ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿ: ಕಠಿಣ ಶಿಕ್ಷೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ
ತುಮಕೂರು, ಜನವರಿ 18: ರಾಜ್ಯದಲ್ಲಿ ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತುಮಕೂರು ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಗೋವುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮುಖಂಡ ಕೋರಿ ಮಂಜುನಾಥ್ ಮಾತನಾಡಿ, 'ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ, ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವರಿಗೆ ಹರಕೆ ಬಿಟ್ಟಿದ್ದ ಗೂಳಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಕೃತ್ಯ ಖಂಡನೀಯ. ಗೋವುಗಳನ್ನು ಪೂಜಿಸುವ ಹಿಂದೂಗಳ ಭಾವನೆಗೆ ಈ ಪ್ರಕರಣಗಳು ನೋವು ಉಂಟು ಮಾಡಿವೆ. ದುಷ್ಕೃತ್ಯ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು' ಎಂದು ಒತ್ತಾಯಿಸಿದರು.
ಸಂಘನೆಯ ಮುಖಂಡ ಪ್ರದೀಪ್ ಮಾತನಾಡಿ, 'ನಮ್ಮ ಪೂಜ್ಯನೀಯ, ನಿರುಪದ್ರವಿ ಗೋವಿನ ಕೆಚ್ಚಲು ಕೊಯ್ದಿದ್ದಾರೆ, ಹರಕೆ ಗೂಳಿಯ ಮೇಲೆ ಅಮಾನುಷ ಹಲ್ಲೆ ಮಾಡಿದ್ದಾರೆ. ಈ ಪ್ರಕರಣಗಳು ಗೋವನ್ನು ಪೂಜಿಸುವ ಹಿಂದೂಗಳ ಭಾವನೆ ಧಕ್ಕೆ ಮಾಡಿ, ನೋವು ಉಂಟು ಮಾಡುವ ಉದ್ದೇಶದ ಪೂರ್ವಯೋಜಿತ ಕೃತ್ಯ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು, ಕೃತ್ಯದ ಹಿಂದಿರುವ ಎಲ್ಲರನ್ನೂ ಬಂಧಿಸಿ ಶಿಕ್ಷೆಗೊಳಪಡಿಸಬೇಕು, ಇಂತಹ ಪ್ರಕರಣಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು' ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, 'ನಾವು ಹೆತ್ತ ತಾಯಿ ಹಾಗೂ ಹಸುವಿನ ಹಾಲು ಕುಡಿದು ಬೆಳೆದವರು. ಗೋವು ನಮಗೆ ತಾಯಿ ಸಮಾನ, ಗೋವುಗಳನ್ನು ತಾಯಿಯಂತೇ ಗೌರವಿಸುವ ಸಂಸ್ಕೃತಿ ನಮ್ಮದು. ಗೋವುಗಳ ಬಗ್ಗೆ ಪೂಜ್ಯ ಭಾವನೆ ಹೊಂದಿರುವ ನಮಗೆ ಗೋವುಗಳ ಮೇಲಿನ ಹಲ್ಲೆ ಸಹಿಸಲು ಸಾಧ್ಯವಿಲ್ಲ. ಗೋವುಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಕೊಲೆ ಯತ್ನದ ಸೆಕ್ಷನ್ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು' ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿವಿಧ ಸಂಘಟನೆಗಳ ಮುಖಂಡರಾದ ಜಿ.ಕೆ.ಶ್ರೀನಿವಾಸ್, ನಾಗೇಂದ್ರಪ್ರಸಾದ್, ಜಿ.ಎಸ್.ಬಸವರಾಜು, ಸಿದ್ದೇಶ್, ಉಮೇಶ್, ಭಾಸ್ಕರಾಚಾರ್, ಬಿಜೆಪಿ ಮುಖಂಡರಾದ ಎಸ್.ಶಿವಪ್ರಸಾದ್, ಬ್ಯಾಟರಂಗೇಗೌಡ, ಟಿ.ಹೆಚ್.ಹನುಮಂತರಾಜು, ಸಂದೀಪ್ ಗೌಡ, ಭೈರಣ್ಣ, ವಿಷ್ಣುವರ್ಧನ್, ಸತ್ಯಮಂಗಲ ಜಗದೀಶ್, ಚೇತನ್, ಧನುಷ್, ಬನಶಂಕರಿ ಬಾಬು, ಜ್ಯೋತಿ ತಿಪ್ಪೇಸ್ವಾಮಿ, ರಾಮಚಂದ್ರರಾವ್, ವೆಂಕಟೇಶಾಚಾರ್, ಶಬ್ಬೀರ್ ಅಹ್ಮದ್, ಹನುಮಂತರಾಜು, ಪ್ರಮೋದ್ ಗೌಡ ಮೊದಲಾದವರು ಭಾಗವಹಿಸಿದ್ದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications