ಶೈಕ್ಷಣಿಕ ವರ್ಷದ ಶಾಲೆಗಳು ಆರಂಭ- ಶಿಕ್ಷಣ ಸಚಿವರಿಂದ ಶ್ರಮದಾನ
ತಿಪಟೂರು, ಮೇ15: ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಮೇ 16 ಶಾಲೆಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಶೈಕ್ಷಣಿಕ ವರ್ಷ ಆರಂಭಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ: 'ಮೇ 16 ರಂದು ರಾಜ್ಯದಾದ್ಯಂತ ಶಾಲೆಗಳು ಆರಂಭವಾಗುತ್ತವೆ. ಸೋಮವಾರ ಮಧ್ಯಾಹ್ನ 12.30ಕ್ಕೆ ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಲಿಕಾ ಚೇತರಿಕೆ, 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಿದ್ದಾರೆ' ಎಂದು ಸಚಿವರು ಮಾಹಿತಿ ನೀಡಿದರು.
ಶಾಲೆಗಳಿಗೆ ಪಠ್ಯಪುಸ್ತಕ ಪೂರೈಕೆ: ಕೋವಿಡ್-19 ಹಿನ್ನೆಲೆಯಲ್ಲಿ ಕಲಿಕೆಯಲ್ಲಿ ಉಂಟಾಗಿರುವ ಹಿನ್ನಡೆ ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಂಬಂಧ ಶಿಕ್ಷಕರಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ. ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲಾಗುತ್ತಿದೆ' ಎಂದು ಸಚಿವರು ತಿಳಿಸಿದರು.

ಮಕ್ಕಳಿಗೆ ಬಿಸಿಯೂಟ:
'ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಆರಂಭಿಸಲಾಗುತ್ತದೆ. ಕರ್ನಾಟಕ ಸಾರಿಗೆ ನಿಗಮದ ಬಸ್‌ಗಳಲ್ಲಿ ಶಾಲೆಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಪಾಸ್ ಪಡೆಯುವವರೆಗೆ ಹಿಂದಿನ ವರ್ಷ ವಿತರಿಸಲಾಗಿರುವ ವಿದ್ಯಾರ್ಥಿ ಪಾಸ್‌ಗಳನ್ನು ಪರಿಗಣಿಸಲು ಸಾರಿಗೆ ನಿಗಮದಿಂದ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ' ಎಂದು ಸಚಿವರು ತಿಳಿಸಿದರು.
ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ
'ರಾಜ್ಯದ ಬಹುತೇಕ ಶಾಲೆಗಳ ಶಿಕ್ಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಶ್ರಮದಾನ ಮಾಡಿ ಸ್ವಚ್ಛತಾ ಭಾಗಿಯಾಗಿದ್ದಾರೆ. ಬಣ್ಣ ಬಳಿಯುವುದು, ರಿಪೇರಿ ಸೇರಿದಂತೆ ಇನ್ನಿತರ ಅಗತ್ಯ ಕೆಲಸಗಳನ್ನು ಮಾಡಿಕೊಂಡು ಶಾಲೆಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಸಚಿವರು ತಿಳಿಸಿದರು.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಆವರಣ ಸ್ವಚ್ಛಗೊಳಿಸುವ ಶ್ರಮದಾನ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು.ರಂಗಾಪುರದ ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು, ಸ್ಥಳೀಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯೊಂದಿಗೆ ಶಾಲೆ ಆವರಣವನ್ನು ಸ್ವಚ್ಛಗೊಳಿಸಿ ಗಿಡಗಳನ್ನು ನೆಟ್ಟರು. ಮಕ್ಕಳನ್ನು ಸಂಭ್ರಮದಿಂದ ಶಾಲೆಗೆ ಸ್ವಾಗತಿಸಬೇಕು ಎಂದು ಕರೆ ನೀಡಿದರು.
ಶಾಲಾ ಆರಂಭಕ್ಕೆ ಶುಭಕೋರಿದ ಕೆರೆಗೋಡಿ ರಂಗಾಪುರ ಶ್ರೀ
ಶಾಲೆಗೆ ಭೇಟಿ ನೀಡಿದ ಸುಕ್ಷೇತ್ರ ಕೆರೆಗೋಡಿ-ರಂಗಾಪುರ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿ ಅವರು ಶಾಲಾರಂಭಕ್ಕೆ ಶುಭ ಹಾರೈಸಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications