ತುಮಕೂರು : ಕಾಡಿನಲ್ಲಿ ಪ್ರೇಮಿಗಳ ಮೇಲೆ ಹಲ್ಲೆ, ಬೈಕ್ ಕಳವು

ತುಮಕೂರು, ಜೂನ್ 16 : ತುಮಕೂರಿನಲ್ಲಿ ಪ್ರೇಮಿಗಳ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳು ಬೈಕ್, ಹಣ ಕದ್ದು ಪರಾರಿಯಾಗಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರಿನ ನಾಮ ಚಿಲುಮೆ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರೇಮಿಗಳಾದ ಮಂಜುನಾಥ್ (23) ಮತ್ತು ಚೈತ್ರಾ ಅವರ ಮೇಲೆ ಹಲ್ಲೆ ಮಾಡಿರುವ ಇಬ್ಬರು ಅಪರಿಚಿತರು, ಬೈಕ್ ಮತ್ತು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. [ಸಿದ್ಧರಬೆಟ್ಟದಲ್ಲಿ ಪ್ರೇಮಿಗಳನ್ನು ವಿವಸ್ತ್ರಗೊಳಿಸಿ ವಿಡಿಯೋ ತೆಗೆದರು]

tumakuru

ಪ್ರತಿರೋಧ ಒಡ್ಡಿದಾಗ ಚಾಕುವಿನಿಂದ ಮಂಜುನಾಥ್‌ಗೆ ಇರಿದು, ಚೈತ್ರಾ ಮೇಲೆ ಹಲ್ಲೆ ಮಾಡಿ ಹಣ, ಬೈಕ್ ತೆಗೆದುಕೊಂಡು ಪರಾರಿಯಾಗಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿದ್ದ ಮಂಜುನಾಥ್ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮೇಲೆ ಹಲ್ಲೆ ನಡೆಸಿದವರ ಪರಿಚಯವಿಲ್ಲ ಎಂದು ಚೈತ್ರಾ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+