ಸಮ್ಮಿಶ್ರ ಸರ್ಕಾರ ಪಥನದ ಬಗ್ಗೆ ಭವಿಷ್ಯ ನುಡಿದಿದ್ದಾರೆ ಸದಾನಂದಗೌಡ

ತುಮಕೂರು, ಜುಲೈ 15: ಸಮ್ಮಿಶ್ರ ಸರ್ಕಾರ ಯಾವಾಗ ಹೇಗೆ ಪಥನವಾಗುತ್ತದೆ ಎಂದು ಬಿಜೆಪಿ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಮಂತ್ರಿ ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.

ತುಮಕೂರಿನ ಕುಣಿಗಲ್‌ನಲ್ಲಿ ಆಯೋಜಿಸಿದ್ದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುಗಿಯುವ ಮೊದಲಿಗೆ ಸಮ್ಮಿಶ್ರ ಸರ್ಕಾರ ಪಥನ ಶತ ಸಿದ್ಧ ಎಂದು ಅವರು ಭವಿಷ್ಯ ನುಡಿದರು.

ಲೋಕಸಭೆ ಚುನಾವಣೆ ಸಮಯದಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಎದ್ದು ಮೈತ್ರಿ ಸರ್ಕಾರ ಮುರಿದು ಬೀಳುತ್ತದೆ, ಇದು ಖಾಯಂ ಎಂದು ಸದಾನಂದಗೌಡ ಅವರು ಆತ್ಮವಿಶ್ವಾಸದಿಂದ ಹೇಳಿದರು.

Minister Sadananda Gowda said coalition government will fall soon

ಬಜೆಟ್‌ ಬಗ್ಗೆ ಬೇಸರವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿ ಮಂಡಿಸಿದ ಬಜೆಟ್ ಪ್ರಾದೇಶಿಕ ಅಸಮತೋಲನದಿಂದ ಕೂಡಿದೆ. ಅದೊಂದು ಅರ್ಥವಿಲ್ಲದ ಬಜೆಟ್ ಎಂದು ಅವರು ಟೀಕಿಸಿದರು.

ತಾಲೂಕಿನಲ್ಲಿ ಬಿಜೆಪಿ ಸೋಲಲು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ರಾಜೇಶ್‍ಗೌಡ ಅವರ ಪಕ್ಷ ವಿರೋಧ ಚಟುವಟಿಕೆ ಕಾರಣ. ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಈ ಸಂದರ್ಭದಲ್ಲಿ ಕಾರ್ಯಕರ್ತರು ಒತ್ತಾಯಿಸಿದಾಗ, ಸೂಕ್ತ ದಾಖಲೆಗಳನ್ನು ನೀಡಿದರೆ ಖಂಡಿತ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+