'ತಪ್ಪು ಮಾಹಿತಿ ಹರಡಿದೆ': ರಫೇಲ್ ಒಪ್ಪಂದವನ್ನು ಕಾಂಗ್ರೆಸ್ ರಾಜಕೀಯಗೊಳಿಸಿದೆ- ಪ್ರಧಾನಿ ಮೋದಿ
ರಫೇಲ್ ಒಪ್ಪಂದವನ್ನು ಕಾಂಗ್ರೆಸ್ ರಾಜಕೀಯಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ತುಮಕೂರಿನಲ್ಲಿ ಇಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಭಾರತದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಫೇಲ್ ಒಪ್ಪಂದದ ಬಗ್ಗೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
"ಎಚ್‌ಎಎಲ್ (ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್) ಬಗ್ಗೆ ತಪ್ಪು ಮಾಹಿತಿ ಹರಡಲಾಗಿದೆ ಮತ್ತು ನಮ್ಮ ಸರ್ಕಾರದ ವಿರುದ್ಧ ಅನೇಕ ಸುಳ್ಳು ಆರೋಪಗಳನ್ನು ಮಾಡಲಾಗಿದೆ" ಎಂದು ಪ್ರಧಾನಿ ಮೋದಿ ಹೇಳಿದರು. ರಫೇಲ್ ಯುದ್ಧ ವಿಮಾನಗಳ ಖರೀದಿ ವಿಚಾರದಲ್ಲಿ ಕೇಸರಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದರು.
Karnataka is the land of innovation. From drones to Tejas aircraft manufacturing is being done in the state. The state has become the first choice for investors. From modern assault rifles, aircraft carrier, to fighter jets are being manufactured by India: PM Modi at Tumakuru pic.twitter.com/gQRynxtj8K
— ANI (@ANI) February 6, 2023
ಈ ಹಿಂದೆ ಫ್ರಾನ್ಸ್‌ನಿಂದ ರಫೇಲ್ ಯುದ್ಧವಿಮಾನಗಳ ಖರೀದಿ ವೆಚ್ಚದ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿವಾದ ಹುಟ್ಟಿತ್ತು. ಕೇಸರಿ ಪಕ್ಷವು ಒಪ್ಪಂದಕ್ಕಿಂತ ದುಪ್ಪಟ್ಟು ವೆಚ್ಚದಲ್ಲಿ ಯುದ್ಧವಿಮಾನಗಳನ್ನು ಖರೀದಿಸಿದೆ ಎಂದು ವಿಪಕ್ಷಗಳು ಆರೋಪ ಮಾಡಿದ್ದವು. ರಫೇಲ್ ಒಪ್ಪಂದವನ್ನು 'ರಾಜಕೀಯಗೊಳಿಸುವುದಕ್ಕಾಗಿ' ಪ್ರತಿಪಕ್ಷಗಳ ವಿರುದ್ಧ ಮೋದಿ ಕಿಡಿ ಕಾರಿದ್ದಾರೆ. ಆದರೆ ಈ ಕಾರ್ಖಾನೆಯು ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರವಾಗಿದೆ. ಸತ್ಯವು ಇಂದು ಬಹಿರಂಗವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. HAL ನ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆಯು ರಕ್ಷಣಾ ಕ್ಷೇತ್ರದಲ್ಲಿ ಭಾರತದ 'ಆತ್ಮನಿರ್ಭರ್ತ' (ಸ್ವಾವಲಂಬನೆ) ಅನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ರಫೇಲ್ ಜೆಟ್‌ಗಳ ಮೊದಲ ಬ್ಯಾಚ್ ಜುಲೈ 2020 ರಲ್ಲಿ ಹರಿಯಾಣದ ಅಂಬಾಲಾ ಏರ್ ಬೇಸ್‌ನಲ್ಲಿ ಬಂದಿಳಿಯಿತು. ಆ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಕೇಂದ್ರದ ಮೇಲೆ ಕಟುವಾದ ವಾಗ್ದಾಳಿ ನಡೆಸಿದರು. ಪ್ರತಿ ಜೆಟ್ 1,670 ಕೋಟಿ ವೆಚ್ಚದಲ್ಲಿ ಖರೀದಿಸಲಾಗಿತ್ತು. ಆದರೆ ಹಿಂದಿನ ಕಾಂಗ್ರೆಸ್ ನೇತೃತ್ವದ ಆಡಳಿತವು 526 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿಕೊಂಡಿತು. HAL ಬದಲಿಗೆ ಖಾಸಗಿ ಸಂಸ್ಥೆಯಾದ ಅನಿಲ್ ಅಂಬಾನಿಯ ರಿಲಯನ್ಸ್ ಡಿಫೆನ್ಸ್ ಲಿಮಿಟೆಡ್‌ಗೆ ಆಫ್‌ಸೆಟ್ ಗುತ್ತಿಗೆಯನ್ನು ಏಕೆ ನೀಡಲಾಗಿದೆ ಎಂದು ಅವರು ಸರ್ಕಾರವನ್ನು ದೂಷಿಸಿದ್ದರು.












Click it and Unblock the Notifications