Tumkur Rural Constituency: ತುಮಕೂರು ಗ್ರಾಮಾಂತರದಲ್ಲಿ ಈ ಬಾರಿ ತ್ರಿಕೋನ ಪೈಪೋಟಿ
2008 ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಬೆಳ್ಳಾವಿ ಕ್ಷೇತ್ರ ತನ್ನ ಅಸ್ತಿತ್ವ ಕಳೆದುಕೊಂಡಿತ್ತು. ಬೆಳ್ಳಾವಿ ಬದಲಿಗೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರವನ್ನು ರಚಿಸಲಾಗಿದೆ.
ತುಮಕೂರು, ಮಾರ್ಚ್. 20: ರಾಜ್ಯದ 2ನೇ ಅತೀ ದೊಡ್ಡ ಜಿಲ್ಲೆ ಕಲ್ಪತರು ನಾಡನ್ನು ಬಿಜೆಪಿ, ಕಾಂಗ್ರೆಸ್ ತಮ್ಮದೆ ಆದ ಭದ್ರಕೋಟೆ ಮಾಡಿಕೊಂಡಿದ್ದವು. ಆದರೆ, ಕಾಲನಂತರ ಬಿಜೆಪಿ ಅದನ್ನು ತನ್ನ ಕೋಟೆಯನ್ನಾಗಿಸಿಕೊಳ್ಳುವತ್ತ ಜಯ ಸಾಧಿಸಿದೆ. ಜಿಲ್ಲೆಯ 11 ವಿಧಾನ ಸಭಾ ಕ್ಷೇತ್ರಗಳ ಪೈಕಿ ಈಗ ಬಿಜೆಪಿ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪಾರುಪತ್ಯಕ್ಕೆ ಜೆಡಿಎಸ್ ಕಳೆದ ಚುನಾವಣೆಯಲ್ಲಿ ಕಡಿವಾಣ ಹಾಕಿದೆ.
ಆದರೆ, ಈ ಬಾರಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜಾತ್ಯಾತೀತ ಜನತಾದಳದ ನಡುವೆ ಮಾತ್ರ ಸ್ಪರ್ಧೆಯಿಲ್ಲ. ಕಾಂಗ್ರೆಸ್ ಕೂಡ ಇಲ್ಲಿ ಸ್ಥಾನ ಗೆಲ್ಲಲ್ಲು ರಣತಂತ್ರ ಹೂಡುತ್ತಿದೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಅಧಿಕಾರ ಕಳೆದುಕೊಂಡು ಹತಾಶೆ ಅನುಭವಿಸಿರುವ ಕಾಂಗ್ರೆಸ್ ಈ ಬಾರಿ ಎರಡು ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಪಣತೊಟ್ಟಿದೆ.

ತುಮಕೂರು ತಾಲೂಕಿನಲ್ಲಿ ಈ ಹಿಂದೆ ಕೋರ, ಹೆಬ್ಬೂರು, ಗೂಳೂರು, ಬೆಳ್ಳಾವಿ ಕ್ಷೇತ್ರಗಳು ಇದ್ದವು. ಕ್ಷೇತ್ರಗಳ ಪುನರ್ ವಿಂಗಡಣೆ ನಡೆದ ಸಂದರ್ಭಗಳಲ್ಲಿ ಕ್ಷೇತ್ರಗಳನ್ನು ಬದಲಿಸುತ್ತಾ ಬರಲಾಗಿದ್ದು, 2008 ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಬೆಳ್ಳಾವಿ ಕ್ಷೇತ್ರ ತನ್ನ ಅಸ್ತಿತ್ವ ಕಳೆದುಕೊಂಡಿತ್ತು. ಬೆಳ್ಳಾವಿ ಬದಲಿಗೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರವನ್ನು ರಚಿಸಲಾಗಿದೆ.
ಶ್ರೀ ಕ್ಷೇತ್ರ ಸಿದ್ದಗಂಗಾ ಮಠ, ಗೂಳೂರು ಗಣೇಶ ಮತ್ತು ಕೈದಾಳ ಕ್ಷೇತ್ರಗಳಿರುವ ತುಮಕೂರು ಗ್ರಾಮಾಂತರ ಕ್ಷೇತ್ರ ಪುನರ್ ವಿಂಗಡಣೆಯ ಎರಡು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ. ಸುರೇಶ್ ಗೌಡ ಗೆಲುವು ಸಾಧಿಸಿಕೊಂಡು ಬಂದಿದ್ದರು. ಆದರೆ, ಕಳೆದ ವಿಧಾನಭಾ ಚುನಾವಣೆ ಅಂದರೆ 2018ರಲ್ಲಿ ಡಿ.ಸಿ.ಗೌರಿಶಂಕರ್ ಜೆಡಿಎಸ್‌ನಿಂದ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯೂ ಜೆಡಿಎಸ್‌ನಿಂದ ಹಾಲಿ ಶಾಸಕ ಡಿ.ಸಿ.ಗೌರಿಶಂಕರ್ ಕಣಕ್ಕಿಳಿಯುವುದು ಖಚಿತವಾಗಿದೆ.

