ತುಮಕೂರಲ್ಲೇ ನನ್ನ ಸ್ಪಷ್ಟ ನಿರ್ಧಾರ ತಿಳಿಸುವೆ: ಮುದ್ದಹನುಮೇಗೌಡ

ತುಮಕೂರು, ಮಾರ್ಚ್ 29: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಪಿ. ಮುದ್ದಹನುಮೇಗೌಡ ನಾಮಪತ್ರ ಹಿಂಪಡೆಯುವುದುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಶುಕ್ರವಾರ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಮುದ್ದಹನುಮೇಗೌಡರು ಚುನಾವಣಾ ಅಖಾಡದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಶುಕ್ರವಾರವೇ ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದು ಇವತ್ತೇ ಅವರು ನಾಮಪತ್ರ ಹಿಂಪಡೆಯಲಿದ್ದಾರೆ.

ನಾಮಪತ್ರ ಹಿಂಪಡೆಯುವುದಾಗಿ ಭರವಸೆ

ನಾಮಪತ್ರ ಹಿಂಪಡೆಯುವುದಾಗಿ ಭರವಸೆ

ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ನಾಮಪತ್ರ ಹಿಂಪಡೆಯುವುದಾಗಿ ಮುದ್ದಹನುಮೇಗೌಡರು ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಂಬಲಿಗರು ಹೇಗೆ ಹೇಳ್ತಾರೋ ಹಾಗೆ ನಿರ್ಧಾರ

ಬೆಂಬಲಿಗರು ಹೇಗೆ ಹೇಳ್ತಾರೋ ಹಾಗೆ ನಿರ್ಧಾರ

ಬೆಂಬಲಿಗರು ಹೇಗೆ ಹೇಳುತ್ತಾರೋ ಹಾಗೆಯೇ ನಾನಿ ನಿರ್ಧಾರ ತೆಗೆದುಕೊಳ್ಳುತ್ತೇನೆ, ತುಮಕೂರಿನಲ್ಲಿ ಮತ್ತೊಮ್ಮೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ತುಮಕೂರಿನಿಂದಲೇ ಸ್ಪಷ್ಟ ನಿರ್ಧಾರ ತಿಳಿಸುತ್ತೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡರು ತಿಳಿಸಿದ್ದಾರೆ.

ಏನೇ ತೀರ್ಮಾನ ತೆಗದುಕೊಂಡರೂ ನಿಮ್ಮ ಬೆಂಬಲಕ್ಕಿದ್ದೇವೆ

ಏನೇ ತೀರ್ಮಾನ ತೆಗದುಕೊಂಡರೂ ನಿಮ್ಮ ಬೆಂಬಲಕ್ಕಿದ್ದೇವೆ

ನೀವು ಯಾವುದೇ ತೀರ್ಮಾನ ತೆಗೆದುಕೊಂಡರೂ ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಎಂದು ಮುದ್ದಹನುಮೇಗೌಡರ ಬೆಂಬಲಿಗರು ತಿಳಿಸಿದ್ದಾರೆ. ನೀವೇ ಎಲ್ಲೇ ಇದ್ದರೂ ನಿಮ್ಮ ಪರವಾಗಿ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಪರಿಚಯ

ಸಿದ್ದರಾಮಯ್ಯ ಅವರೊಂದಿಗೂ ಮಾತುಕತೆ ನಡೆಸಿದ್ದರು

ಸಿದ್ದರಾಮಯ್ಯ ಅವರೊಂದಿಗೂ ಮಾತುಕತೆ ನಡೆಸಿದ್ದರು

ನಾಮಪತ್ರ ಹಿಂಪಡೆಯುವ ಕುರಿತು ಗುರುವಾರ ಸಿದ್ದರಾಮಯ್ಯ ನಿವಾಸದಲ್ಲಿ ಕೆ.ಎನ್.ರಾಜಣ್ಣ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಸಭೆ ನಡೆಸಿದ್ದರು. ಸಭೆಯಲ್ಲಿ ಅವರ ಮನವೊಲಿಸಲಾಗಿದ್ದು ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರವನ್ನು ವಾಪಸ್ ಪಡೆಯಲು ಒಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+