ತುಮಕೂರು; ಎನ್ಎಸ್‌ಯುಐ ಕಾರ್ಯಕರ್ತರನ್ನು ಭೇಟಿಯಾದ ಎಂಎಲ್‌ಸಿ

ತುಮಕೂರು,ಜೂ3: ಪಠ್ಯ ಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿರುವುದನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಖಂಡಿಸಿದರು.

ಶುಕ್ರವಾರ ತುಮಕೂರು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಅವರು ಬಂಧಿತ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಭೇಟಿಯಾದರು. ಪ್ರಕರಣದ ಬಗ್ಗೆ ಬಂಧಿತದಿಂದ ಸಂಪೂರ್ಣ ವಿವರಣೆಯನ್ನು ಪಡೆದುಕೊಂಡರು.

"ಶಾಂತಿಯುತವಾಗಿ ಪ್ರತಿಭಟನೆ ನಡಸಲು ಮುಂದಾದ ಕಾರ್ಯಕರ್ತರನ್ನು ಮನೆಗೆ ಬೆಂಕಿ ಹಚ್ಚಲು ಬಂದಿದ್ದರು ಎಂದು ಸುಳ್ಳು ಆರೋಪ ಹೊರಸಿ ಜೈಲಿಗೆ ಕಳಿಸಿರುವುದು ಸರಿಯಲ್ಲ. ಬಿಜೆಪಿ ಮುಖಂಡರು ಎನ್ಎಸ್‌ಯುಐ ಕಾರ್ಯಕರ್ತರು ಗುಂಡಾಗಳು ಎಂಬಂತೆ ಬಿಂಬಿಸಿ, ವಿದ್ಯಾರ್ಥಿ ಸಂಘಟನೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ" ಎಂದು ಆರ್. ರಾಜೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಆಡಳಿತ ಪಕ್ಷದ ಒತ್ತಡ: ಪೊಲೀಸರಿಂದ ಪ್ರಕರಣ ದಾಖಲು

ಆಡಳಿತ ಪಕ್ಷದ ಒತ್ತಡ: ಪೊಲೀಸರಿಂದ ಪ್ರಕರಣ ದಾಖಲು

ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ (ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಎನ್.ಎಸ್.ಯು.ಐ ಕಾರ್ಯಕರ್ತರ ಬಂಧನಕ್ಕೆ ಒಳಗಾಗಿರುವ ಎನ್.ಎಸ್.ಯು.ಐ ಕಾರ್ಯಕರ್ತರು ಹೇಳುವ ಪ್ರಕಾರ, ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ, ಪಠ್ಯ ಪುಸ್ತಕದಲ್ಲಿ ಕೋಮುವಾದ ತುಂಬಿರುವುದನ್ನು ವಿರೋಧಿಸಿ, ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರ ಮನೆಯ ಮುಂದೆ ಪ್ರತಿಭಟನೆ ಮಾಡಲು ಮುಂದಾಗಿದ್ದು ಸರಿ. ಆ ವೇಳೆ ಕೋಮುವಾದಕ್ಕೆ ಕುಮ್ಮಕ್ಕು ನೀಡುತ್ತಿರುವ ಆರ್.ಎಸ್.ಎಸ್. ಸಂಘಟನೆಯ ಜನಪ್ರಿಯ ವಸ್ತುವಾದ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪೊಲೀಸರು ನಮ್ಮನ್ನು ತಡೆದು, ಬೆಂಕಿ ಆರಿಸಿದ್ದಾರೆ. ಇದು ಪ್ರತಿಭಟನೆಯ ಒಂದು ಭಾಗವೇ ಹೊರತು, ಬೆಂಕಿ ಹಚ್ಚುವ ದೃಷ್ಕೃತ್ಯಕ್ಕೆ ನಾವ್ಯಾರು ಕೈ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ಪೊಲೀಸರು ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದೆ ಕೇಸುಗಳನ್ನು ಹಾಕಿ ಪ್ರತಿಭಟನೆಯ ಮನೋಭಾವನೆಯನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಒಂದು ಆಡಳಿತ ಪಕ್ಷಕ್ಕೆ ಶೋಭೆ ತರುವಂತದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವರ ನಿವಾಸದ ಮೇಲೆ ನಡೆದ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರ

ಸಚಿವರ ನಿವಾಸದ ಮೇಲೆ ನಡೆದ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರ

"ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ದಾಳಿ ನಡೆಸಿ ದಾಂಧಲೆ ನಡೆಸಿದ್ದು, ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, "ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮಾಡಿದ ಕೆಲಸವನ್ನು ವಿರೋಧಿಸುವ ಮತ್ತು ಆಂದೋಲನ ಮಾಡುವ ಅಧಿಕಾರ, ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಆಂದೋಲನವನ್ನು ಮಾಡುವುದು ಬಿಟ್ಟು ಗೂಂಡಾ ವರ್ತನೆ ಮಾಡಿರುವುದು ಖಂಡನೀಯ. ಇದು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್‌ನ ಈ ರೀತಿಯ ಗೂಂಡಾ ಪ್ರವೃತ್ತಿಯನ್ನು ನೋಡಿದ ಜನರು ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಸಚಿವರ ನಿವಾಸದ ಮೇಲೆ ನಡೆದ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರ" ಎಂದು ದೂರಿದರು.

ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರ ಆಗ್ರಹ

ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರ ಆಗ್ರಹ

"ಸಚಿವ ಬಿ. ಸಿ. ನಾಗೇಶ್ ಮನೆಯ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಲು ಮುಂದಾದ ಎನ್‌ಎಸ್‌ಯುಐ ಕಾರ್ಯಕರ್ತರ ಕೃತ್ಯವನ್ನು ಖಂಡಿಸುತ್ತೇನೆ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಬಿ. ಸಿ. ನಾಗೇಶ್ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿ, "ಈಗಾಗಲೇ ಸಚಿವರ ಮನೆ ಮೇಲೆ ದಾಳಿ ಮಾಡಲು ಯತ್ನಸಿದವರನ್ನು ಬಂಧಿಸಲಾಗಿದೆ. ಬಿ. ಸಿ. ನಾಗೇಶ್‌ಗೆ ಯಾರು ಶತ್ರುಗಳಿಲ್ಲ. ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ತಲೆಬಾಗಿ ಸಾಮಾನ್ಯ ಕಾರ್ಯಕರ್ತರಂತೆ ರಾಜಕೀಯವೇ ಸೇವೆ ಮಾಡುವಿದನ್ನು ಸಹಿಸದ ಕೆಲವು ಕಿಡಿಗೇಡಿ ಸಂಘಟನೆಗಳು ಈ ಹೇಯ ಕೃತ್ಯ ಮಾಡಿವೆ. ಈ ಘಟನೆಗೆ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಶಂಕಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.

ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ನಿಶ್ಚಿತ

ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ನಿಶ್ಚಿತ

"ಪಠ್ಯ ಪುಸ್ತಕ ಮರುಪರಿಷ್ಕರಣೆಯನ್ನು ಬೌದ್ಧಿಕವಾಗಿ ಎದುರಿಸಲಾಗದ ಕಾಂಗ್ರೆಸ್ ಪಕ್ಷದ ಭಟ್ಟಂಗಿಗಳು ಸಚಿವ ಬಿ. ಸಿ. ನಾಗೇಶ್ ತಿಪಟೂರಿನ ನಿವಾಸದ ಮೇಲೆ ದಾಳಿ ನಡೆಸಿರುವುದು ಹೇಡಿತನ ಮತ್ತು ಅವಿವೇಕದ ಪರಮಾವಧಿ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಖಂಡಿಸಿದ್ದಾರೆ.

"ಕಾಂಗ್ರೆಸ್ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನೇ ನಾಶ ಮಾಡಿ, ಗುಲಾಮಗಿರಿಯನ್ನು ಬೆಳೆಸಿದೆ. ಸ್ವತಂತ್ರ ಆಲೋಚನೆ ಇರುವವರಾರೂ ದಾಳಿಯಂಥ ಅನಾಗರಿಕ ಕೃತ್ಯಗಳಿಗೆ ಮುಂದಾಗುವುದಿಲ್ಲ. ಇದು ಕಾಂಗ್ರೆಸ್ಸಿನ ಸಾಂಸ್ಕೃತಿಕ, ಬೌದ್ಧಿಕ ಮತ್ತು ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ. ಆದರೆ, ಇಂತಹ ಕೀಳು ತಂತ್ರಗಳಿಂದ ಬಿಜೆಪಿ ಸರಕಾರದ ಸ್ಥೈರ್ಯವನ್ನು ಕುಗ್ಗಿಸಲು ಎಂದಿಗೂ ಸಾಧ್ಯವಿಲ್ಲ. ಏಕೆಂದರೆ, ಕಾಂಗ್ರೆಸ್ ಪಕ್ಷವನ್ನು ದೇಶದ ಜನ ಈಗಾಗಲೇ ಕಸದ ಬುಟ್ಟಿಗೆ ಎಸೆದಿದ್ದಾರೆ" ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+