ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ಕಾಂಗ್ರೆಸ್ ಬಂಡಾಯ ಶಮನ : ರಾಜಣ್ಣ ನಾಮಪತ್ರ ವಾಪಸ್!

|
Google Oneindia Kannada News

ತುಮಕೂರು, ಮಾರ್ಚ್ 28 : ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿದ್ದ ಎಸ್.ಪಿ.ಮುದ್ದಹನುಮೇಗೌಡ ಮತ್ತು ಕೆ.ಎನ್.ರಾಜಣ್ಣ ಅವರು ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಇಬ್ಬರು ನಾಯಕರು ನಾಮಪತ್ರ ವಾಪಸ್ ಪಡೆಯಲು ಒಪ್ಪಿಗೆ ನೀಡಿದರು. ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಕಣದಲ್ಲಿದ್ದಾರೆ.

ತುಮಕೂರಿನಿಂದ ಕೆ.ಎನ್.ರಾಜಣ್ಣ ಕಣಕ್ಕೆತುಮಕೂರಿನಿಂದ ಕೆ.ಎನ್.ರಾಜಣ್ಣ ಕಣಕ್ಕೆ

ಮಧುಗಿರಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ನಾಮಪತ್ರವನ್ನು ವಾಪಸ್ ಪಡೆಯಲು ಮಾ.29 ಕೊನೆಯ ದಿನವಾಗಿದ್ದು, ಏಪ್ರಿಲ್ 18ರಂದು ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ತಿರಸ್ಕಾರಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ತಿರಸ್ಕಾರ

ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿರುವ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಜಿ.ಎಸ್.‌ಬಸವರಾಜ್ ಅಭ್ಯರ್ಥಿಯಾಗಿದ್ದಾರೆ. ಆದರೆ, ದೇವೇಗೌಡರ ವಿರುದ್ಧ ಇಬ್ಬರು ಕಾಂಗ್ರೆಸ್ ನಾಯಕರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರವನ್ನು ಹಾಕಿದ್ದರು. ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿತ್ತು.

ತುಮಕೂರು ಲೋಕಸಭಾ ಕ್ಷೇತ್ರದ ಪರಿಚಯ

ಸಿದ್ದರಾಮಯ್ಯ ಸಂಧಾನ

ಸಿದ್ದರಾಮಯ್ಯ ಸಂಧಾನ

ಗುರುವಾರ ಸಿದ್ದರಾಮಯ್ಯ ನಿವಾಸದಲ್ಲಿ ಕೆ.ಎನ್.ರಾಜಣ್ಣ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಅವರ ಮನವೊಲಿಸಲಾಗಿದ್ದು ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರವನ್ನು ವಾಪಸ್ ಪಡೆಯಲು ಒಪ್ಪಿದ್ದಾರೆ.

ನಾಯಕರ ವಿರುದ್ಧ ಅಸಮಾಧಾನ

ನಾಯಕರ ವಿರುದ್ಧ ಅಸಮಾಧಾನ

ಕಾಂಗ್ರೆಸ್‌-ಜೆಡಿಎಸ್ ಮೈತ್ರಿಯಂತೆ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು. ಕ್ಷೇತ್ರದ ಹಾಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಇದರಿಂದಾಗಿ ಮುದ್ದಹನುಮೇಗೌಡ ಮತ್ತು ಕೆ.ಎನ್.ರಾಜಣ್ಣ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದರು.

ನಾಮಪತ್ರ ಸಲ್ಲಿಸಿದ್ದರು

ನಾಮಪತ್ರ ಸಲ್ಲಿಸಿದ್ದರು

'ನಾನು ಕಾಂಗ್ರೆಸ್ ಉಳಿಸಲು ಏನು ಬೇಕೋ ಅದನ್ನು ಮಾಡುತ್ತೇನೆ. ತುಮಕೂರು ಕ್ಷೇತ್ರದಿಂದ ನಾನು ನಾಮಪತ್ರ ಸಲ್ಲಿಸುತ್ತೇನೆ' ಎಂದು ಕೆ.ಎನ್.ರಾಜಣ್ಣ ಹೇಳಿದ್ದರು. ಹೇಳಿದ ಮಾತಿನಂತೆಯೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಕಾಂಗ್ರೆಸ್‌ ನಾಯಕರಿಗೆ ಬಿಸಿತುಪ್ಪ

ಕಾಂಗ್ರೆಸ್‌ ನಾಯಕರಿಗೆ ಬಿಸಿತುಪ್ಪ

ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಸಿದ್ದರು. ಆದರೆ, ಇಬ್ಬರು ಕಾಂಗ್ರೆಸ್ ನಾಯಕರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಬಿಸಿತುಪ್ಪವಾಗಿತ್ತು. ಈಗ ಇಬ್ಬರು ನಾಯಕರ ಮನವೊಲಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಎಸ್.ಪಿ.ಮುದ್ದಹನುಮೇಗೌಡ

ಎಸ್.ಪಿ.ಮುದ್ದಹನುಮೇಗೌಡ

ತುಮಕೂರು ಕ್ಷೇತ್ರದ ಹಾಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದರು. ಅವರು ಸಹ ನಾಮಪತ್ರವನ್ನು ವಾಪಸ್ ಪಡೆಯಲು ಒಪ್ಪಿಗೆ ನೀಡಿದ್ದಾರೆ.

English summary
Madhugiri former Congress MLA K.N.Rajanna decided to withdraw nomination form Tumakuru Lok sabha seat. He is upset after Tumakuru seat handover to JD(S). So he field nomination as Congress rebel candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X