ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು ಕದನ ಕುತೂಹಲ : ದೊಡ್ಡ ಗೌಡರಿಗೆ ಜಯ ಸಿಗುವುದೇ?

|
Google Oneindia Kannada News

Recommended Video

Lok Sabha Elections 2019: ಕಾಂಗ್ರೆಸ್ ಭದ್ರಕೋಟೆಯಲ್ಲಿ ಜೆಡಿಎಸ್ ಗೆಲ್ಲುತ್ತಾ?

ತುಮಕೂರು, ಏಪ್ರಿಲ್ 14 : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸ್ಪರ್ಧೆಯಿಂದ ಕುತೂಹಲ ಕೆರಳಿಸಿರುವ ಕ್ಷೇತ್ರ ತುಮಕೂರು. 1996ರ ಬಳಿಕ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿಲ್ಲ, ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಏಪ್ರಿಲ್ 18ರಂದು ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಜಿ.ಎಸ್.ಬಸವರಾಜು ಅಭ್ಯರ್ಥಿ. ಕಾಂಗ್ರೆಸ್-ಜೆಡೆಡಿಎಸ್ ಅಭ್ಯರ್ಥಿಯಾಗಿ 85 ವರ್ಷದ ಎಚ್.ಡಿ.ದೇವೇಗೌಡರಯ ಕಣದಲ್ಲಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣಾ ಪುಟ

ಹಾಸನ ಕ್ಷೇತ್ರದ ಹಾಲಿ ಸಂಸದ ಎಚ್.ಡಿ.ದೇವೇಗೌಡ ಅವರು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಆದ್ದರಿಂದ, ತುಮಕೂರಿನಿಂದ ಈ ಬಾರಿಯ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅವರಿಗೆ ಹೆಚ್ಚಿನ ಬಲವೂ ಸಿಕ್ಕಿದೆ.

ತುಮಕೂರು ಕ್ಷೇತ್ರದ ಇತಿಹಾಸದಲ್ಲಿ 11 ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. 2014ರ ಚುನಾವಣೆಯಲ್ಲಿಯೂ ಕಾಂಗ್ರೆಸ್‌ನ ಎಸ್.ಪಿ.ಮುದ್ದಹನುಮೇಗೌಡ ಗೆದ್ದಿದ್ದರು. ಆದರೆ, ಕಾಂಗ್ರೆಸ್‌-ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ಸಂಸದರಾದರೂ ಅವರಿಗೆ ಟಿಕೆಟ್ ಕೈ ತಪ್ಪಿದೆ.....

ಜೆಡಿಎಸ್ ಪಕ್ಷ ಗೆದ್ದಿಲ್ಲ

ಜೆಡಿಎಸ್ ಪಕ್ಷ ಗೆದ್ದಿಲ್ಲ

1996ರಲ್ಲಿ ಜನತಾದಳದಿಂದ ಸಿ.ಎನ್.ಭಾಸ್ಕರಪ್ಪ ಗೆಲುವು ಸಾಧಿಸಿದ್ದರು. ಆ ಬಳಿಕ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿಲ್ಲ. ಕಾಂಗ್ರೆಸ್ ಕ್ಷೇತ್ರದಲ್ಲಿ 11 ಬಾರಿ ಗೆದ್ದಿದೆ. ಆದರೆ, ಈ ಬಾರಿ ಮೈತ್ರಿಯ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿಯೇ ಕಣದಲ್ಲಿಲ್ಲ. ಜೆಡಿಎಸ್ ವರಿಷ್ಠರೇ ಈ ಬಾರಿ ಕಣಕ್ಕಿಳಿದಿದ್ದಾರೆ. ಆದ್ದರಿದ, ತೆನೆ ಹೊತ್ತ ಮಹಿಳೆಗೆ ಜಯ ಸಿಗಲಿದೆಯೇ? ಕಾದು ನೋಡಬೇಕು.

ವಿಧಾನಸಭೆ ಬಲಾಬಲ

ವಿಧಾನಸಭೆ ಬಲಾಬಲ

ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತುಮಕೂರು ನಗರ, ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಕೊರಟಗೆರೆ, ತುಮಕೂರು ಗ್ರಾಮಾಂತರ, ಮಧುಗಿರಿ, ಗುಬ್ಬಿ ವಿಧಾನಸಭಾ ಕ್ಷೇತ್ರಗಳಿವೆ.

* ಬಿಜೆಪಿ : ತುಮಕೂರು ನಗರ, ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ
* ಕಾಂಗ್ರೆಸ್ : ಕೊರಟಗೆರೆ
* ಜೆಡಿಎಸ್ : ತುಮಕೂರು ಗ್ರಾಮಾಂತರ, ಮಧುಗಿರಿ, ಗುಬ್ಬಿ

ಗೆಲ್ಲಿಸಲು ಪಣ ತೊಟ್ಟ ಜೆಡಿಎಸ್, ಕಾಂಗ್ರೆಸ್

ಗೆಲ್ಲಿಸಲು ಪಣ ತೊಟ್ಟ ಜೆಡಿಎಸ್, ಕಾಂಗ್ರೆಸ್

ತುಮಕೂರು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ತವರು ಕ್ಷೇತ್ರ. ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ, ಸಚಿವ ಎಸ್.ಆರ್.ಶ್ರೀನಿವಾಸ್ ಅವರು ಎಚ್.ಡಿ.ದೇವೇಗೌಡರನ್ನು ಗೆಲ್ಲಿಸಲು ಪಣತೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ತುಮಕೂರಿನಲ್ಲಿ ಪ್ರಚಾರ ನಡೆಸಿ ಬಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಪ್ರಚಾರ ಮಾಡಿದ್ದಾರೆ.

ಬಂಡಾಯ ಶಮನವಾಗಿದೆ

ಬಂಡಾಯ ಶಮನವಾಗಿದೆ

2014ರ ಚುನಾವಣೆಯಲ್ಲಿ ಗೆದಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರು ಈ ಬಾರಿ ಟಿಕೆಟ್ ಸಿಕ್ಕಿಲ್ಲ ಎಂದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮತ್ತೊಂದು ಕಡೆ ಮಧುಗಿರಿಯ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ, ಕಾಂಗ್ರೆಸ್ ನಾಯಕರು ಬಂಡಾಯ ಶಮನಗೊಳಿಸಿದ್ದಾರೆ.

ಕಳೆದ ಚುನಾವಣೆಗಳ ಫಲಿತಾಂಶ

ಕಳೆದ ಚುನಾವಣೆಗಳ ಫಲಿತಾಂಶ

2009ರ ಚುನಾವಣೆಯಲ್ಲಿ ಬಿಜೆಪಿಯ ಜಿ.ಎಸ್.ಬಸವರಾಜು ಅವರು ಗೆದ್ದಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರು ಸೋಲು ಕಂಡಿದ್ದರು.

2014ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್.ಪಿ.ಮುದ್ದಹುನುಮೇಗೌಡ ಅವರು 4,29,868 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಜಿ.ಎಸ್.ಬಸವರಾಜು ಅವರು 3,55,827 ಮತ ಪಡೆದಿದ್ದರು. ಜೆಡಿಎಸ್‌ನ ಎ.ಕೃಷ್ಣಪ್ಪ ಅವರು 2,58,683 ಮತ ಪಡೆದಿದ್ದರು.

English summary
Tumakuru lok sabha seat political picture. H.D.Deve Gowda Congress-JD(S) candidate and G.S.Basavaraj BJP candidate. Election will be held on April 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X