ಕೊರಟಗೆರೆ ಕ್ಷೇತ್ರದ ಚುನಾವಣೆ ಫಲಿತಾಂಶ 2023: ಜಿ. ಪರಮೇಶ್ವರ್ 'ಕೈ' ಹಿಡಿದ ಕೊರಟಗೆರೆ ಮತದಾರ
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಸರಳ ಬಹುಮತ ಪಡೆದಿದೆ.
ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ಅವರು ಜೆಡಿಎಸ್‌ನ ಪಿಆರ್ ಸುಧಾಕರ್ ಲಾಲ್ ವಿರುದ್ಧ 19000 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಬಿಎಚ್ ಅನಿಲ್‌ಕುಮಾರ್ ಸಹ ಸೋಲು ಕಂಡಿದ್ದಾರೆ.

ಇನ್ನು ರಾಜ್ಯದ ಹೈ-ವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸ್ಪರ್ಧಿಸಿರುವುದು ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ. ಸಿಎಂ ಹುದ್ದೆಯ ರೇಸ್‌ನಲ್ಲಿರುವ ಜಿ. ಪರಮೇಶ್ವರ್ ಅವರಿಗೆ ಕೊರಟಗೆರೆ ಮತದಾರ ಮಣೆ ಹಾಕುತ್ತಾರಾ ಎಂದು ನೋಡಬೇಕಿದೆ.
ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹಾಲಿ ಶಾಸಕ ಜಿ. ಪರಮೇಶ್ವರ್ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಜಿ. ಅನಿಲ್ ಕುಮಾರ್ ಕಣಕ್ಕಿಳಿದಿದ್ದಾರೆ. ಇನ್ನು ಜೆಡಿಎಸ್‌ನಿಂದ ಸುಧಾಕರ್ ಲಾಲ್ ಅವರು ಮತ್ತೆ ಎದುರಾಳಿಯಾಗಿದ್ದಾರೆ.

ಕಳೆದ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕೊರಟಗೆರೆ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡು ಬಾರಿ ಹಾಗೂ ಜೆಡಿಎಸ್ ಒಂದು ಬಾರಿ ಗೆಲುವು ಸಾಧಿಸಿವೆ. ಆದರೆ ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
1999 ಮತ್ತು 2004ರ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಸಿ. ಚನ್ನಿಗಪ್ಪ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ಜೆಡಿಎಸ್‌ನ ಚಂದ್ರಯ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ಡಾ. ಜಿ. ಪರಮೇಶ್ವರ್ ಅವರು 11 ಸಾವಿರ ಮತಗಳ ಅಂತರದ ಗೆಲುವು ಸಾಧಿಸಿದ್ದರು.
2013ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್ ಲಾಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಅವರನ್ನು 18 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು. ಇದು ಮುಖ್ಯಮಂತ್ರಿ ಹುದ್ದಗೇರುವ ಪರಮೇಶ್ವರ್ ಅವರ ಆಸೆಗೆ ತಣ್ಣೀರೆರಚಿತ್ತು.
ಬಳಿಕ 2018ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್ ಲಾಲ್ ಅವರು 73,979 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಜಿ. ಪರಮೇಶ್ವರ್ 81,598 ಮತಗಳನ್ನು ಪಡೆದು, 7,619 ಮತಗಳ ಅಂತರದಲ್ಲಿ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದ್ದು ವೈ. ಹುಚ್ಚಯ್ಯ 12190 ಮತಗಳನ್ನು ಪಡೆದಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications