ನನ್ನ ರಾಜಕೀಯ ಜೀವನ ಮುಗಿದಿಲ್ಲ : ಮುದ್ದಹನುಮೇಗೌಡ

ತುಮಕೂರು, ಮೇ 21 : 'ನನ್ನ ರಾಜಕೀಯ ಜೀವನ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ದೊಡ್ಡದಾಗಲಿದೆ' ಎಂದು ತುಮಕೂರು ಸಂಸದ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮಂಗಳವಾರ ತುಮಕೂರಿನಲ್ಲಿ ಎಸ್.ಪಿ.ಮುದ್ದಹನುಮೇಗೌಡ ಪತ್ರಿಕಾಗೋಷ್ಠಿ ನಡೆಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತ್ತು. ಹಾಲಿ ಸಂಸದರಾಗಿದ್ದು, ಟಿಕೆಟ್ ಕೈ ತಪ್ಪಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದರು.

'ನನ್ನ ರಾಜಕೀಯ ಜೀವನ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ನನ್ನ ರಾಜಕೀಯ ಚಟುವಟಿಕೆ ಮತ್ತಷ್ಟು ದೊಡ್ಡದಾಗಲಿದೆ' ಎಂದು ಎಸ್.ಪಿ.ಮುದ್ದಹನುಮೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

'ಕಾಂಗ್ರೆಸ್ ಪಕ್ಷ ಮತ್ತು ನಾಯಕರು ನನ್ನನ್ನು ಚೆನ್ನಾಗಿ ನಡೆಸಿಕೊಂಡಿದ್ದಾರೆ. ಈಗ ನಾನು ಹೆಚ್ಚು ರಾಜಕೀಯ ವಿಚಾರ ಮಾತನಾಡುವುದಿಲ್ಲ. ಮುಂದೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಕೆಲಸ ಮಾಡುವೆ' ಎಂದು ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.

My political life not ended says Muddahanume Gowda

'ತುಮಕೂರು ಜಿಲ್ಲೆಯ ಜನರು ನನ್ನ ಮೇಲೆ ಈಗಲೂ ಹೆಚ್ಚಿನ ಪ್ರೀತಿ ಇಟ್ಟಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಿದ್ದೇನೆ' ಎಂದು ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎದುರಿಸಿವೆ. ಮೈತ್ರಿ ಧರ್ಮ ಪಾಲನೆ ಮಾಡಿ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಆದ್ದರಿಂದ, ಮುದ್ದಹನುಮೇಗೌಡ ಅವರಿಗೆ ಟಿಕೆಟ್ ಕೈ ತಪ್ಪಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+