ಹಾಲಿ ಶಾಸಕ ಡಿ.ಸಿ.ಗೌರಿಶಂಕರ್ ಈ ಬಾರಿಯೂ ಕ್ಷೇತ್ರದಲ್ಲಿ ತೆನೆಯನ್ನು ಅಧಿಕಾರಕ್ಕೆ ತರಬೇಕು ಎಂದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಬಿಎಸ್‌ಸಿ ಪದವೀಧರರಾದ ಗೌರಿ ಶಂಕರ್ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಂಡವರು. 2004ರಲ್ಲಿ ನಡೆದ ತ್ಯಾಮಗೊಂಡಲ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಜಯಗಳಿಸುವ ಮೂಲಕ ರಾಜಕೀಯಕ್ಕೆ ಪ್ರವೇಶ ಪಡೆದರು. ಮೂರು ವರ್ಷಗಳ ಕಾಲ ಜಿಲ್ಲಾ ಪಂಚಾಯತಿ ಸದಸ್ಯರಾಗಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೆಲಸ ಮಾಡಿದರು.
2018 ವಿಧಾನಸಭಾ ಚುನಾವಣೆಯಲ್ಲಿ 82,740 ಮತಗಳನ್ನು ಪಡೆದು ಭರ್ಜರಿ ಜಯ ಗಳಿಸಿರುವ ಅವರು, 2013ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕೇವಲ 750 ಮತಗಳಿಂದ ಸೋಲು ಅನುಭವಿಸಿದ್ದರು. ಹೀಗಾಗಿಯೇ ಈ ಬಾರಿಯೂ ಬಿಜೆಪಿಗೆ ಅಧಿಕಾರ ಬಿಟ್ಟುಕೊಡಬಾರದು ಎಂಬ ಸಂಕಲ್ಪದಲ್ಲಿ ಕಳೆದ ಒಂದು ವರ್ಷದಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥ ಯಾತ್ರೆಯಲ್ಲಿನ ಬೆಂಬಲ ಇವರ ಪ್ರಚಾರಕ್ಕೆ ಮತ್ತಷ್ಟು ಉತ್ಸಾಹ ನೀಡಿದೆ. ಆದರೆ, 2018ರ ಚುನಾವಣೆಯಲ್ಲಿ ಅಕ್ರಮ ದೂರಿನ ತೀರ್ಪಿನ ಆಧಾರದ ಮೇಲೆ ಗೌರಿ ಶಂಕರ್ ಅವರ ಸ್ವರ್ಧೆ ನಿಂತಿದೆ.

ಆದರೆ, ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಕೂಡ ಪೈಪೋಟಿ ನೀಡುತ್ತಿದೆ. ಹೌದು, ಜೆಡಿಎಸ್‌ನ ಮಾಜಿ ಶಾಸಕ ಎಚ್. ನಿಂಗಪ್ಪ ಕಾಂಗ್ರೆಸ್ ಸೇರಿದ್ದು, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಕ್ಕವಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಇದರಿಂದ ಜೆಡಿಎಸ್‌ಮತಗಳು ಛಿದ್ರವಾಗುವ ಸಾಧ್ಯತೆಗಳಿವೆ. ಶಾಸಕ ಹೆಚ್. ನಿಂಗಪ್ಪ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂಗೆ ರಾಜೀನಾಮೆ ಪತ್ರ ರವಾನಿಸಿ, ನಾಯಕರ ವರ್ತನೆಯಿಂದ ಬೇಸರ ಎಂದು ಕಾರಣ ನೀಡಿದ್ದರು.
