ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು
ತುಮಕೂರು, ಮೇ 11 : ನಡೆದಾಡುವ ದೇವರು ಎಂದೇ ಕರೆಯಲ್ಪಡುವ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ.
ಸ್ವಾಮೀಜಿಗಳಿಗೆ ಅನಾರೋಗ್ಯ ಉಂಟಾಗಿರುವ ಹಿನ್ನಲೆಯಲ್ಲಿ ಭಕ್ತರಿಗೆ ಸ್ವಾಮೀಜಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. 110 ವಯಸ್ಸಿನ ಶಿವಕುಮಾರ ಶ್ರೀಗಳಿಗೆ ಜ್ವರ ಹಾಗೂ ನಿಶ್ಯಕ್ತಿ ಕಾಣಿಸಿಕೊಂಡಿದ್ದು ಮಠದಲ್ಲಿಯೇ 5 ಜನ ವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.

ಶ್ವಾಸಕೋಶ, ಜಠರ ಹಾಗೂ ಮೂತ್ರದಲ್ಲಿ ಸೋಂಕು ಇರುವ ಶಂಕೆಯಿದ್ದು, ರಕ್ತದ ಮಾದರಿಯನ್ನು ಬಿಜಿಎಸ್ ಆಸ್ಪತ್ರೆ ಗೆ ಕಳುಹಿಸಲಾಗಿದೆ.
ರಕ್ತ ಪರೀಕ್ಷೆ ವರದಿ 24ಗಂಟೆಯಲ್ಲಿ ಬರಲಿದ್ದು ವರದಿ ಆದರಿಸಿ ಮುಂದಿನ ಚಿಕಿತ್ಸೆ ನೀಡಲಾಗುವುದು ಎಂದ ಬ್ರೈನ್ಸ್ ಹಾಸ್ಪಿಟಲ್ ನರರೋಗ ತಜ್ಞ ಡಾ.ವೆಂಕಟರಮಣ ತಿಳಿಸಿದ್ದಾರೆ.
ಸದ್ಯ 5 ಜನ ವೈದ್ಯರ ತಂಡ ಶ್ರೀಗಳ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ. ಅಗತ್ಯ ಬಿದ್ದರೆ ಶ್ರೀಗಳನ್ನು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗುವುದು.
ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಂಡಿರುವ ಶ್ರೀಗಳು ಸದ್ಯ ಆಸ್ಪತ್ರೆ ಸೇರಲು ನಿರಾಕರಿಸಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.












Click it and Unblock the Notifications