Get Updates
Get notified of breaking news, exclusive insights, and must-see stories!

ಶಾಸಕರಿಗೇ ತಿಳಿಯದೇ ಗುಬ್ಬಿಯಲ್ಲಿ ಜೆಡಿಎಸ್ ಸಮಾವೇಶ!

ತುಮಕೂರು, ಅಕ್ಟೋಬರ್ 18; ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರ ಮತ್ತೆ ಸುದ್ದಿಯಲ್ಲಿದೆ. ಕ್ಷೇತ್ರ ಜೆಡಿಎಸ್ ಪಕ್ಷದ ವಶದಲ್ಲಿದೆ. ಮಾಜಿ ಸಚಿವ ಎಸ್. ಆರ್. ಶ್ರೀನಿವಾಸ್ ಕ್ಷೇತ್ರದ ಶಾಸಕರು. ಆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಹಲವು ಬಾರಿ ಕೇಳಿ ಬಂದಿದೆ. ಶಾಸಕರು ಸಹ ಹಲವು ಬಾರಿ ಈ ಕುರಿತು ಸ್ಪಷ್ಟನೆಗಳನ್ನು ನೀಡಿದ್ದಾರೆ. ಆದರೆ ಈಗ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಮತ್ತೊಮ್ಮೆ ಇದೇ ಚರ್ಚೆಯನ್ನು ಹುಟ್ಟುಹಾಕಿದೆ.

ಕ್ಷೇತ್ರದ ಶಾಸಕರಿಗೇ ತಿಳಿಯದೇ ಕ್ಷೇತ್ರದಲ್ಲಿ ಜೆಡಿಎಸ್‌ನ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಅಕ್ಟೋಬರ್ 25ರಂದು ಗುಬ್ಬಿ ಪಟ್ಟಣದ ಸರ್ಕಾರಿ ಮೈದಾನದಲ್ಲಿ ಜೆಡಿಎಸ್ ಪಕ್ಷದ ಸಮಾವೇಶವೊಂದು ಆಯೋಜನೆಗೊಂಡಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ಸಮಾವೇಶ ಉದ್ಘಾಟಿಸಲಿದ್ದಾರೆ.

ಗುಬ್ಬಿ ಕ್ಷೇತ್ರದ ಯುವ ಮುಖಂಡರಾದ ಬಿ. ಎಸ್.‌ ನಾಗರಾಜು ಈ ಸಮಾವೇಶ ಆಯೋಜನೆ ಮಾಡಿದ್ದಾರೆ. ಹಲವಾರು ಜೆಡಿಎಸ್ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಈ ಸಮಾವೇಶದ ಬಗ್ಗೆ ಸ್ಥಳೀಯ ಶಾಸಕರ ಎಸ್. ಆರ್. ಶ್ರೀನಿವಾಸ್‌ಗೆ ಯಾವುದೇ ಮಾಹಿತಿ ಇಲ್ಲ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್ ಪಕ್ಷ ಸೇರ್ಪಡೆ ಸಮಾವೇಶ

ಜೆಡಿಎಸ್ ಪಕ್ಷ ಸೇರ್ಪಡೆ ಸಮಾವೇಶ

ಗುಬ್ಬಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡರಾದ ಬಿ. ಎಸ್. ನಾಗರಾಜು ಪಕ್ಷ ಸೇರ್ಪಡೆಗಾಗಿ ಅಕ್ಟೋಬರ್ 25ರಂದು ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಅಧಿಕೃವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿರುವು ಕಾರ್ಯಕ್ರಮಕ್ಕೆ ತಾವುಗಳು ಆಗಮಿಸಿ ಗುಬ್ಬಿ ಕ್ಷೇತ್ರದ ಜನತೆಯ ಸೇವೆ ಮಾಡುವ ಕನಸಿನೊಂದಿಗೆ ಹೊಸ ರಾಜಕೀಯ ಹಾದಿಗೆ ಕಾಲಿಡುತ್ತಿರುವ ನನಗೆ ಬೆಂಬಲಿಸಿ ಆಶೀರ್ವದಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಬಿ. ಎಸ್. ನಾಗರಾಜು ಹೆಸರಿನಲ್ಲಿ ಆಹ್ವಾನ ಪತ್ರಿಕೆ ಪ್ರಕಟಿಸಲಾಗಿದೆ.

