ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ತೊರೆಯುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ!

|
Google Oneindia Kannada News

ತುಮಕೂರು, ಸೆಪ್ಟೆಂಬರ್ 05; ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಎದುರಾಗುತ್ತಿದೆ. ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಪರಿಷತ್ ಸದಸ್ಯರೊಬ್ಬರು ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಗಳಿಗೆ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು 2022ರ ಜನವರಿಯಲ್ಲಿ ಚುನಾವಣೆ ನಡೆಯಲಿದೆ. 2023ರ ವಿಧಾನಸಭೆ ಚುನಾವಣೆಗೆ ಮೊದಲು ಈ ಚುನಾವಣೆ ನಡೆಯುತ್ತಿದೆ. ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ.

ಜೆಡಿಎಸ್ ಶಾಸಕನ ಜೊತೆ ಬಿಎಸ್‌ವೈ ಮಾತುಕತೆ; ಪಕ್ಷ ಬಿಡಲ್ಲ ಎಂದ ಶಾಸಕ! ಜೆಡಿಎಸ್ ಶಾಸಕನ ಜೊತೆ ಬಿಎಸ್‌ವೈ ಮಾತುಕತೆ; ಪಕ್ಷ ಬಿಡಲ್ಲ ಎಂದ ಶಾಸಕ!

ವಿಧಾನ ಪರಿಷತ್ ಸದಸ್ಯ, ತುಮಕೂರು ಭಾಗದ ಪ್ರಬಲ ಒಕ್ಕಲಿಗ ನಾಯಕ ಬೆಮಲ್ ಕಾಂತರಾಜ್ ಜೆಡಿಎಸ್ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಅವರು ಮುಂದಿನ ಚುನಾವಣೆಯಲ್ಲಿ ಎಂಎಲ್‌ಸಿ ಸ್ಥಾನ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

Breaking: ಜೆಡಿಎಸ್ ತೊರೆಯುವ ಬಗ್ಗೆ ಜಿಟಿಡಿ ಅಧಿಕೃತ ಘೋಷಣೆ Breaking: ಜೆಡಿಎಸ್ ತೊರೆಯುವ ಬಗ್ಗೆ ಜಿಟಿಡಿ ಅಧಿಕೃತ ಘೋಷಣೆ

ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ "ಜೆಡಿಎಸ್ ಮುಳುಗುವ ಹಡಗು" ಎಂದು ಹೇಳಿಕೆ ಕೊಟ್ಟಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಖರವಾಗಿ ಪ್ರತಿಕ್ರಿಯೆ ನೀಡಿದ್ದರು. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಜೆಡಿಎಸ್ ನಾಯಕರು ರಾಜಕೀಯ ತೀರ್ಮಾನವನ್ನು ಕೈಗೊಳ್ಳುತ್ತಿದ್ದಾರೆ.

ಬಾಗೇಪಲ್ಲಿ; 2023ರ ಚುನಾವಣೆ ಜೆಡಿಎಸ್ ಅಭ್ಯರ್ಥಿ ಘೋಷಣೆ! ಬಾಗೇಪಲ್ಲಿ; 2023ರ ಚುನಾವಣೆ ಜೆಡಿಎಸ್ ಅಭ್ಯರ್ಥಿ ಘೋಷಣೆ!

ಎಚ್‌ಡಿಕೆಗೆ ನಾನು ಯಾರೂ ಎಂದು ಗೊತ್ತಿಲ್ಲ

ಎಚ್‌ಡಿಕೆಗೆ ನಾನು ಯಾರೂ ಎಂದು ಗೊತ್ತಿಲ್ಲ

"ನಾನು ಜೆಡಿಎಸ್ ಪಕ್ಷದಲ್ಲಿ ಇರುವಾಗವೇ ಎಚ್. ಡಿ. ಕುಮಾರಸ್ವಾಮಿ ಬೆಮಲ್ ಕಾಂತರಾಜ್ ಯಾರು? ಎಂದು ಕೇಳಿದ್ದಾರೆ. ಅಂದರೆ ನಾನು ಯಾರು ಎಂದು ಗೊತ್ತಿಲ್ಲ ಅಂತಾನೆ ಅರ್ಥ, ಹಾಗಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ" ಎಂದು ಎಂಎಲ್‌ಸಿ ಬೆಮಲ್ ಕಾಂತರಾಜ್ ಹೇಳಿದ್ದಾರೆ.

