ತುಮಕೂರಿನಲ್ಲಿ ಅಕ್ಟೋಬರ್ 20ರಂದು ಉದ್ಯೋಗ ಮೇಳ
ತುಮಕೂರು, ಅಕ್ಟೋಬರ್ 16 : ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ್ 20ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಮಿನಿ ಉದ್ಯೋಗ ಮೇಳೆದಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಖಾಲಿಯಿರುವ ಸ್ಟಾಫ್‍ನರ್ಸ್ ಹುದ್ದೆಗೆ ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ 9886999108 ಸಂಖ್ಯೆಗೆ ಕರೆ ಮಾಡಬಹುದಾಗಿದೆ. [ಪೊಲೀಸ್ ನೇಮಕಾತಿ ಆದೇಶ ಓದಿ]

ಬೆಂಗಳೂರಿನ ಏಟ್ರಿಯಾ ಕನ್ವರ್‍ಜೆನ್ಸಿ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸುಮಾರು 200ಕ್ಕೂ ಹೆಚ್ಚಿನ ವಿವಿಧ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ಪಿಯುಸಿ/ಪದವೀಧರರು/ಐಟಿಐ ಮತ್ತು ಡಿಪ್ಲೋಮಾ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 080-67695555 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಅಕ್ಟೋಬರ್ 20ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.[ದಾವಣಗೆರೆ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]
ವಿಳಾಸ : ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ವಿದ್ಯೋದಯ ಲಾ ಕಾಲೇಜು ಹಿಂಭಾಗ,
4ನೇ ಕ್ರಾಸ್, ಗಾಂಧಿನಗರ, ತುಮಕೂರು.
ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ : ದಾವಣಗೆರೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (village accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 4, 2015.












Click it and Unblock the Notifications