ಲೋಕಸಭೆ ಫಲಿತಾಂಶಕ್ಕೂ ಮುನ್ನವೇ ದೇವೇಗೌಡರ ಗೆಲುವಿನ ಸಂಭ್ರಮಾಚರಣೆಗೆ ಶಾಸಕ ಗೌರಿಶಂಕರ್ ಕರೆ

ತುಮಕೂರು, ಮೇ 22: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಗೆಲುವಿನ ಸಂಭ್ರಮಾಚರಣೆಗೆ ಕಾರ್ಯಕರ್ತರನ್ನು ಜೆಡಿಎಸ್ ಶಾಸಕರಾದ ಡಿ.ಸಿ.ಗೌರಿಶಂಕರ್ ಫಲಿತಾಂಶಕ್ಕೂ ಮೊದಲೇ ಆಹ್ವಾನಿಸಿದ್ದಾರೆ.

ಮೇ ಇಪ್ಪತ್ಮೂರರ ಗುರುವಾರ ಫಲಿತಾಂಶ ಪ್ರಕಟ ಆಗಲಿದ್ದು, ಫಲಿತಾಂಶಕ್ಕೆ ಮುನ್ನವೇ ಸಂಭ್ರಮಾಚರಣೆಗೆ ಕರೆದಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್‌ ಅದಕ್ಕಾಗಿ ಪೋಸ್ಟರ್ ಮಾಡಿಸಿ, ಆ ಮೂಲಕ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ದೇವೇಗೌಡರು ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆಯಲ್ಲಿರುವ ಶಾಸಕ ಡಿ.ಸಿ.ಗೌರಿಶಂಕರ್, ಮೇ 23ರಂದು ಇಲ್ಲಿನ ಜಯನಗರ ಶಾಸಕರ ಗೃಹಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗುವುದು. ಕಾರ್ಯಕ್ರಮಕ್ಕೆ ಬರುವ ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ವಿವರವನ್ನು ಪೋಸ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

MLA DC Gowrishankar call for Deve Gowda victory celebration before Lok sabha results announcement

ಇಂತಹ ಮತ್ತೊಂದು ಪೋಸ್ಟರ್ ಕಂಡುಬಂದಿದ್ದು, ತುಮಕೂರು ಲೋಕಸಭಾ ಚುನಾವಣೆಯ ನೇರ ಪ್ರಸಾರವಿದೆ. ಎಚ್‌.ಡಿ.ದೇವೇಗೌಡರ ಗೆಲುವಿನ ಸಂಭ್ರಮವನ್ನು ಆಚರಿಸೋಣ ಬನ್ನಿ ಎಂದು ಆಹ್ವಾನಿಸಲಾಗಿದೆ. ಗುಬ್ಬಿಯ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸಣ್ಣ) ನಿವಾಸದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+