"ನಾನು ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭೇಟಿ ಮಾಡಿದ್ದೇನೆ" ಎಂದು ಬೆಮಲ್ ಕಾಂತರಾಜ್ ಸ್ಪಷ್ಟಪಡಿಸಿದ್ದಾರೆ.

ನಾನೇಕೆ ಜೆಡಿಎಸ್‌ನಲ್ಲಿರಬೇಕು?

ನಾನೇಕೆ ಜೆಡಿಎಸ್‌ನಲ್ಲಿರಬೇಕು?

ಬೆಮಲ್ ಕಾಂತರಾಜ್, "ನಾನು ಹತ್ತಾರು ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿದ್ದೇನೆ. ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ನಾನು ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದು ಸಹ ಕುಮಾರಸ್ವಾಮಿ ಅವರಿಗೆ ಗೊತ್ತಿಲ್ಲ ಎಂದ ಮೇಲೆ ನಾನು ಏಕೆ ಜೆಡಿಎಸ್ ಪಕ್ಷದಲ್ಲಿರಬೇಕು?" ಎಂದು ಪ್ರಶ್ನಿಸಿದರು.

"ನಾನು ಎಂಎಲ್‌ಸಿ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ" ಎಂದು ಬೆಮಲ್ ಕಾಂತರಾಜ್ ಹೇಳಿದ್ದಾರೆ. ಸೀಟನ್ನು ಕಾಂಗ್ರೆಸ್‌ಗೆ ತ್ಯಾಗ ಮಾಡಲಿರುವ ಅವರು 2023ರ ವಿಧಾನಸಭೆ ಚುನಾವಣೆಗೆ ತುರುವೇಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಕುಮಾರಸ್ವಾಮಿ ವಿರುದ್ಧ ಅಸಮಾಧಾನ

ಕುಮಾರಸ್ವಾಮಿ ವಿರುದ್ಧ ಅಸಮಾಧಾನ

"ವಿಧಾನಸಭೆ ಚುನಾವಣೆಗೆ ಜೆಡಿಎಸ್‌ನಿಂದಲೇ ಸ್ಪರ್ಧಿಸಬೇಕು ಎಂಬ ಆಸೆ ಇತ್ತು. ಇದನ್ನು ಜೆಡಿಎಸ್ ವರಿಷ್ಠರ ಗಮನಕ್ಕೂ ತಂದಿದ್ದೆ. ಆದರೆ ಎಚ್. ಡಿ. ಕುಮಾರಸ್ವಾಮಿ ಬೆಮಲ್ ಕಾಂತರಾಜ್ ಯಾರು ಎಂದು ಪ್ರಶ್ನಿಸಿದ ಮೇಲೆ ನಾನು ಪಕ್ಷ ಬಿಡುವ ತೀರ್ಮಾನವನ್ನು ಮಾಡಿದೆ" ಎಂದು ಬೆಮಲ್ ಕಾಂತರಾಜ್ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣೆ ತಯಾರಿ ಆರಂಭಿಸಿದ ಕಾಂಗ್ರೆಸ್

ಚುನಾವಣೆ ತಯಾರಿ ಆರಂಭಿಸಿದ ಕಾಂಗ್ರೆಸ್

ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ ತಯಾರಿ ಆರಂಭಿಸಿದೆ. ರಾಮನಗರ, ಚಿಕ್ಕಮಗಳೂರು, ಕೋಲಾರ ಮತ್ತು ಬೆಂಗಳೂರು ನಗರ‌ದ ಕಾಂಗ್ರೆಸ್ ನಾಯಕರೊಡನೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಭೆ ನಡೆಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕರಾದ ಎಸ್. ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧ್ರುವನಾರಾಯಣ, ಈಶ್ವರ ಖಂಡ್ರೆ ಹಾಗೂ ರಾಮಲಿಂಗಾ ರೆಡ್ಡಿ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

English summary
Vokkaliga leader from Tumakuru and JD(S) MLC BEML Kantharaju announced that he will join Congress soon. Set back for JD(S) ahead of the election to 25 Legislative Council seats in January 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X