ಸರಕಾರದಿಂದ ಮಠಗಳ ಸ್ವಾಧೀನಕ್ಕೆ ಕಿರಿಯ ಸಿದ್ದಲಿಂಗ ಸ್ವಾಮೀಜಿ ವಿರೋಧ

ತುಮಕೂರು, ಫೆಬ್ರವರಿ 7: ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿರುವ ಸರ್ಕಾರದ ಕ್ರಮಕ್ಕೆ ಸಿದ್ದಗಂಗಾ ಮಠದ ಕಿರಿಯ ಸಿದ್ದಲಿಂಗ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಕಾಯಿದೆಗೆ ಒಳಪಡಿಸಲು ಸಾಧ್ಯವಿಲ್ಲ. ಮಠಗಳಿಗೆ ತನ್ನದೇ ಆದ ಅಸ್ತಿತ್ವ, ಸ್ವಾತಂತ್ರ್ಯ, ಆಚಾರ ವಿಚಾರಗಳಿವೆ. ಹಾಗಾಗಿ ಒಂದೇ ತೆಕ್ಕೆಗೆ ತರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆಯೆ ಮಠಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ತರಲು ವಿಫಲ ಯತ್ನ ನಡೆದಿತ್ತು. ಈಗ ಮತ್ತೆ ಆ ವಿಚಾರವನ್ನು ಕೈಗೆತ್ತಿಕೊಂಡಿದ್ದು ಉಚಿತವಲ್ಲ ಎಂದು ಅವರು ಹೇಳಿದ್ದಾರೆ.

Kiriya Siddaganga Swamiji opposes acquisition of mutt’s by govt

ಅಲ್ಲದೆ ರಾಜ್ಯದ ಎಲ್ಲಾ ಮಠದ ಸ್ವಾಮೀಜಿಗಳು ಸಭೆ ಸೇರೆ ಚರ್ಚೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡುತ್ತೇವೆ ಎಂದು ಸಿದ್ದಗಂಗಾ ಕಿರಿಯ ಶ್ರೀ ಸಿದ್ದಲಿಂಗಸ್ವಾಮಿಜಿ ಪ್ರತಿಕ್ರಿಯಿಸಿದ್ದಾರೆ.

ಇದೇ ರೀತಿಯ ಪ್ರತಿಕ್ರಿಯೆಯನ್ನು ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥರೂ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+