Get Updates
Get notified of breaking news, exclusive insights, and must-see stories!

ತುಮಕೂರು ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ

Recommended Video

      ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ ಪುಣ್ಯ ಸ್ಮರಣೆ ಇಂದು | Oneindia Kannada

      ತುಮಕೂರು, ಜನವರಿ 31: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯರಾಗಿರುವ ಡಾ, ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.

      ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ 11 ನೇ ದಿನ, ಇಂದು ಹಮ್ಮಿಕೊಂಡಿದ್ದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಬೆಳಗ್ಗೆ 5 ಗಂಟೆಯಿಂದ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ವಿವಿಧ ಮಠಾಧೀಶರು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಿದರು.

      ನಂತರ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಗದ್ದುಗೆಯಿಂದ ಗೋಸಲ ಸಿದ್ದೇಶ್ವರ ವೇದಿಕೆವರೆಗೆ ಭಾರೀ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.

      Lakhs of devotees congregate at Siddaganga mutt today

      ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಮರವಣಿಗೆಯಲ್ಲಿ ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು, ಮಠದ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಶ್ರೀಗಳಿಗೆ ಜಯಘೋಷ ಮೊಳಗಿಸಿ ಭಾರತರತ್ನ ನೀಡುವಂತೆ ಒತ್ತಾಯಿಸಿದರು.

      ಪ್ರತಿ ವರ್ಷದ ಸಿದ್ದಲಿಂಗೇಶ್ವರ ಜಾತ್ರೆ ಸಂದರ್ಭದಲ್ಲಿ ಸಿದ್ದಲಿಂಗೇಶ್ವರ ದೇವರನ್ನಿಟ್ಟು ರಥೋತ್ಸವ ಮಾಡಲಾಗುತ್ತಿತ್ತು. ಅದೇ ರಥದಲ್ಲಿ ಶಿವೈಕ್ಯರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.

      ವೀರಗಾಸೆ, ಕಂಸಾಳೆ, ವಿದ್ಯಾರ್ಥಿಗಳ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಶ್ರೀಗಳಿಗೆ ಕಲಾನಮನ ಸಲ್ಲಿಸಿದವು. ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀಗಳ ಗದ್ದುಗೆ ದರ್ಶನ ಪಡೆದರು.

      Lakhs of devotees congregate at Siddaganga mutt today

      ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಭಕ್ತರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಏರ್ಪಡಿಸಲಾಗಿತ್ತು.

      ಕಳೆದ ಮೂರು ದಿನಗಳಿಂದ ಉತ್ತರ ಕರ್ನಾಟಕದ ಜನರು ಪುಣ್ಯಸ್ಮರಣೆ ಸಮಾರಂಭಕ್ಕೆ ಆಗಮಿಸಿ ಇಲ್ಲಿಯೇ ಬೀಡು ಬಿಟ್ಟಿದ್ದಾರೆ. ಇಂದು ಕೂಡ ಮಠಕ್ಕೆ ರಾಜ್ಯದ ನಾನಾ ಕಡೆಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ. ಇವರೆಲ್ಲರಿಗೂ ಉಪಹಾರ, ಊಟ ಒದಗಿಸಲು 18 ಕಡೆ ವ್ಯವಸ್ಥೆ ಮಾಡಲಾಗಿದೆ.

      ಜಿಲ್ಲಾಧಿಕಾರಿಗಳಾದ ರಾಕೇಶ್‍ಕುಮಾರ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

      ಭದ್ರತೆಗಾಗಿ 2 ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಡಿಜಿಪಿ ಕಮಲ್‍ಪಂಥ್ ಹಾಗೂ ಕೇಂದ್ರೀಯ ವಲಯದ ಐಜಿಪಿ ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳು ಮಠದಲ್ಲೇ ಬೀಡುಬಿಟ್ಟು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದರು.

      ಮಠಕ್ಕೆ ಬರುವ ಭಕ್ತರು ಯಾರೊಬ್ಬರೂ ಊಟ ಮಾಡದೆ ಹಿಂದಿರುಗಬಾರದು ಎಂಬ ಹಿನ್ನೆಲೆಯಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

      ಶ್ರೀ ಶಿವಕುಮಾರ ಸ್ವಾಮೀಜಿಯವರ ಕಾಲಘಟ್ಟದಲ್ಲಿ ಬದುಕಿದ ನಾವೇ ಧನ್ಯರು. ಅವರು ನಿರಂತರವಾಗಿ ನಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗವೇ ನಮಗೆ ದಾರಿದೀಪ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಮಠಕ್ಕೆ ಬರುವ ಭಕ್ತರಿಗೆ ಸಾರಿಗೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+