ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ; ಆರೋಪಿ ಶಿವಕುಮಾರ್‌ ಕೋವಿಡ್‌ಗೆ ಬಲಿ

ತುಮಕೂರು, ಮೇ 19; ದ್ವಿತೀಯ ಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್‌ಗೆ ಬಲಿಯಾಗಿದ್ದಾನೆ. 2016ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯನ್ನು 2 ಬಾರಿ ಈತ ಸೋರಿಕೆ ಮಾಡಿದ್ದ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವಕುಮಾರ್ (65) ಉಸಿರಾಟದ ಸಮಸ್ಯೆಯಿಂದಾಗಿ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾನೆ.

ಎಸ್‌. ಎಸ್. ಎಲ್‌. ಸಿ., ದ್ವಿತೀಯ ಪಿಯುಸಿ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಸೇರಿದಂತೆ ವಿವಿಧ ಸ್ಮರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಶಿವಕುಮಾರ್ ಪ್ರಮುಖ ಆರೋಪಿಯಾಗಿದ್ದ. 2011 ಮತ್ತು 2012ರಲ್ಲಿ ತುಮಕೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು.

PUC Question Paper Leak Scam Shivakumar Dies Due To COVID

2013ರಲ್ಲಿ ಬೆಂಗಳೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದೇವೇಂದ್ರ, ತುಮಕೂರಿನ ಮಲ್ಲೇಶ್ ಬಂಧಿಸಲಾಗಿತ್ತು. ಆಗ ಸೋರಿಕೆ ಹಗರಣದ ಕಿಂಗ್ ಪಿನ್ ಶಿವಕುಮಾರ್ ಎಂಬುದು ಬಹಿರಂಗವಾಗಿತ್ತು.

2016ರಲ್ಲಿ ಎರಡು ಬಾರಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ, 2018ರಲ್ಲಿ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿಯೂ ಶಿವಕುಮಾರ್ ಆರೋಪಿ. ಹಲವಾರು ಪ್ರಕರಣದಲ್ಲಿ ಶಿವಕುಮಾರ್ ವಿಚಾರಣೆ ಎದುರಿಸುತ್ತಿದ್ದ.

ತುಮಕೂರು ಜಿಲ್ಲೆಯಲ್ಲಿ ಮಂಗಳವಾರದ ವರದಿಯಂತೆ 1562 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 26,554.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+