ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಅಚ್ಚರಿ ತಂದಿದೆ

|
Google Oneindia Kannada News

ತುಮಕೂರು, ನವೆಂಬರ್ 17 : ಕರ್ನಾಟಕ ಸರ್ಕಾರ ರಾಜ್ಯದ ವೀರಶೈವ- ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲು ಒಪ್ಪಿಗೆ ನೀಡಿದೆ.

ಮಂಗಳವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಿಗಮ ಸ್ಥಾಪನೆ ಮಾಡಲು ಆದೇಶ ನೀಡಿದ್ದಾರೆ. ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು.

ಕೊನೆಗೂ ಲಿಂಗಾಯತ ಸಮುದಾಯದ ಒತ್ತಡಕ್ಕೆ ಮಣಿದ ಯಡಿಯೂರಪ್ಪ! ಕೊನೆಗೂ ಲಿಂಗಾಯತ ಸಮುದಾಯದ ಒತ್ತಡಕ್ಕೆ ಮಣಿದ ಯಡಿಯೂರಪ್ಪ!

ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಈ ಕುರಿತು ಪ್ರತಿಕ್ರಿಯೆ ನೀಡಿದರು. "ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ" ಎಂದು ಸ್ವಾಮೀಜಿಗಳು ಹೇಳಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ

"ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿಯೇ ಇರುವುದಿಲ್ಲ. ಇದರ ಬದಲು ಎಲ್ಲಾ ಸಮಾಜದಲ್ಲಿ ಹಿಂದುಳಿದವರು, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಮಾಡಿದರೆ ಒಳ್ಳೆಯದು" ಎಂದು ಸ್ವಾಮೀಜಿಗಳು ಸಲಹೆ ನೀಡಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರು ಘೋಷಣೆ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರು ಘೋಷಣೆ

ಕೆಲವು ಬೆಳವಣಿಗೆ ನಡೀತಿದೆ

ಕೆಲವು ಬೆಳವಣಿಗೆ ನಡೀತಿದೆ

ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, "ಎಲ್ಲಾ ಸಮಾಜದಲ್ಲೂ ತುಂಬಾ ಬಡವರಿದ್ದಾರೆ. ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು, ಸರ್ಕಾರ ಒತ್ತು ಕೊಡುತ್ತಿದೆ. ಈ ನಡುವೆ ಕೆಲ ಬೆಳವಣಿಗೆಗಳು ನಡೀತಿದೆ. ಸರ್ಕಾರ ಇರುವುದು ಇಡೀ ರಾಜ್ಯದ ಅಭಿವೃದ್ಧಿಗೆ" ಎಂದು ಹೇಳಿದರು.

ಪ್ರತಿಯೊಬ್ಬರು ಕೇಳುತ್ತಾರೆ

ಪ್ರತಿಯೊಬ್ಬರು ಕೇಳುತ್ತಾರೆ

"ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರು ಕೇಳುತ್ತಾರೆ" ಎಂದು ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ

ಮರಾಠ ಅಭಿವೃದ್ಧಿ ಪ್ರಾಧಿಕಾರ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದರು. ಸರ್ಕಾರದ ಈ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದನ್ನು ವಾಪಸ್ ಪಡೆಯಬೇಕು ಎಂದು ಸಹ ಒತ್ತಾಯ ಮಾಡಲಾಗುತ್ತಿದೆ.

ಸಮುದಾಯದಿಂದ ಬೇಡಿಕೆ ಇಡಲಾಗಿತ್ತು

ಸಮುದಾಯದಿಂದ ಬೇಡಿಕೆ ಇಡಲಾಗಿತ್ತು

'ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ' ರಚನೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೋಮವಾರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಇಂದು ನಿಗಮ ರಚನೆಗೆ ಸರ್ಕಾರ ಒಪ್ಪಿಗೆ ಕೊಟ್ಟಿದೆ.

English summary
Chief minister of Karnataka B. S. Yediyurappa directed to set up Lingayat development board to development of community. Tumakuru Siddaganga mutt Siddalinga swami comment on development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X