• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭ

|

ತುಮಕೂರು, ಮೇ 07 : ತುಮಕೂರು ಜಿಲ್ಲೆಯ ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಈ ವರ್ಷದಿಂದ ಆರಂಭಗೊಳ್ಳಲಿದೆ. ವಿದ್ಯಾರ್ಥಿಗಳು ಮೂರು ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದಾಗಿದೆ.

ಮಂಗಳವಾರ ತಾಂತ್ರಿಕ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. 2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಿವಿಲ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗಗಳಲ್ಲಿ 3 ವರ್ಷದ ಡಿಪ್ಲೊಮೋ ಕೋರ್ಸ್‌ಗಳು ಆರಂಭಗೊಳ್ಳಲಿವೆ. ಪ್ರತಿ ವಿಭಾಗದಲ್ಲಿ 60 ಸೀಟುಗಳು ಲಭ್ಯವಿರುತ್ತದೆ.

ಪ್ರಥಮ ವರ್ಷದ ಡಿಪ್ಲೊಮೋ ಕೋರ್ಸ್‌ಗಳಿಗೆ ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ 35ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಮತ್ತು ಮಾಹಿತಿ ಪುಸ್ತಕ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಶಿರಾ, ರೇಷ್ಮೆ ಫಾರಂ, ಎನ್‌.ಎಚ್.48, ಸರ್ವೀಸ್ ರಸ್ತೆ ಇವರನ್ನು ಸಂಪರ್ಕಿಸಬಹುದಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Admission will open in new government polytechnic in Sira, Tumakuru district. 60 students will get admission for Civil, Mechanical and Electrical course.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more