ಎಲ್ಲಿ ನಡೆಯಲಿದೆ ಸಮಾವೇಶ?

ಎಲ್ಲಿ ನಡೆಯಲಿದೆ ಸಮಾವೇಶ?

ಅಕ್ಟೋಬರ್ 25ರಂದು ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಕಾಲೇಜು ಮೈದಾನ, ಬಿ. ಎಸ್. ರಸ್ತೆ ಗುಬ್ಬಿಯಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ತಾಲೂಕು ಜೆಡಿಎಸ್ ಅಧ್ಯಕ್ಷರಾದ ಗುರು ರೇಣುಕಾರಾಧ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಎಸ್. ಆರ್. ಶ್ರೀನಿವಾಸ್, ಗೌರಿ ಶಂಕರ್ ಮುಂತಾದವರು ಮುಖ್ಯ ಅತಿಥಿಗಳು ಎಂದು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಹಿತಿ ನೀಡಲಾಗಿದೆ.

ಯಾವ ಸಮಾವೇಶ ಎಂದ ಶಾಸಕರು?

ಯಾವ ಸಮಾವೇಶ ಎಂದ ಶಾಸಕರು?

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್.‌ ಶ್ರೀನಿವಾಸ್‌ಗೆ ಪಕ್ಷದ ಸಮಾವೇಶದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು ಮಾತನಾಡಿರುವ ಅವರು, "ಯಾವ ಸಮಾವೇಶ, ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ. ಕಾರ್ಯಕ್ರಮ ಆಯೋಜನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಆ ಸಮಾವೇಶ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಜೆಡಿಎಸ್ ಸಮಾವೇಶದ ಬಗ್ಗೆ ನನಗೆ ಮಾಹಿತಿಯೇ ಇಲ್ಲ" ಎಂದು ಹೇಳಿದ್ದಾರೆ.

ನಾನು ಕ್ಷೇತ್ರದಲ್ಲಿ ಇರಲಿಲ್ಲ

ನಾನು ಕ್ಷೇತ್ರದಲ್ಲಿ ಇರಲಿಲ್ಲ

"13 ದಿನದಿಂದ ನಾನು ಕ್ಷೇತ್ರದಲ್ಲಿ ಇಲ್ಲ. ಚಿಕಿತ್ಸೆಗಾಗಿ ತೆರಳಿದ್ದೆ. ಸಮಾವೇಶ ನಡೆಯುತ್ತಿರುವುದು. ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿರುವುದು ಗೊತ್ತಿಲ್ಲ. ಜೆಡಿಎಸ್ ಕಾರ್ಯಕ್ರಮದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಅಥವಾ ರಾಜ್ಯಾಧ್ಯಕ್ಷರ ಬಳಿ ಮಾಹಿತಿ ಇರುತ್ತದೆ. ಅವರೇ ಹೇಳಬೇಕು" ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿದ್ದಾರೆ.

ಜೆಡಿಎಸ್ ಬಿಡಲಿದ್ದಾರೆ ಎಂಬ ಸುದ್ದಿ

ಜೆಡಿಎಸ್ ಬಿಡಲಿದ್ದಾರೆ ಎಂಬ ಸುದ್ದಿ

ಎಸ್. ಆರ್. ಶ್ರೀನಿವಾಸ್ ಜೆಡಿಎಸ್ ಬಿಡಲಿದ್ದಾರೆ ಎಂಬ ಸುದ್ದಿ ಹಲವು ಬಾರಿ ಕೇಳಿ ಬಂದಿದೆ. ಶಾಸಕರು ಸಹ ಹಲವು ಬಾರಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ "ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ನನ್ನ ಅಳಿಯನ ಮೂಲಕ ನನ್ನನ್ನು ಬಿಜೆಪಿಗೆ ಸೆಳೆಯುವ ಕೆಲಸ ಮಾಡಿದರು. ನನ್ನನ್ನು ಯಡಿಯೂರಪ್ಪ ಕರೆಸಿ ಮಾತನಾಡಿದರು. ರಾಜಕೀಯ ನಿವೃತ್ತಿ ಹೊಂದುತ್ತೇನೆಯೇ ವಿನಃ ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಬರೋಲ್ಲ ಅಂದಿದ್ದೆ" ಎಂದು ಎಸ್. ಆರ್. ಶ್ರೀನಿವಾಸ್ ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+