ಹೆಚ್. ನಿಂಗಪ್ಪ 2006ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 2013ರಲ್ಲಿ ಅವರಿಗೆ ಜೆಡಿಎಸ್ ಟಿಕೆಟ್ ಕೈ ತಪ್ಪಿತ್ತು. ಆಗ ಕೆಜೆಪಿಯಿಂದ ಕಣಕ್ಕಿಳಿದು 22,709 ಮತಗಳನ್ನು ಪಡೆದಿದ್ದರು. ಬಳಿಕ ಮತ್ತೆ ಜೆಡಿಎಸ್‌ಗೆ ವಾಪಸ್ ಆಗಿದ್ದರು. ಆದರೆ, 2018 ಚುನಾವಣೆಯಲ್ಲಿ ಜೆಡಿಎಸ್ ಡಿ.ಸಿ.ಗೌರಿಶಂಕರ್ ಅವರಿಗೆ ಟಿಕೆಟ್ ಘೋಷಿಸಿತ್ತು. ಈ ಬಾರಿ ಮಾಜಿ ಶಾಸಕ ಎಚ್. ನಿಂಗಪ್ಪ ಕಾಂಗ್ರೆಸ್ ಸೇರಿದ್ದು ಜೆಡಿಎಸ್‌ಗೆ ಟಕ್ಕರ್ ಕೊಡಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನು, ಬಿಜೆಪಿಯಿಂದ ಈ ಬಾರಿಯೂ ಮಾಜಿ ಶಾಸಕ ಬಿ. ಸುರೇಶ್ ಗೌಡ ಕಣಕ್ಕಿಳಿಯುವ ಸಾಧ್ಯತೆಯಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇವರಿಗೆ ಈ ಬಾರಿ ಮತ್ತೆ ಗೆಲುವು ಸಿಗಲಿದೆಯಾ ಎಂಬುದು ಕಾದು ನೋಡಬೇಕು. ಆದರೆ, ಮೂರನೇ ಬಾರಿಗೆ ಕ್ಷೇತ್ರದಲ್ಲಿ ಕೇಸರಿ ಬಾವುಟ ಹಾರಿಸಬೇಕು ಎಂದು ಬಿ. ಸುರೇಶ್ ಗೌಡ ಪ್ರಯತ್ನ ನಡೆಸುತ್ತಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರ ಪುನರ್ ವಿಂಗಡಣೆಯ ಮೊದಲು ಬೆಳ್ಳಾವಿ ಕ್ಷೇತ್ರ ಇತ್ತು. ಈ ಕ್ಷೇತ್ರದಿಂದ 1978ರಲ್ಲಿ ಜಿಎನ್‌ಪಿಯಿಂದ ಜಿ.ಎಸ್.ಶಿವನಂಜಪ್ಪ, 1983 ರಲ್ಲಿ ಕಾಂಗ್ರೆಸ್‌ನಿಂದ ಟಿ.ಎಚ್.ಹನುಮಂತರಾಯ, 1985 ರಲ್ಲಿ ಜೆಎನ್‌ಪಿಯಿಂದ ಸಿ.ಎನ್.ಭಾಸ್ಕರಪ್ಪ, 1989 ರಿಂದ 1999ರ ವರೆಗೆ ಕಾಂಗ್ರೆಸ್‌ನ ಆರ್.ನಾರಾಯಣ್ ಶಾಸಕರಾಗಿದ್ದರು. 2004 ರಲ್ಲಿ ಜೆಡಿಎಸ್‌ನಿಂದ ಕೆ.ಎನ್.ರಾಜಣ್ಣ ಶಾಸಕರಾಗಿದ್ದರು. ಪುನರ್‌ವಿಂಗಡಣೆಯ ಬಳಿಕ ಎರಡು ಬಾರಿ ಬಿಜೆಪಿಯ ಬಿ.ಸುರೇಶ್ ಗೌಡ ಶಾಸಕರಾಗಿದ್ದರು. 2018 ರಲ್ಲಿ ಜೆಡಿಎಸ್‌ನ ಡಿ.ಸಿ.ಗೌರಿಶಂಕರ್ 82,740 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭೆಯಲ್ಲಿ ಎಸ್‌ಸಿ ಮತದಾರರು ಸರಿಸುಮಾರು 41,696, ಎಸ್ಟಿ ಮತದಾರರು ಸರಿಸುಮಾರು 14,423 ರಷ್ಟಿದ್ದು, ಮುಸ್ಲಿಂ ಮತದಾರರು ಸರಿಸುಮಾರು 20,575 ಇದ್ದಾರೆ. ಗ್ರಾಮೀಣ ಮತದಾರರು ಸರಿಸುಮಾರು 2,01,720 ಆಗಿದೆ. ಒಟ್ಟು ಮತದಾರರು 2,02,352 ಮಂದಿಯಿದ್ದು, ಇದರಲ್ಲಿ ಪುರುಷರು 1,00,374 , ಮಹಿಳೆಯರು 1,01,961 ಮತ್ತು ಲೈಂಗಿಕ ಅಲ್ಪಸಂಖ್ಯಾತರು 17 ಮಂದಿ ನೊಂದಾಯಿಸಿಕೊಂಡಿದ್ದಾರೆ.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications