ಶಿಕ್ಷಣ ಸಚಿವರ ಮನೆ ಮುಂದೆ RSS ಚಡ್ಡಿ ಸುಟ್ಟಿದ್ದ NSUI ಕಾರ್ಯಕರ್ತರಿಗೆ ಜಾಮೀನು
ತುಮಕೂರು, ಜೂನ್ 9: ತಿಪಟೂರಿನಲ್ಲಿ ಶಿಕ್ಷಣ ಸಚಿವರ ಮನೆ ಮುಂದೆ ಆರ್ ಎಸ್ ಎಸ್ ಚಡ್ಡಿ ಸುಡುವ ಮೂಲಕ ಪ್ರತಿಭಟನೆ ನಡೆಸಿ ಜೈಲು ಸೇರಿದ್ದ 25 ಮಂದಿ ಎನ್‌ಎಸ್‌ಯುಐ ಕಾರ್ಯಕರ್ತರಿಗೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾವತಿ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆದೇಶ ಪತ್ರದಲ್ಲಿ ಒಬ್ಬರಿಗೆ ಇಬ್ಬರು ಶ್ಯೂರಿಟಿ ನೀಡಬೇಕೆಂದು ತಿಳಿಸಲಾಗಿದೆ. ನ್ಯಾಯಾಲಯದ ವಿಧಿ ವಿಧಾನಗಳು ಕಾರಾಗೃಹದ ಮುಖ್ಯಸ್ಥರಿಗೆ ತಲುಪಿದ ನಂತರ ಬಂಧಿಯಾಗಿರುವ ಎಲ್ಲಾ ಎನ್ಎಸ್‌ಯುಐ ಕಾರ್ಯಕರ್ತರು ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದರು.
ಕಾರ್ಯಕರ್ತರು ಪಠ್ಯ ಪರಿಷ್ಕರಣೆ ವಿರೋಧಿಸಿ ಹಾಗೂ ಇದುವರೆಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸರಬರಾಜು ಮಾಡದೇ ಇರುವ ಸರಕಾರದ ನಡೆಯನ್ನು ಖಂಡಿಸಿ, ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರು. ಇದು ಯಾವುದೇ ದುರುದ್ಧೇಶ ಪೂರ್ವಕವಾಗಿರಲಿಲ್ಲ. ಪ್ರತಿಭಟನೆ ನಡೆಸಿದ ಎನ್ಎಸ್‌ಯುಐ ಕಾರ್ಯಕರ್ತರ ವಿರುದ್ಧ ಬಾಂಬ್ ಅಥವಾ ಸ್ಪೋಟಕ ವಸ್ತುಗಳನ್ನು ಉಪಯೋಗಿಸುವಂತಹವರಿಗೆ ಹಾಕುವ 462 ಕಾನೂನನ್ನು ಹಾಕಿ ಜಾಮೀನು ರಹಿತ ಪ್ರಕರಣ ದಾಖಲಿಸಿ, ವಿದ್ಯಾರ್ಥಿಗಳನ್ನು ಜೈಲಿಗೆ ಕಳುಹಿಸಿರುವ ಕ್ರಮ ಖಂಡನೀಯ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಬಿಡುಗಡೆಗಾಗಿ ಕೆಪಿಸಿಸಿ ವಕೀಲರ ಘಟಕದಿಂದ ಕಳೆದ ಮೂರು ದಿನಗಳಿಂದಲೂ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಶ್ರಮಪಟ್ಟಿದ್ದಾರೆ. ಬುಧವಾರ ಸಂಜೆ ಜಾಮೀನು ಮಂಜೂರಾಗಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸತ್ಯಕ್ಕೆ ಸಂದ ಜಯವಾಗಿದೆ. ದೆಹಲಿಯ ಮುಖ್ಯಮಂತ್ರಿ ಮನೆಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಾಂಧಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಅವರ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ, ಆದರೆ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರೆಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಜೈಲಿಗೆ ಕಳುಸಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಆರ್ ಎಸ್ ಎಸ್ ಚಡ್ಡಿ ಸುಟ್ಟು ಪ್ರತಿಭಟನೆ
ಕುವೆಂಪು, ಭಗತ್ ಸಿಂಗ್ ಸೇರಿದಂತೆ ಹಲವಾರು ಮಹನೀಯರಿಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅವಮಾನ ಮಾಡಿದೆ ಎಂದು ಎನ್‌ಎಸ್‌ಯುಐ ಜೂನ್ 1 ರಂದು ಪ್ರತಿಭಟನೆ ಮಾಡಿತ್ತು. ಈ ಸಂದರ್ಭಲ್ಲಿ ಆರ್‌ಎಸ್‌ಎಸ್ ನ ಖಾಖಿ ಚಡ್ಡಿಯನ್ನು ಸುಟ್ಟು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಈ ಘಟನೆ ಇಡೀ ಕರ್ನಾಟಕದಾದ್ಯಂತ ಭಾರಿ ಚರ್ಚೆಗೆ ಒಳಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕಳೆದ ಒಂದು ವಾರದಿಂದ ಪರ ವಿರೋಧ ಹೇಳಿಕಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ರಾಜ್ಯಾಂದ್ಯಂತ ಆರ್ ಎಸ್ ಎಸ್ ಚಡ್ಡಿ ಸುಡುವ ಅಭಿಯಾನವನ್ನೇ ಘೋಷಿಸಿದ್ದರು. ಕೆಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಚಡ್ಡಿ ಸುಟ್ಟು ಪ್ರತಿನಡೆಸಿದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿ ಸರಕಾರ ಚಡ್ಡಿಗಳನ್ನು ಕೆಪಿಸಿಸಿ ಕಚೇರಿಗೆ ಪಾರ್ಸಲ್ ಕಳುಹಿಸಿದ್ದರು.
(ಒನ್ಇಂಡಿಯಾ ಸುದ್ದಿ)
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications