ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು : ಬಿಜೆಪಿಗೆ ಹಿನ್ನಡೆ, ಕಾಂಗ್ರೆಸ್‌ ಸೇರಿದ ಶಿವಣ್ಣ ಬೆಂಬಲಿಗರು!

|
Google Oneindia Kannada News

ತುಮಕೂರು, ಮೇ 02 : ಕರ್ನಾಟಕ ವಿಧಾನಸಭೆ ಚುನಾವಣೆಗೆ 8 ದಿನಗಳು ಬಾಕಿ ಇದೆ. ತುಮಕೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಸಚಿವ ಸೊಗಡು ಶಿವಣ್ಣ ಬೆಂಬಲಿಗರು ಕಾಂಗ್ರೆಸ್ ಸೇರಿದ್ದಾರೆ.

ಗುರುವಾರ ಸೊಗಡು ಶಿವಣ್ಣ ಅವರ ಹಲವು ಬೆಂಬಲಿಗರು ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ರಫೀಕ್ ಅಹಮದ್ ಸಮ್ಮುಖದಲ್ಲಿ ಪಕ್ಷ ಸೇರಿದರು. ಈ ಬಾರಿ ಚುನಾವಣೆಯಲ್ಲಿ ರಫೀಕ್ ಅಹಮದ್ ಬೆಂಬಲಿಸುವುದಾಗಿ ಘೋಷಣೆ ಮಾಡಿದರು.

ತುಮಕೂರು : ಸೊಗಡು ಶಿವಣ್ಣಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರಣ ಬಹಿರಂಗ!ತುಮಕೂರು : ಸೊಗಡು ಶಿವಣ್ಣಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರಣ ಬಹಿರಂಗ!

'ಈ ಬಾರಿಯ ಚುನಾವಣೆಯಲ್ಲಿ ತಟಸ್ಥವಾಗಿರುವೆ. ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ' ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಳೆದ ವಾರ ಘೋಷಣೆ ಮಾಡಿದ್ದರು. ಇದರಿಂದಾಗಿ ಬಿಜೆಪಿಗೆ ಚುನಾವಣೆ ಸಮಯದಲ್ಲಿ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ.

Karnataka elections : Sogadu Shivanna supporters joins Congress

ಜೆಡಿಎಸ್, ಕಾಂಗ್ರೆಸ್ ಪೈಪೋಟಿ : ಸೊಗಡು ಶಿವಣ್ಣ ಬಿಜೆಪಿಯಿಂದ ದೂರವಾಗುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್‌ ಶಿವಣ್ಣ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುತ್ತಿವೆ. ಈ ಬೆಳವಣಿಗೆ ತುಮಕೂರು ನಗರ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತುಮಕೂರು ಕ್ಷೇತ್ರ: ಅಂಗೈ ಅಗಲದ ನಗರಕ್ಕೆ ಮೂಲಸೌಕರ್ಯ ಮೈನಸ್ತುಮಕೂರು ಕ್ಷೇತ್ರ: ಅಂಗೈ ಅಗಲದ ನಗರಕ್ಕೆ ಮೂಲಸೌಕರ್ಯ ಮೈನಸ್

'ಸೊಗಡು ಶಿವಣ್ಣ ಮತ್ತು ಅವರ ಬೆಂಬಲಿಗರು ನಮ್ಮ ಜೊತೆ ಇದ್ದಾರೆ. ಶಿವಣ್ಣ ಅವರ ಮನೆಗೆ ಹೋಗಿ ನಾನು ಮತಯಾಚನೆ ಮಾಡಿದ್ದೇನೆ. ಅವರು ನನಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ' ಎಂದು ಡಾ.ರಫೀಕ್ ಹೇಳಿದ್ದಾರೆ.

'ಸೊಗಡು ಶಿವಣ್ಣ ಜೆಡಿಎಸ್ ವರಿಷ್ಠರ ಜೊತೆ ಸಂಪರ್ಕದಲ್ಲಿದ್ದಾರೆ' ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದರು. 'ಬಿಜೆಪಿ ಅವರನ್ನು ಕಡೆಗಣಿಸಿದೆ, ನೊಂದಿರುವ ಅವರು ಪಕ್ಷದ ಜೊತೆ ಸಂಪರ್ಕದಲ್ಲಿದ್ದಾರೆ' ಎಂದು ಶರವಣ ಹೇಳಿದ್ದರು.

ಸೊಗಡು ಶಿವಣ್ಣ ತುಮಕೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ತುಮಕೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಜ್ಯೋತಿ ಗಣೇಶ್ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದಾಗಿ ಅಸಮಾಧಾನಗೊಂಡಿರುವ ಅವರು ಚುನಾವಣೆಯಲ್ಲಿ ತಟಸ್ಥವಾಗಿರುವುದಾಗಿ ಘೋಷಿಸಿದ್ದಾರೆ.

English summary
Former Minister and senior BJP leader Sogadu Shivanna announced that, he decided to remain neutral in the Karnataka assembly elections 2018. His supporters joined Congress and announced support for Tumakuru city constituency Congress candidate Dr. Rafeeq Ahmed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X