ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ಚುನಾವಣೆಯಲ್ಲಿ ಅಡಗಿದೆ ನಾಯಕರ ಪ್ರತಿಷ್ಠೆ

|
Google Oneindia Kannada News

ತುಮಕೂರು, ಮಾ. 20 : ತುಮಕೂರು ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಬಿಸಿ ನಿಧಾನವಾಗಿ ಏರುತ್ತಿದೆ. ಕೆಪಿಸಿಸಿ ಅಧ್ಯಕ್ಷರ ತವರು ಜಿಲ್ಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರು ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿಯಿಂದ ಹಾಲಿ ಸಂಸದ ಜಿ.ಎಸ್.ಬಸವರಾಜು ಸ್ಪರ್ಧಿಸುತ್ತಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೊದಲು ತುಮಕೂರು ಲೋಕಸಭೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಕ್ರಮೇಣ ಬಿಜೆಪಿ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿತು. ಕಳೆದೆರೆಡು ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿತ್ತು. ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರನ್ನು ದೇವೇಗೌಡರು ಕಣಕ್ಕಿಳಿಸಿದ್ದಾರೆ.

Tumkur

ಎಸ್. ಮಲ್ಲಿಕಾರ್ಜುನಯ್ಯ ಅವರ ಅನಾರೋಗ್ಯದಿಂದ ಬಿಜೆಪಿ 2009ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ವಲಸೆ ಬಂದು ಬಿಜೆಪಿಗೆ ಸೇರ್ಪಡೆಯಾಗಿದ್ದ ಜಿ.ಎಸ್. ಬಸವರಾಜು ಅವರಿಗೆ ಟಿಕೆಟ್ ನೀಡಿತ್ತು. ಬಸವರಾಜು ಅವರು 20 ಸಾವಿರ ಮತಗಳ ಅಂತರದಿಂದ ಜೆಡಿಎಸ್‌ ನ ಮುದ್ದಹನುಮೇಗೌಡರನ್ನು ಸೋಲಿಸಿದ್ದರು. ಈ ಬಾರಿ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. [ಬಸವರಾಜು ತುಮಕೂರು ಬಿಜೆಪಿ ಅಭ್ಯರ್ಥಿ]

ಕಳೆದ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿದ್ದ ಮುದ್ದಹನುಮೇಗೌಡ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ, ಬಿಜೆಪಿಯ ಜಿ.ಎಸ್.ಬಸವರಾಜು, ಕಾಂಗ್ರೆಸ್ ಪಕ್ಷದ ಮುದ್ದಹನುಮಗೌಡ ಅವರ ನಡುವೆ ಈ ಬಾರಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಗೆಲವು ಯಾರಿಗೆ ಎಂದು ಕಾದು ನೋಡಬೇಕು.

ಪ್ರತಿಷ್ಠೆಯ ಕಣ : ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಕ್ಷೇತ್ರ ಪ್ರತಿಷ್ಠೆಯ ಕಣ. ಜಿಎಸ್ ಬಸವರಾಜು ಅವರಿಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಿಕೆಟ್ ಕೊಡಿಸಿದ್ದು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಇದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತವರು ಜಿಲ್ಲೆಯಾಗಿರುವುದರಿಂದ ಮುದ್ದಹನುಮೇಗೌಡ ಅವರನ್ನು ಗೆಲ್ಲಿಸಬೇಕಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಸ್ವತಃ ಕಣಕ್ಕೆ ಇಳಿದಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.

ಹಿನ್ನೋಟ : ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತುಮಕೂರು ಕ್ಷೇತ್ರದ ವ್ಯಾಪ್ತಿಯಗೆ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಮಧುಗಿರಿ, ತಿಪಟೂರು, ತುಮಕೂರು ನಗರ, ತುಮಕೂರು ಗ್ರಾಮಾಂತರ, ತುರುವೆಕೆರೆ ವಿಧಾನಸಭಾ ಕ್ಷೇತ್ರಗಳು ಒಳಪಡಲಿವೆ.

2009ರ ಚುನಾವಣೆಯಲ್ಲಿ ಬಿಜೆಪಿಯ ಜಿ.ಎಸ್.ಬಸವರಾಜು ಅವರು 331,06 ಮತಗಳನ್ನು ಪಡೆದು ಸಂಸತ್ ಪ್ರವೇಶಿಸಿದ್ದರು. ಜೆಡಿಎಸ್ ಅಭ್ಯರ್ಥಿ ಮುದ್ದಹನುಮಗೌಡ 309,619 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪಿ.ಕೋದಂಡರಾಮಯ್ಯ 177,726 ಮತಗಳನ್ನು ಪಡೆದಿದ್ದರು. [ಮಾಹಿತಿ : ಇಂಡಿಯಾ ವೋಟ್ಸ್.ಕಾಮ್]

English summary
Elections 2014 : Tumkur constituency has caught the attention of politicians for several reasons. JD(S) state president A.Krishnappa contesting from constituency and it is home town for KPCC president G.Parameshwar. Triangular fight expeted between BJPs G.S.Basavaraju, Congress Mudda Hanumegowda and JD(S) A.Krishnappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X