ತುಮಕೂರಲ್ಲಿ ಬಿಜೆಪಿ ತರಾಟೆಗೆ ತೆಗೆದುಕೊಂಡ ಅಂಬೇಡ್ಕರ್ ಮೊಮ್ಮಗ ಪ್ರಕಾಶ್
ತುಮಕೂರು, ಮಾರ್ಚ್ 30: ಅಂಬೇಡ್ಕರ್ ಹೆಸರಿನ ಮುಂದೆ ರಾಮ್ ಜೀ ಎಂದು ಸೇರಿಸಿದ ಉತ್ತರ ಪ್ರದೇಶ ಸರಕಾರದ ನಿರ್ಧಾರಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಶುಕ್ರವಾರ ಇಲ್ಲಿನ ಸಿದ್ದಗಂಗಾ ಮಠದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿದರು. ಇದೊಂದು ಕೆಟ್ಟ ನಡೆ ಎಂದು ಅವರು ಅಸಮಾಧಾನದಿಂದ ಹೇಳಿದರು.
ಉತ್ತರ ಪ್ರದೇಶದಲ್ಲಿ ರಾಮಮಂದಿರ ಕಟ್ಟುವ ನೆಪದಲ್ಲಿ ಯೋಗಿ ಆದಿತ್ಯನಾಥ್ ರ ಸರಕಾರ ಇಂಥ ಕೆಲಸಕ್ಕೆ ಕೈ ಹಾಕಿದೆ ಎಂದು ಆರೋಪಿಸಿದ ಅವರು, ಅಲ್ಲಿನ ರಾಜ್ಯ ಸರಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಇನ್ನು ಯಾರಿಂದಲೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಉತ್ತರ ಕನ್ನಡ ಸಂಸದ- ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ಪ್ರಕಾಶ ಅಂಬೇಡ್ಕರ್. ಆ ಕ್ಷೇತ್ರದಾಲ್ಲಿ ತಾಜುದ್ದೀನ್ ಷರೀಫ್ ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿದ್ದಾರೆ. ಇನ್ನು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದು ತುಂಬಾ ಖುಷಿಯಾಗಿದೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದರು.












Click it and Unblock the Notifications