ದೂರವಾಣಿ ಮೂಲಕ ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಮೋದಿ

ತುಮಕೂರು, ಮೇ 15 : ಪಿತ್ತನಾಳ ಸೋಂಕಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠಾಧೀಶ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ವಿಚಾರಿಸಿದರು.

ಭಾನುವಾರ ಸಂಜೆ ಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಕರೆ ಮಾಡಿದ ಪ್ರಧಾನಿ, ಸ್ವಾಮೀಜಿಯವರ ಆರೋಗ್ಯ ಸಮಸ್ಯೆ, ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡರು.[ಸುಸ್ತನ್ನೂ ಲೆಕ್ಕಿಸದೆ ಸಿದ್ದಗಂಗಾ ಮಠದಲ್ಲಿ ಭಕ್ತರ ಭೇಟಿ ಮಾಡಿದ ಶಿವಕುಮಾರ ಸ್ವಾಮೀಜಿ]

PM Narendra Modi enquired about the health conditions of Siddaganga Seer

'ಸ್ವಾಮೀಜಿಯವರಿಗೆ ನನ್ನ ಪ್ರಣಾಮಗಳನ್ನು ತಿಳಿಸಿ. ಶೀಘ್ರದಲ್ಲೇ ಮಠಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ಹೇಳಿದರು' ಎಂದು ಮಠದ ಪ್ರಕಟಣೆ ತಿಳಿಸಿದೆ

ಕೆಲ ದಿನಗಳಿಂದ ಪಿತ್ತನಾಳ ಸೋಂಕಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ 110 ವರ್ಷದ ಶಿವಕುಮಾರ ಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಸಾಮಿಜಿಗಳ ಆರೋಗ್ಯ ಸುಧಾರಿಸಿದ್ದು ಮಠದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+