ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರಿನಲ್ಲಿ ತಿಂಗಳಿಗೊಂದು ಬಲಿ ಪಡೆದ ಚಿರತೆ ಸೆರೆ ಕಾರ್ಯಾಚರಣೆ

|
Google Oneindia Kannada News

ತುಮಕೂರು, ಜನವರಿ.13: ತುಮಕೂರಿನಲ್ಲಿ ತಿಂಗಳಿಗೆ ಒಂದು ಬಲಿ ಪಡೆದ ನರಭಕ್ಷಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಸುತ್ತಮುತ್ತಲಿನಲ್ಲಿ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಣಿಕುಪ್ಪೆ ಗ್ರಾಮ, ದೊಡ್ಡಮಳಲವಾಡಿ, ಚಿಕ್ಕಮಳಲವಾಡಿ ಹಾಗೂ ಹೆಬ್ಬೂರು ಗ್ರಾಮಗಳಲ್ಲಿ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ತುಮಕೂರಿನಲ್ಲಿ ಚಿರತೆ ದಾಳಿಗೆ ತಿಂಗಳಿಗೆ ಒಂದು ಬಲಿತುಮಕೂರಿನಲ್ಲಿ ಚಿರತೆ ದಾಳಿಗೆ ತಿಂಗಳಿಗೆ ಒಂದು ಬಲಿ

ಸಿ.ಎಸ್.ಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಬೋನ್ ಗಳನ್ನು ಇರಿಸಲಾಗಿದೆ. ಬನ್ನೇರುಘಟ್ಟ ಬಂಡೀಪುರ, ನಾಗರಹೊಳೆ ಅರಣ್ಯ ಸಿಬ್ಬಂದಿ ಹಾಗೂ ಸ್ಪೆಷಲ್ ಟೈಗರ್ ಫೋರ್ಸ್ ಸೇರಿದಂತೆ 60ಕ್ಕೂ ಹೆಚ್ಚು ಸಿಬ್ಬಂದಿಯು ಚಿರತೆ ಸೆರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Operation Cheetah: 20 Cages Kept Surround Tumkur

ನಾಲ್ಕು ಚಿರತೆಗಳು ಇರುವ ಶಂಕೆ:

ತುಮಕೂರು ಜಿಲ್ಲೆಯಲ್ಲಿ ಚಿರತೆ ದಾಳಿಗೆ ಕಳೆದ ಮೂರು ತಿಂಗಳಿನಲ್ಲಿ ಮೂವರು ಪ್ರಾಣ ಬಿಟ್ಟಿದ್ದರು. ಸಿ.ಎಸ್. ಪುರ ಬಳಿ ಇದೀಗ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ನಾಲ್ಕು ಚಿರತೆಗಳು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Operation Cheetah: 20 Cages Kept Surround Tumkur

ಕಳೆದ ವಾರವಷ್ಟೇ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಣಿಕುಪ್ಪೆಯಲ್ಲಿ ಚಿರತೆ ದಾಳಿಗೆ ಜನವರಿ.09ರಂದು ಐದು ವರ್ಷದ ಪುಟ್ಟ ಬಾಲಕ ಸಮರ್ಥಗೌಡ ಬಲಿಯಾಗಿದ್ದನು. ಇದರಿಂದ ಕೆರಳಿದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

English summary
Operation Cheetah: 20 Cages Kept Surround Tumkur District Manikuppe Village From Forest Officers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X