ತುಮಕೂರಿನಲ್ಲಿ ಭೀಕರ ಅಪಘಾತ ಪ್ರಕರಣ: ಪರಿಹಾರ ಘೋಷಿಸಿದ ಪಿಎಂ ಮೋದಿ
ತುಮಕೂರು ಆಗಸ್ಟ್ 25: ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50000 ರೂಪಾಯಿಗಳನ್ನು ಘೋಷಿಸಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರಿನ ದಿನಗೂಲಿ ಕಾರ್ಮಿಕರಾಗಿದ್ದು, ಬೆಂಗಳೂರು ಕಡೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
Koo AppShocked to hear the news that 9 people died and more than 13 others were injured in a terrible road accident near Shira in Tumkur district. I am deeply saddened to know that the deceased were labourers, all of them were coming from Raichur to Bangalore to work. I demand that the Chief Minister Mr. @bsbommai himself should immediately take action and provide adequate compensation to all the families of those who lost their lives and provide the best treatment to the injured free of cost. May all the injured get well soon. - H D Kumaraswamy (@h_d_kumaraswamy) 25 Aug 2022
ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್‌ನಲ್ಲಿ 20 ಮಂದಿ ಇದ್ದರೆಂದು ತಿಳಿದು ಬಂದಿದೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದೆ ಎಂದು ಘಟನೆಯಲ್ಲಿ ಬದುಕುಳಿದವರು ತಿಳಿಸಿದ್ದಾರೆ.
Koo Appತುಮಕೂರಿನ ಶಿರಾ ಬಳಿ ಇಂದು ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದ್ದು 9 ಮಂದಿ ಮೃತಪಟ್ಟು, 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮಾನ್ಯ ಪ್ರಧಾನಿ ಶ್ರೀ @narendramodi ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. - Araga Jnanendra (@aragajnanendra) 25 Aug 2022

ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣದ ವೇಳೆ ಘಟನೆ
ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು ರಾಯಚೂರು ಜಿಲ್ಲೆಯ ವಿವಿಧೆಡೆಗಳಿಂದ ಬೆಂಗಳೂರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಮೃತರನ್ನು ಸಿಂಧನೂರು, ಲಿಂಗಸೂರು, ದೇವದುರ್ಗದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೂವರು ಮಹಿಳೆಯರು, ನಾಲ್ಕು ಮಂದಿ ಪುರುಷರು ಮತ್ತು ಇಬ್ಬರು ಮಕ್ಕಳು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ ಹಾಗೂ ಶಿರಾ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂದೀಪ, ಬಾಲಾಜಿ, ಅನಿಲ್ ಎಂಬ ಮೂರು ಜನ ಮಕ್ಕಳು ಸೇರಿದಂತೆ ಒಟ್ಟು 12 ಮಂದಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವದುರ್ಗ ತಾಲ್ಲೂಕಿನ ನಾಗಮ್ಮ (50) ಮತ್ತು ಉಮೇಶ್ (28) ಎಂಬುವರನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಟೆಂಪೋ ಚಾಲಕ ಕೃಷ್ಣಪ್ಪ, ಸುಜಾತ, ಬಾಲಕ ವಿನೋದ, ಲಕ್ಷ್ಮೀ ಸಹಿತ ಮೃತರ ವಿವರ ಗೊತ್ತಾಗಿದೆ. ಉಳಿದವರ ವಿವರ ಖಚಿತವಾಗಿಲ್ಲ. ದುರುಗಮ್ಮ, ಬಾಲರಾಜು, ಸಂದೀಪ್, ಉಮೇಶ್, ಯಲ್ಲಮ್ಮ, ಅನಿಲ್, ದೇವರಾಜು, ಮೌನಿಕ, ನಾಗಪ್ಪ, ನಾಗಮ್ಮ, ವಸಂತ್, ವೈಷ್ಣವಿ, ವೀರಭದ್ರ, ಲತಾ ಅಪಘಾತದಲ್ಲಿ ಗಾಯಗೊಂಡವರಾಗಿದ್ದಾರೆ.
ಟೆಂಪೊದಲ್ಲಿದ್ದ ಶಿವರಾಜು ಎಂಬುವವರು ಮಾತನಾಡಿ, 'ನಾನು ಡ್ರೈವರ್ ಪಕ್ಕ ಕೂತಿದ್ದೆ, ಟೆಂಟೊ ನಿಧಾನಕ್ಕೆ ಹೋಗಿತ್ತು, ಲಾರಿ ಡಿಕ್ಕಿ ಹೊಡೆದ ಮೇಲೆ ಟೆಂಪೊ ಪಲ್ಟಿ ಹೊಡೆದುಬಿಡ್ತು' ಎಂದಿದ್ದಾರೆ. ಇಪ್ಪತ್ತು ಜನರು ಟೆಂಪಪೊದಲ್ಲಿ ಇದ್ದರು. ಭರ್ತಿ ಆಗಿದ್ದರಿಂದ ಮೌಲ ಮತ್ತೆ ಇನ್ನಿಬ್ಬರು ಟೆಂಪೊ ಮೇಲೆ ಮಲಗಿದ್ದರು. ಟೆಂಪೊ ಮೇಲೆ ಮಲಗಿದ್ದವರಲ್ಲಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೂಕ್ತ ಪರಿಹಾರಕ್ಕೆ ಬೊಮ್ಮಾಯಿಗೆ ಒತ್ತಾಯ
ಘಟನೆ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, 'ತುಮಕೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಸಂಕಟವಾಯಿತು. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಕ್ತ ಪರಿಹಾರ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.

ಘಟನೆ ಬಗ್ಗೆ ಬಸವರಾಜ ಬೊಮ್ಮಾಯಿ ಸಂತಾಪ
ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದು, 'ಇದೊಂದು ಅತ್ಯಂತ ದುರಾದೃಷ್ಟಕರ ಘಟನೆ' ಎಂದಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗಳ ಮಾತನಾಡಿದ್ದು, ಗಾಯಾಳುಗಳಿಗೆ, ಸೂಕ್ತ ಚಿಕಿತ್ಸೆ ಒದಗಿಸಲು, ನಿರ್ದೇಶನ ನೀಡಲಾಗಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯ
'ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ. ತಕ್ಷಣವೇ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ. ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications