ಕುಪ್ಪೂರು ಗದ್ದುಗೆ ಪೀಠಾಧ್ಯಕ್ಷ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನ
ತುಮಕೂರು, ಸೆಪ್ಟೆಂಬರ್ 25: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕುಪ್ಪೂರು ಗದ್ದುಗೆ ಮಠಾಧಿಪತಿ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಶನಿವಾರ ಲಿಂಗೈಕ್ಯರಾಗಿದ್ದು, ಅವರಿಗೆ 47 ವರ್ಷ ವಯಸ್ಸಾಗಿತ್ತು.
ಕುಪ್ಪೂರು ಶ್ರೀಗಳ ಆರೋಗ್ಯದಲ್ಲಿ ಶುಕ್ರವಾರ ರಾತ್ರಿ ಏರಿಪೇರಾದ ಕಾರಣ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಬೆಳಿಗ್ಗೆ ಉಸಿರಾಟದ ತೀವ್ರ ಉಸಿರಾಟ ಸಮಸ್ಯೆ ಕಾಣಿಕೊಂಡಿದ್ದು, ಮತ್ತು ಸ್ಯಾಚುರೇಷನ್ ಲೆವೆಲ್ ಕುಸಿದಿತ್ತು.
ಶನಿವಾರ ಬೆಳಿಗ್ಗೆ 11ಕ್ಕೆ ಹೃದಯ ಸ್ಥಂಭನವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದರು.

ಚಿಕ್ಕನಾಯಕನಹಳ್ಳಿ ನೀರಾವರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸ್ವಾಮೀಜಿ ಅವರು ಸಾಕಷ್ಟು ಸಾಮಾಜಿಕ ಹೋರಾಟದಲ್ಲಿಯೂ ಭಾಗವಹಿಸಿದ್ದರು.
ನಟ ಸಂಚಾರಿ ವಿಜಯ್ ಸಾವನ್ನಪ್ಪಿದಾಗ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.












Click it and Unblock the Notifications