ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಧಾನಿ ಮೋದಿಯವರೇ, ನಿಮ್ಮನ್ನು ಸಿದ್ದಗಂಗಾ ಪವಿತ್ರಭೂಮಿ ಕ್ಷಮಿಸದು

|
Google Oneindia Kannada News

ಬೆಂಗಳೂರು, ಡಿ 2: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ, ಹಿರಿಯ ಶ್ರೀಗಳ ಗದ್ದುಗೆಯ ದರ್ಶನ ಪಡೆದಿದ್ದಾರೆ.

ಸಿದ್ದಗಂಗಾ ಮಠದ ಆವರಣದಲ್ಲಿ ಪ್ರಧಾನಿ ಮೋದಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ್ದಾರೆ. ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ, ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೋದಿ ತುಮಕೂರು ರ‍್ಯಾಲಿ ಜವಾಬ್ದಾರಿಯಿಂದ ಬಿಎಸ್ವೈ ಪರಮಾಪ್ತ ದೂರ..ದೂರ.. ಮೋದಿ ತುಮಕೂರು ರ‍್ಯಾಲಿ ಜವಾಬ್ದಾರಿಯಿಂದ ಬಿಎಸ್ವೈ ಪರಮಾಪ್ತ ದೂರ..ದೂರ..

ಈ ಬಗ್ಗೆ ಅವರು ಮಾಡಿರುವ ಟ್ವೀಟ್ ಹೀಗಿದೆ, "ತುಮಕೂರಿನ‌‌ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ".

Karnataka Opposition Leader Siddaramaiah Tweet On PM Modi Tumakuru Visit

"ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ @narendramodi ಅವರೇ, ನಿಮ್ಮನ್ನು ಆ ಪವಿತ್ರ ನೆಲ‌ ಕ್ಷಮಿಸದು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಸ್ವಚ್ಚ ಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ?"

"@narendramodi ಅವರೇ, ಈ ಮಾಹಿತಿಯನ್ನು @BSYBJP ಅವರನ್ನೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ. #ಉತ್ತರಕೊಡಿಮೋದಿ" ಎನ್ನುವ ಇನ್ನೊಂದು ಟ್ವೀಟ್ ಅನ್ನು ಸಿದ್ದರಾಮಯ್ಯ, ಮೋದಿ ಮತ್ತು ಬಿಜೆಪಿ ವಿರುದ್ದ ಮಾಡಿದ್ದಾರೆ.

English summary
Karnataka Opposition Leader Siddaramaiah Tweet On PM Modi Tumakuru Visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X