ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭ; ಸಚಿವ ಸುರೇಶ್ ಕುಮಾರ್

|
Google Oneindia Kannada News

ತುಮಕೂರು, ಮಾರ್ಚ್ 18: ''ಸದ್ಯ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಇದರಿಂದ ಶೈಕ್ಷಣಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಿದೆ. ಇದರ ನಡುವೆಯೂ ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ'' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಹೇಳಿದರು.

ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಅವರು ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಸೋಂಕಿನ ಭೀತಿಯ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವುದಕ್ಕೆ ತುರ್ತು ಪರಿಸ್ಥಿತಿ ಬಂದೊದಗಿದೆ ಎಂದು ತಿಳಿಸಿದರು.

1ರಿಂದ 5ನೇ ತರಗತಿ ಪ್ರಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?1ರಿಂದ 5ನೇ ತರಗತಿ ಪ್ರಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

''ರಾಜ್ಯದಲ್ಲಿ ಸದ್ಯ 1 ರಿಂದ 5ನೇ ತರಗತಿಗಳನ್ನು ನಡೆಸಬಾರದು. ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಮಾರ್ಚ್ 1ನೇ ತಾರೀಖಿನಿಂದ 1-5ನೇ ತರಗತಿ ಆರಂಭಿಸುವ ಇಚ್ಛೆ ಇತ್ತು. ಆದರೆ ಚರ್ಚೆ ಮಾಡಿ, ಬೇಡ ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆ'' ಎಂದು ಮಾಹಿತಿ ನೀಡಿದರು.

Next Academic Year Begins From July 15; Minister Suresh Kumar

ರಾಜ್ಯದಲ್ಲಿ ಶಾಲೆ ಆರಂಭವಾಗದ ಕಾರಣದಿಂದ ಮಕ್ಕಳು ಗಣಿತವನ್ನೇ ಮರೆತಿದ್ದಾರೆ. ಪಠ್ಯ ವಿಷಯ ಸೇರಿದಂತೆ ಭಾಷೆ ಮರೆತಿದ್ದಾರೆ. ಇದರ ಬಗ್ಗೆ ಅಜೀಂ ಪ್ರೇಮ್ ಜಿ ವಿವಿ ನೀಡಿರುವ ವರದಿ ಆಘಾತಕಾರಿಯಾಗಿದೆ. ಹೀಗಾಗಿ ಜುಲೈ 15 ರಿಂದ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದರು.

English summary
The next academic year will Begin from July 15 said Primary and Secondary Education Minister Suresh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X