಸಕ ಡಿ. ಸಿ. ಗೌರಿಶಂಕರ್ ಮಂಗಳವಾರ ಫೇಸ್ ಬುಕ್ ಪೋಸ್ಟ್ ಮೂಲಕ ಕೋವಿಡ್ ಸೋಂಕು ತಗುಲಿದೆ ಎಂದು ಹೇಳಿದ್ದಾರೆ. "ನಿನ್ನ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ" ಎಂದು ಹೇಳಿದ್ದಾರೆ.

ಭಾರತ; 24 ಗಂಟೆಯಲ್ಲಿ 83,809 ಹೊಸ ಕೋವಿಡ್ ಪ್ರಕರಣ ಭಾರತ; 24 ಗಂಟೆಯಲ್ಲಿ 83,809 ಹೊಸ ಕೋವಿಡ್ ಪ್ರಕರಣ

"ವರದಿ ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಶಾಸಕ ಗೌರಿ ಶಂಕರ್ ಫೇಸ್‌ ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮನೆಯಲ್ಲೇ ಕೊಪ್ಪಳದಲ್ಲಿ ಕೋವಿಡ್ ಗೆದ್ದ 105ರ ವೃದ್ಧೆ ಮನೆಯಲ್ಲೇ ಕೊಪ್ಪಳದಲ್ಲಿ ಕೋವಿಡ್ ಗೆದ್ದ 105ರ ವೃದ್ಧೆ

"ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ" ಎಂದು ಶಾಸಕರು ಮನವಿ ಮಾಡಿದ್ದಾರೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್! ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್!

ಡಿ. ಸಿ. ಗೌರಿಶಂಕರ್ ಟ್ವೀಟ್

ಕೋವಿಡ್ ಸೋಂಕು ತಗುಲಿರುವ ಕುರಿತು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ. ಸಿ. ಗೌರಿ ಶಂಕರ್‌ ಟ್ವೀಟ್ ಮಾಡಿದ್ದಾರೆ.

ದೇವೇಗೌಡರ ಟ್ವೀಟ್

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಗೌರಿ ಶಂಕರ್ ಬೇಗ ಗುಣಮುಖರಾಗಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ. "ಇಂದು ಗೌರಿಶಂಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಈ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ಮತ್ತೆ ತೊಡಗುವಂತಾಗಲಿ ಎಂದು ಆಶಿಸುತ್ತೇನೆ" ಎಂದು ಹೇಳಿದ್ದಾರೆ.

ಶೀಘ್ರವಾಗಿ ಗುಣಮುಖರಾಗಲಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಟ್ವೀಟ್ ಮಾಡಿದ್ದು, "ವೈದ್ಯರ ಸಲಹೆಯಂತೆ ಸೂಕ್ತ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದು ಶೀಘ್ರ ಗುಣಮುಖರಾಗಿ ಎಂದಿನಂತೆ ಜನಸೇವೆಗೆ ಬನ್ನಿ ಎಂದು ಆಶಿಸುತ್ತೇನೆ" ಎಂದು ಹಾರೈಸಿದ್ದಾರೆ.

Recommended Video

ಸಂಜನಾ, ರಾಗಿಣಿ ಆಯ್ತು ಈಗ ದಿಗಂತ್, ಐಂದ್ರಿತಾ ಸರದಿ | Oneindia Kannada
9 ಸಾವಿರ ಪ್ರಕರಣಗಳು

9 ಸಾವಿರ ಪ್ರಕರಣಗಳು

ಸೋಮವಾರ ತುಮಕೂರಿನಲ್ಲಿ 192 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 9,378ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2466.

English summary
Tumakuru Rural seat JD(S) MLA D. C. Gowrishankar tested positive for COVID 19. As per direction he is taking treatment at home.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X