ಮಠದ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣವಿಲ್ಲ; ಸಿದ್ದಗಂಗಾ ಶ್ರೀಗಳು

ತುಮಕೂರು, ಜೂನ್ 21 : ಸಿದ್ದಗಂಗಾ ಮಠದ ಯಾವುದೇ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲ ಎಂದು ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂಬ ವದಂತಿಗಳು ಶನಿವಾರ ಹಬ್ಬಿತ್ತು. ಈ ಹಿನ್ನಲೆಯಲ್ಲಿ ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಆಂಧ್ರಪ್ರದೇಶದಿಂದ ಬಂದ ವಿದ್ಯಾರ್ಥಿಗೆ ಕೊರೊನಾ ಪಾಸೀಟಿವ್ ಬಂದಿದೆ ಎಂದು ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನು ಜಿಲ್ಲಾಡಳಿತ ಪರೀಕ್ಷೆ ನಡೆಸಿದ್ದು, ಆತನ ಪರೀಕ್ಷೆಯ ವರದಿ ನೆಗೆಟೀವ್ ಬಂದಿದೆ ಎಂದು ಶ್ರೀಗಳು ಹೇಳಿದ್ದಾರೆ.

No Student Tests Positive For Coronavirus In Siddaganga Mutt

ವಿದ್ಯಾರ್ಥಿ ಇದ್ದ ಕಟ್ಟಡದಲ್ಲಿದ್ದ ಎಲ್ಲಾ 120 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಯಾವ ವಿದ್ಯಾರ್ಥಿಗೂ ಕೂಡಾ ಸೋಂಕಿನ ಲಕ್ಷಣಗಳಿಲ್ಲ ಎಂದು ಮಠ ಸ್ಪಷ್ಟಪಡಿಸಿದೆ.

"ಶ್ರೀ ಮಠದ ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಇಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ" ಎಂದು ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸಹ ಹೇಳಿಕೆ ಕೊಟ್ಟಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್‌ನಿಂದ ಬಂದಿರುವ ವಿದ್ಯಾರ್ಥಿಗೆ ಕೊರೊನಾ ವೈರಸ್ ಸೋಂಕು ಬಂದಿದೆ ಎಂಬ ವದಂತಿ ಹಬ್ಬಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಆತನನ್ನ ಕರೆದುಕೊಂಡು ಹೋಗಿ ಕೋವಿಡ್ -19 ಪರಿಕ್ಷೆ ನಡೆಸಿತ್ತು.

ಮಠದ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಜೂನ್ 25ರಿಂದ ಎಸ್. ಎಸ್. ಎಲ್. ಸಿ ಪರಿಕ್ಷೇಯನ್ನು ಬರೆಯಲಿದ್ದಾರೆ. ಮಠದಲ್ಲಿ ಸಾಮಾಜಿಕ ಅಂತರ ಕಾಪಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+