V Somanna V/s Muddahanumegowda: ವಿ ಸೋಮಣ್ಣ ಗೆಲುವಿಗೆ ಕಾರಣವಾಗುತ್ತಾ ಜಾತಿ ಸಮೀಕರಣ!?
ತುಮಕೂರು, ಏಪ್ರಿಲ್. 23: ಕಲ್ಪತರು ನಾಡು ತುಮಕೂರು ಲೋಕಸಭಾ ಕಣ ಸದ್ಯ ಹೊರಗಿನವರು ಮತ್ತು ಒಳಗಿನವರು ಎಂಬ ವಿಷಯದಲ್ಲಿ ಸ್ಪರ್ಧೆಯಲ್ಲಿದೆ. ಇಷ್ಟು ದಿನ ಇದ್ದ ಪರಿಸ್ಥಿತಿ ಈಗ ಬೇರೆಯಾಗುತ್ತಿದ್ದು, ಹಲವು ಸಮುದಾಯಗಳು ಹೊರಗಿನಿಂದ ಬಂದ ಎನ್‌ಡಿಎ ಅಭ್ಯರ್ಥಿ ವಿ ಸೋಮಣ್ಣ ಪರ ಮತ ಚಲಾಯಿಸಬಹುದು ಎಂಬ ಸೂಚನೆ ಸಿಗುತ್ತಿದೆ.
ಜಿಲ್ಲೆಯ ಲಂಬಾಣಿ, ಭೋವಿ, ಎಸ್‌ಸಿ (ಎಡ) ಮತ್ತು ಕಾಡು ಗೊಲ್ಲರಂತಹ ಸಮುದಾಯಗಳು ತಮ್ಮದೇ ಆದ ಕಾರಣಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಲಿವೆ ಎಂಬ ವಿಷಯ ಹೊರಬರುತ್ತಿದೆ. ಈ ಲೋಕಸಭೆ ಚುನಾವಣೆಯಲ್ಲಿ ಜಾತಿ ಸಮೀಕರಣಗಳು ದೊಡ್ಡ ಬದಲಾವಣೆಗೆ ಒಳಗಾದಂತಿದೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಕಾಡು ಗೊಲ್ಲರಿಗೆ ಪರಿಶಿಷ್ಟ ಪಂಗಡದಲ್ಲಿ ಸೇರಿಸಿರುವ ಭರವಸೆ ನೀಡಿದ್ದಾರೆ. ದೇವೇಗೌಡರ ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸಕತ್ ವೈರಲ್ ಆಗಿರುವುದರಿಂದ ಇದನ್ನು ಎನ್‌ಡಿಎಯ ಮಾಸ್ಟರ್‌ಸ್ಟ್ರೋಕ್ ಎಂದು ಪರಿಗಣಿಸಲಾಗಿದೆ. ವೈರಲ್ ವಿಡಿಯೋ ಲಾಭ ಪಡೆದುಕೊಳ್ಳುತ್ತಿರುವ ಜೆಡಿಎಸ್ ವರಿಷ್ಠರು ಎಲ್ಲಾ ಭಾಷಣಗಳಲ್ಲಿಯೂ ಅದನ್ನೆ ಹೇಳುತ್ತಿದ್ದಾರೆ. ಇದು ತುಮಕೂರು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ವಿಶೇಷವಾಗಿ ಪರಿಣಾಮ ಬೀರಬಹುದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್' ವಿಶ್ಲೇಷಣೆ ಉಲ್ಲೇಖಿಸಿದೆ.
ಸಿದ್ದರಾಮಯ್ಯ ಮೇಲೆ ಲಂಬಾಣಿಗರ ಅಸಮಾಧಾನ!
ಇನ್ನು, ಇತ್ತೀಚೆಗೆ ನಡೆದ ಕಾಂಗ್ರೆಸ್ ಚುನಾವಣಾ ಸಭೆಯಲ್ಲಿಯೇ ಲಂಬಾಣಿ ಸಮುದಾಯದ ನಾಯಕರು ತಮಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮುಂದೆಯೇ ಅಸಮಾಧಾನ ಹೊರಹಾಕಿ ತಾವು ತಮ್ಮ ಸಮುದಾಯದ ಬಳಿ ಮತಯಾಚಿಸುವುದು ಹೇಗೆ ಎಂದಿದ್ದರು. ಹೀಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಈ ಸಮುದಾಯದ ಮತಗಳು ಬಿಜೆಪಿ ಪಾಲಾಗುವ ಸಾಧ್ಯತೆಯಿದೆ.
ಒಕ್ಕಲಿಗ ಮತಗಳ ಬಗ್ಗೆ ಹೇಳುವುದಾದರೆ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇಕಡಾ 4 ರಿಂದ 5 ರಷ್ಟು ಹೆಚ್ಚಳವನ್ನು ಸಾಧಿಸಿದೆ. ಆದರೆ ಇದಕ್ಕೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದು ಕಾರಣ. ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಒಕ್ಕಲಿಗರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ ಎನ್ನುತ್ತಾರೆ ಸಮುದಾಯದ ಹಿರಿಯ ನಾಯಕರು. ಅದು ಈ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಪರ ಕುರುಬರು, ಮುಸ್ಲಿಮರು
ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಅವರ ಸಮುದಾಯ ಕುರುಬರು ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಮುಸ್ಲಿಮರು ಕಾಂಗ್ರೆಸ್ ಅನ್ನು ಬೆಂಬಲಿಸದೆ ಬೇರೆ ದಾರಿಯಿಲ್ಲ. ಏಕೆಂದರೆ ಜೆಡಿಎಸ್‌ನೊಂದಿಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಅವರಿಗೆ ಯಾವುದೇ ಆಯ್ಕೆಯಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.
ಇನ್ನು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹಿತಾಸಕ್ತಿಗಾಗಿ ವೀರಶೈವ ಲಿಂಗಾಯತರು ಬಿಜೆಪಿಯ ಬೆನ್ನಿಗೆ ನಿಲ್ಲುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇವೆಲ್ಲದರ ನಡುವೆ ಕಾಂಗ್ರೆಸ್ ಮಾತ್ರ ತಮ್ಮ ಗ್ಯಾರಂಟಿ ಯೋಜನೆಗಳು ಮತ್ತು ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಕೆಲಸಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದೆ.
ಇತ್ತೀಚೆಗೆ ತುಮಕೂರಿನ ಸ್ಥಳೀಯ ಮಾಧ್ಯಮ ಸಂಸ್ಥೆಯಾದ ತುಮಕೂರು ನ್ಯೂಸ್ ಮತದಾರರ ಸಮೀಕ್ಷೆ ನಡೆಸಿದ್ದು, ವರದಿಯನ್ನು ಬಹಿರಂಗ ಮಾಡಿತ್ತು. ಈ ಸಮೀಕ್ಷೆಯ ಪ್ರಕಾರ ತುಮಕೂರು ಲೋಕಸಭೆ ಚುನಾವಣೆಯಲ್ಲಿ ಬಹುಪಾಲು ಮತದಾರರು ಬೆಜೆಪಿ- ಜೆಡಿಎಸ್ ಅಭ್ಯರ್ಥಿ ವಿ.ಸೋಮಣ್ಯ ಪರವಾಗಿ ಒಲವು ತೋರಿದ್ದಾರೆ ಎಂದಿತ್ತು. ಸಮೀಕ್ಷೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಅವರ ಕಡೆಗೆ ಶೇಕಡಾ 59.11 ರಷ್ಟು, ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಪರವಾಗಿ ಶೇಕಡಾ 39.62 ರಷ್ಟು ಜನರು ಮತ ಹಾಕಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications