ನಮ್ಮ ಬ್ರ್ಯಾಂಡ್ ಚೆಡ್ಡಿಗೆ ಬೆಂಕಿ ಹಚ್ಚಿದ್ದು ಅವಮಾನ: ಸಂಸದ ಜಿ.ಎಸ್. ಬಸವರಾಜು
ತುಮಕೂರು, ಜೂ. 4: ಶಿಕ್ಷಣ ಸಚಿವ ನಾಗೇಶ್ ಮನೆ ಮೇಲೆ ದಾಳಿ ನಡೆಸಿರುವುದು ಖಂಡನೀಯ ವಿಷಯವಾಗಿದ್ದು, ಈ ಕೃತ್ಯ ಎಸಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ವಿಚಾರ ಎಂದು ಸಂಸದ ಜಿ.ಎಸ್ ಬಸವರಾಜು ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತಿಭಟನೆ ಮಾಡುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸದೆ, ಎನ್‌ಎಸ್‌ಯುಐ ಸಂಘಟನೆ ಪುಂಡರು ಏಕಾಏಕಿ ಸಚಿವರ ಮನೆ ಮೇಲೆ ದಾಳಿ ಮಾಡಿರುವುದು ಸರಿಯೇ? ಪುಂಡರು ಪ್ರತಿಭಟನೆ ಮಾಡಿ, ಸಚಿವರ ಕುಟುಂಬದವರ ಪ್ರಾಣಕ್ಕೆ ಹೆಚ್ಚು ಕಮ್ಮಿಯಾಗಿದ್ರೆ, ಯಾರು ಹೊಣೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಅಹಿತಕರ ಘಟನೆ ನಡೆಯಬಾರದಿತ್ತು, ನಡೆದು ಹೋಗಿದೆ, ಪಠ್ಯ ಪುಸ್ತಕದಲ್ಲಿ ಲೋಪ ದೋಷವಿದ್ದರೆ ಸರಿಪಡೆಸುತ್ತೇವೆಂದು ಸಿಎಂ ಹೇಳಿದ್ದಾರೆ. ಇಷ್ಟಿದ್ರೂ ಯಾಕೆ ಸಚಿವರ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಬೇಕಿತ್ತು ಎಂದು ಪ್ರಶ್ನಿಸಿದರು.
ಪೊಲೀಸರ ಅನುಮತಿ ನೀಡದಿದ್ದರೂ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ಎರಡು ತಪ್ಪು ಮಾಡಿದ್ದಾರೆ. ಚೆಡ್ಡಿಗೆ ಬೆಂಕಿ ಹಚ್ಚಿದ್ದು ತಪ್ಪು, ಅದು ನಮ್ಮ ಬ್ರ್ಯಾಂಡ್. ಬೇಕಾದರೆ ನಮ್ಮ ಪೋಟೋ ದಹನ ಮಾಡಲಿ, ಚಡ್ಡಿ ದಹನ ಮಾಡಿದ್ದು ನಾನೆಲ್ಲೂ ನೋಡ್ಲಿಲ್ಲ. ಆರ್ ಎಸ್ ಎಸ್ ಚಡ್ಡಿಗೆ ಬೆಂಕಿ ಹಚ್ಚಿದ್ರೆ ನಮಗೆ ಅವಮಾನ ಮಾಡಿದಂತೆ. ಚೆಡ್ಡಿಗೆ ಬೆಂಕಿ ಹಚ್ಚಿದವರು ಸಚಿವರ ಮನೆಗೆ ಬೆಂಕಿನೂ ಹಾಕುತ್ತಿದ್ದರು. ಪ್ರತಿಭಟನೆ ಮಾಡಲು ಬಂದವರೆಲ್ಲ ಕಿಡಿಗೇಡಿಗಳು, ಎನ್.ಎಸ್.ಯು.ಐ 10 ಜನ ಇದ್ದರೆ, ಆ ಊರಿನಲ್ಲಿ ಇರುವ 150 ಗುಂಡಾಗಳು ಅವರ ಜೊತೆಗೆ ಸೇರ್ಪಡೆಯಾಗ್ತಾರೆ ಎಂದರು.

