ಡಿ.ಕೆ.ಸುರೇಶ್ ವಿರುದ್ಧ ಕುಣಿಗಲ್ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

ತುಮಕೂರು, ಏಪ್ರಿಲ್ 04: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರುವ ತುಮಕೂರಿನ ಕುಣಿಗಲ್‌ನಲ್ಲಿ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಡಿ.ಕೆ.ಸುರೇಶ್ ಹಾಜರಿದ್ದ, ಮಾಜಿ ಶಾಸಕ ಡಿ.ನಾಗರಾಜಯ್ಯ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಜೆಡಿಎಸ್ ಸಭೆಯಲ್ಲಿ, ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ತಾವು ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸಭೆಯಲ್ಲಿಯೇ ಮುಖಂಡರಿಗೆ ಹೇಳಿದ್ದಾರೆ. ಈ ಸಮಯ ಕಾಂಗ್ರೆಸ್ ಮುಖಂಡರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

JDS party workers of Kunigal oppose to vote for congress candidate

ಜೆಡಿಎಸ್ ಮುಖಂಡರು ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರೂ ಸಹ, ಜೆಡಿಎಸ್ ಕಾರ್ಯಕರ್ತರು ಮುಖಂಡರೊಂದಿಗೆ ವಾಗ್ವಾದ ನಡೆಸಿದ್ದಾರೆ. ಡಿ.ಕೆ.ಸುರೇಶ್ ವಿರುದ್ಧವೂ ಹರಿಹಾಯ್ದಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಇದರಿಂದ ಉಂಟಾಗಿದೆ.

ಕುಣಿಗಲ್‌ನಲ್ಲಿ ಶಾಸಕ ರಂಗನಾಥ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿಕೊಂಡು ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ, ಪ್ರಭಾವ ಬಳಸಿ ಠಾಣೆಗಳನ್ನು ದೂರುಗಳನ್ನು ದಾಖಲಿಸಿದ್ದಾರೆ. ಹಿಂದಿನ ಶಾಸಕರ ಕೆಲವು ಯೋಜನೆಗಳನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು.

ಕುಮಾರಸ್ವಾಮಿ ಅವರು ಐದು ವರ್ಷ ಸಿಎಂ ಆಗಿರಬೇಕೆಂದರೆ ಕಾಂಗ್ರೆಸ್‌-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಒಬ್ಬರಿಗೊಬ್ಬರು ಬೆಂಬಲ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಕಾಂತರಾಜು ಅವರು ಹೇಳಿದರು. ಇದು ಕಾರ್ಯಕರ್ತರನ್ನು ಇನ್ನಷ್ಟು ಕೆರಳಿಸಿತು.

ಕೊನೆಗೆ ಮಾತನಾಡಿದ ನಾಗರಾಜಯ್ಯ ಅವರು, ನಾವು ಹಲವು ದಶಕಗಳಿಂದ ಕಾಂಗ್ರೆಸ್ ವಿರುದ್ಧವೇ ಹೋರಾಡಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ, ಆದರೆ ದೇವೇಗೌಡ ಅವರು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕಾರಣದಿಂದ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ, ಅವರಿಗೆ ಗೌರವ ಕೊಟ್ಟು ನಾವು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಬೇಕು ಎಂದರು. ಆ ನಂತರ ಜೆಡಿಎಸ್ ಕಾರ್ಯಕರ್ತರು ಶಾಂತರಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+