ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ ಎಚ್.ಡಿ.ಕುಮಾರಸ್ವಾಮಿ

|
Google Oneindia Kannada News

ತುಮಕೂರು, ಜನವರಿ 22 : ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರು ಅಂತ್ಯಕ್ರಿಯೆ ಮಂಗಳವಾರ ಸಂಜೆ ನಡೆಯಿತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಮಂಗಳವಾರ ಸಂಜೆ ಗೋಸಲ ಸಿದ್ದೇಶ್ವರ ವೇದಿಕೆಯಿಂದ ಕ್ರಿಯಾ ಸಮಾಧಿ ಕಟ್ಟಡದ ತನಕ ಶ್ರೀಗಳ ಅಂತಿಮ ಯಾತ್ರೆಯನ್ನು ರುದ್ರಾಕ್ಷಿ ರಥದಲ್ಲಿ ನಡೆಸಲಾಯಿತು. 400ಕ್ಕೂ ಅಧಿಕ ಸ್ವಾಮೀಜಿಗಳು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡರು.

ಸಿದ್ದಗಂಗಾ : ಗದ್ದುಗೆಯ ಗರ್ಭಗುಡಿಯೊಳಗೆ ಶ್ರೀಗಳು ಲೀನಸಿದ್ದಗಂಗಾ : ಗದ್ದುಗೆಯ ಗರ್ಭಗುಡಿಯೊಳಗೆ ಶ್ರೀಗಳು ಲೀನ

ಅಂತಿಮ ಧಾರ್ಮಿಕ ಕಾರ್ಯಕ್ರಮಕ್ಕೂ ಮೊದಲು ಕರ್ನಾಟಕ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಂತಿಮವಾಗಿ ಪುಷ್ಪ ನಮನವನ್ನು ಸಲ್ಲಿಸಿದರು.

Karnataka CM paid last tribute to Shivakumara swami

ಪೊಲೀಸರು ರಾಷ್ಟ್ರಧ್ವಜ ಹೊದಿಸಿ, ಕುಶಾಲ ತೋಪುಗಳನ್ನು ಹಾರಿಸಿ ಸಕಲ ಸರ್ಕಾರಿ ಗೌರವ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.

ಸರ್ಕಾರವೇ ಸಿದ್ದಗಂಗಾ ಶ್ರೀಗಳ ಮುಂದೆ ಕ್ಷಮಾಪಣೆ ಕೇಳಿತ್ತು ಆಗೊಮ್ಮೆಸರ್ಕಾರವೇ ಸಿದ್ದಗಂಗಾ ಶ್ರೀಗಳ ಮುಂದೆ ಕ್ಷಮಾಪಣೆ ಕೇಳಿತ್ತು ಆಗೊಮ್ಮೆ

ಶಿವಕುಮಾರ ಶ್ರೀಗಳ ಅಂತಿಮ ಕ್ರಿಯಾವಿಧಿಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಮಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಅವರು ಪುಷ್ಪ ನಮನ ಸಲ್ಲಿಸಿದರು.

English summary
Tumakuru Siddaganga mutt Shivakumara swamiji laid to rest on January 22, 2019. Karnataka Chief Minister H.D.Kumaraswamy paid last tribute to Shivakumara swami.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X