ಕೆಲ ಕಿಡಿಗೇಡಿ ಸಂಘಟನೆಗಳ ಹೇಯ ಕೃತ್ಯ
ಸಚಿವ ಬಿ.ಸಿ ನಾಗೇಶ್ ಅವರ ಮನೆಯ ಮೇಲಿನ ದಾಳಿ ನಡೆಸಿ, ಬೆಂಕಿ ಹಚ್ಚಲು ಮುಂದಾದ ಎನ್ ಎಸ್ ಯು ಐ ಕಾರ್ಯಕರ್ತರ ಕೃತ್ಯವನ್ನು ಖಂಡಿಸುತ್ತೇನೆ ಎಂದು ಗೃಹಸಚಿವರ ಆರಗ ಜ್ಞಾನೆಂದ್ರ ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆಯ ಮೇಲೆ ಎನ್ ಎಸ್ ಯು ಐ ಕಾರ್ಯಕರ್ತರ ದಾಳಿ ನಡೆದ ಹಿನ್ನಲೆಯಲ್ಲಿ ಶಿಕ್ಷಣ ಸಚಿವರ ಮನೆಗೆ ಗೃಹಸಚಿವ ಭೇಟಿ ನೀಡಿ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಇಗಾಗಲೇ ಸಚಿವರ ಮನೆ ಮೇಲೆ ದಾಳಿ ಮಾಡಲು ಯತ್ನಸಿದವರನ್ನು ಬಂಧಿಸಲಾಗಿದೆ. ಅಜಾತಶತ್ರು ಬಿ.ಸಿ.ನಾಗೇಶ್ ರವರಿಗೆ ಯಾರು ಶತ್ರುಗಳಿಲ್ಲ ಎಂದು ಭಾವಿಸಿ ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ತಲೆಬಾಗಿ ಸಾಮಾನ್ಯ ಕಾರ್ಯಕರ್ತರಂತೆ ರಾಜಕೀಯವೇ ಸೇವೆ ಮಾಡುತ್ತಿದ್ದವರನ್ನು, ಸಹಿಸದ ಕೆಲ ಕಿಡಿಗೇಡಿ ಸಂಘಟನೆಗಳ ಹೇಯ ಕೃತ್ಯವಾಗಿದೆ. ಈ ಘಟನೆಗೆ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಶಂಕಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ನಿಶ್ಚಿತ
ಪಠ್ಯಪುಸ್ತಕ ಮರುಪರಿಷ್ಕರಣೆಯನ್ನು ಭೌದ್ಧಿಕವಾಗಿ ಎದುರಿಸಲಾಗದ ಕಾಂಗ್ರೆಸ್ ಪಕ್ಷದ ಭಟ್ಟಂಗಿಗಳು ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ನಿವಾಸದ ಮೇಲೆ ದಾಳಿ ನಡೆಸಿರುವುದು ಹೇಡಿತನ ಮತ್ತು ಅವಿವೇಕದ ಪರಮಾವಧಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಖಂಡಿಸಿದ್ದಾರೆ. ಕಾಂಗ್ರೆಸ್ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನೇ ನಾಶ ಮಾಡಿ, ಗುಲಾಮಗಿರಿಯನ್ನು ಬೆಳೆಸಿದೆ. ಸ್ವತಂತ್ರ ಆಲೋಚನೆ ಇರುವವರಾರೂ ದಾಳಿಯಂಥ ಅನಾಗರಿಕ ಕೃತ್ಯಗಳಿಗೆ ಮುಂದಾಗುವುದಿಲ್ಲ. ಇದು ಕಾಂಗ್ರೆಸ್ಸಿನ ಸಾಂಸ್ಕೃತಿಕ, ಬೌದ್ಧಿಕ ಮತ್ತು ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ. ಆದರೆ, ಇಂತಹ ಕೀಳು ತಂತ್ರಗಳಿಂದ ಬಿಜೆಪಿ ಸರಕಾರದ ಸ್ಥೈರ್ಯವನ್ನು ಕುಗ್ಗಿಸಲು ಎಂದಿಗೂ ಸಾಧ್ಯವಿಲ್ಲ. ಏಕೆಂದರೆ, ಕಾಂಗ್ರೆಸ್ ಪಕ್ಷವನ್ನು ದೇಶದ ಜನ ಈಗಾಗಲೇ ಕಸದ ಬುಟ್ಟಿಗೆ ಎಸೆದಿದ್ದಾರೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.`ನಾಗೇಶ್ ಅವರ ಮನೆಯ ಮೇಲೆ ಮಾಡಿರುವ ದಾಳಿಯು ಅಸಹಿಷ್ಣುತೆಯ ಸಂಕೇತವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವೈಚಾರಿಕ ಸ್ವಾತಂತ್ರ್ಯಗಳ ಬಗ್ಗೆ ಬಿಜೆಪಿ ಬಗ್ಗೆ ಅನಗತ್ಯವಾಗಿ ಗೂಬೆ ಕೂರಿಸುತ್ತಿರುವ ಸಾಹಿತಿಗಳು ಈಗ ಜಾಣಮೌನಕ್ಕೆ ಜಾರಿರುವುದು ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ತಾನು ಅಧಿಕಾರದಲ್ಲಿಲ್ಲದಿದ್ದಾಗ ಹೆಚ್ಚು ಅಪಾಯಕಾರಿ ಎನ್ನುವ ವಾಜಪೇಯಿಯವರ ಮಾತು ನಿಜವೆಂದು ಇದರಿಂದ ಸಾಬೀತಾಗಿದೆ' ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.

ಶಿಕ್ಷಣ ಸಚಿವ ನಾಗೇಶ್ ಮನೆ ಮೇಲೆ ದಾಳಿ ವಿಚಾರ
ಪೊಲೀಸ್ ಇಲ್ಲದಿದ್ದರೆ ನಾಗೇಶ್ ಮನೆ ಸುಟ್ಟು ಹೋಗುತಿತ್ತು. ಸಚಿವ ನಾಗೇಶ್ ಮನೆ ಸುಟ್ಟು ಹಾಕಲು ಹೋಗಿದ್ದರು. ಸುಮ್ಮನೆ ಯಾರೋ ಹುಡುಗರು ಇದನ್ನು ಮಾಡುವುದಿಲ್ಲ ಇದನ್ನು ಯಾರೋ ಮಾಡಿಸುತ್ತಿದ್ದಾರೆ ನಮ್ಮ ದೇಶದಲ್ಲಿ ಐಕ್ಯತೆ ಮೂಡುವುದು ಯಾವಾಗ ಎಂದು ಡಾ.ಎಸ್.ಎಲ್.ಭೈರಪ್ಪ ತಿಳಿಸಿದ್ದಾರೆ. ಎಂದರು.
ರಾಜ್ಯದಲ್ಲಿ ಪಠ್ಯಪುಸ್ತಕ ಪರಷ್ಕರಣೆ ವಿವಾದಗಳು ನಡೆಯುತ್ತಲೇ ಇವೆ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವಿವಾದ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಾಹಿತಿ ಎಸ್ ಎಲ್. ಬೈರಪ್ಪ , ಪಠ್ಯ ಪುಸ್ತಕದಲ್ಲಿ ಮಕ್ಕಳಿಗೆ ಏನನ್ನು ಹೇಳಬೇಕು ಎಂಬ ನಿಲುವಿಗೆ ಈ ತನಕ ಬರಲಾಗಿಲ್ಲಮಕ್ಕಳಿಗೆ ಇತಿಹಾಸದ ಘಟನೆಗಳ ಬಗ್ಗೆ ನಿಜ ಹೇಳಬೇಕೋ ಅಥವಾ ಸುಳ್ಳು ಹೇಳಬೇಕೋ ನಿಜ ಹೇಳಲು ಇಂದಿರಾಗಾಂಧಿ ಕಾಲದಿಂದಲೂ ಅವಕಾಶ ನೀಡಿಲ್ಲ ಎಂದು ಹೇಳಿದರು.

ಸಚಿವರ ನಿವಾಸದ ಮೇಲೆ ನಡೆದ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರ
ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯು ಐ ಕಾರ್ಯಕರ್ತರು ದಾಳಿ ನಡೆಸಿ ದಾಂಧಲೆ ನಡೆಸಿದ್ದು, ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯ ಪ್ರತೇಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮಾಡಿದ ಕೆಲಸವನ್ನು ವಿರೋಧಿಸುವ ಮತ್ತು ಆಂದೋಲನ ಮಾಡುವ ಅಧಿಕಾರ, ಹಕ್ಕು ಪ್ರತಿಯೊಬ್ಬರಿಗೂ ಇದೆ.ಆದರೆ ಆಂದೋಲನವನನ್ಉ ಮಾಡುವುದು ಬಿಟ್ಟು ಗೂಂಡಾ ವರ್ತನೆ ಮಾಡಿರುವುದು ಖಂಡನೀಯ. ಇದು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ನ ಈ ರೀತಿಯ ಗೂಂಡಾ ಪ್ರವೃತ್ತಿಯನ್ನು ನೋಡಿದ ಜನರು ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ ಎಂದರು. ಸಚಿವರ ನಿವಾಸದ ಮೇಲೆ ನಡೆದ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರ. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯೇ ಇದಕ್ಕೆ ಕಾರಣ. ಇಂತಹ ವರ್ತನೆ ಮುಂದುವರಿದರೆ ನಮ್ಮ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications