ರೋಹಿತ್ ಚಕ್ರತೀರ್ಥರಿಂದ ಗಡೀಪಾರು ಮಾಡುವಂಥ ಅಪರಾಧ ಆಗಿಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ
ತುಮಕೂರು, ಜೂ. 1: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರನ್ನು ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಅಷ್ಟಕ್ಕೂ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬುಧವಾರ ಪ್ರಶ್ನಿಸಿದರು.
ನಗರದಲ್ಲಿ ಜಿಪಂ ಕೆಡಿಪಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗಡಿಪಾರು ಮಾಡಬೇಕೆಂದರೆ ಅದಕ್ಕೆ ಆದಂತಹ ನಿಯಮಾವಳಿಗಳಿವೆ. ಈ ರೀತಿ ಮಾತನಾಡುವವರಿಗೆ ಆ ನಿಯಮಾವಳಿಗಳ ಬಗ್ಗೆ ಗೊತ್ತಿಲ್ಲ. ರೋಹಿತ್ ಚಕ್ರತೀರ್ಥ ಗಡಿಪಾರು ಆಗುವಂತಹ ಅಪರಾಧ ಏನು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದು ಅದನ್ನೆಲ್ಲ ನಾವು ಕೇಳಲು ಸಾಧ್ಯವಿಲ್ಲ" ಎಂದು ಹೇಳಿದರು.
ಬಸವಣ್ಣನ ಪಠ್ಯ ತಿರುಚಲಾಗಿದೆ ಎಂದು ಸ್ವಾಮೀಜಿಯವರು ಸಿಟ್ಟಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿಕ್ಷಣ ಸಚಿವರು ಆ ಬಗ್ಗೆ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.
ಈ ಘಟನೆ 2017 ರಲ್ಲಿ ಆಗಿರುವಂತಹದ್ದು. ಈಗಾಗಲೇ ಆ ಬಗ್ಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೆ ಬಿ ರಿಪೋರ್ಟ್ ಕೂಡ ಹಾಕಲಾಗಿದೆ. ಹೀಗಿದ್ದರೂ ವಿನಾ ಕಾರಣ ಈಗ ಆ ಘಟನೆಗಳ ಬಗ್ಗೆ ಇಲ್ಲಸಲ್ಲದನ್ನು ಎಬ್ಬಿಸುತ್ತಿದ್ದಾರೆ, ಚರ್ಚೆಯಾಗುವಂತೆ ಮಾಡುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾತ್ರಿ ರಾಜ್ಯದ ಜಿಎಸ್ಟಿ ಪಾಲನ್ನು ರಾಜ್ಯ ಸರ್ಕಾರಕ್ಕೆ ಜಮಾ ಮಾಡಿದೆ. ನಮ್ಮ ರಾಜ್ಯದ ಜಿ.ಎಸ್.ಟಿ ಪಾಲನ್ನು ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಸಾಹಿತ್ಯ ಹಿಂಪಡೆಯಲು ಪತ್ರ ಬರೆಯುವುದು ಸರಿಯಲ್ಲ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, "ಕುವೆಂಪು ಗೀತೆಗಳನ್ನು ನಾಡಗೀತೆಗಳನ್ನಾಗಿ ಮಾಡಿದ್ದೇ ಬಿಜೆಪಿ ಸರ್ಕಾರ. ಪ್ರತಿಪಕ್ಷ ನಾಯಕರು ಹಳೆಯ ವಿಚಾರಗಳನ್ನು ಹಿಡಿದು ನೇತಾಡುತ್ತಿದ್ದಾರೆ. ಪಠ್ಯ ಪುಸ್ತಕದಲ್ಲಿ ಏನಾದರೂ ತಪ್ಪುಗಳಿದ್ದರೇ ಹೇಳಿ ಅದನ್ನು ಸರಿಪಡಿಸುತ್ತೇವೆ. ಮುಖ್ಯಮಂತ್ರಿ ಕೂಡಾ ಇದೇ ಭರವಸೆಯನ್ನು ನೀಡಿದ್ದಾರೆ. ರಾಷ್ಟ್ರಕವಿ ಕುವೆಂಪುರವರಿಗೆ ನಾವು ಯಾವುದೇ ರೀತಿಯ ಅವಮಾನ ಮಾಡಿಲ್ಲ. ಸಾಹಿತಿಗಳು ತಮ್ಮ ಸಾಹಿತ್ಯವನ್ನು ಹಿಂಪಡೆಯಲು ಸರ್ಕಾರಕ್ಕೆ ಪತ್ರ ಬರೆಯುವುದು ಸರಿಯಲ್ಲ. ಅದರ ಬದಲು ಏನು ಸರಿಮಾಡಬೇಕು ಎಂದು ಸಲಹೆ ಕೊಡಲಿ" ಎಂದು ತಿಳಿಸಿದ್ದಾರೆ.

ಕೆಲ ಲೇಖಕರು ಪತ್ರಕ್ಕೆ ಪ್ರತಿಕ್ರಿಯೆ
ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ಸಂಸದ ಪ್ರತಾಪಸಿಂಹ, ರೋಹಿತ್ ಚಕ್ರತೀರ್ಥ ಅವರಿಂದ ಕುವೆಂಪು ಮತ್ತು ನಾಡಗೀತೆಗೆ ಅವಮಾನವಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದರು.
ಪಠ್ಯದಿಂದ ತಮ್ಮ ಅಧ್ಯಾಯ ಕೈ ಬಿಡಬೇಕು ಎಂದು ಕೆಲ ಲೇಖಕರು ಪತ್ರಗಳನ್ನು ಬರೆದಿರುವ ವಿಚಾರದ ಬಗ್ಗೆ ಸಂಸದ ಪ್ರತಾಪಸಿಂಹ ಮಾತನಾಡಿ, "ಮೊದಲು ಭಗತ್ ಸಿಂಗ್ ನಾರಾಯಣ್ ಗುರು ವಿಚಾರವಾಗಿ ಚರ್ಚೆ ನಡೆಯಲಿ. ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದರೂ ಬರಲಿಲ್ಲ. ಇವರು ವಿಚಾರ ಹೀನರಾಗಿಲ್ಲದಿದ್ದರೆ ಚರ್ಚೆಗೆ ಬರುತ್ತಿದ್ದರು. ರಾಷ್ಟ್ರಕವಿ ಕುವೆಂಪು ಅವರಿಗೆ ಅತಿ ಹೆಚ್ಚು ಗೌರವ ಕೊಟ್ಟಿರುವುದು ಬಿಜೆಪಿ. ಸದಾನಂದಗೌಡರು ಸಿಎಂ ಆಗಿದ್ದಾಗ ನಾಡಗೀತೆ ಆಯ್ತು. ಮೋದಿ ಅಧಿಕಾರಕ್ಕೆ ಬಂದಾಗ ಪ್ರಶಸ್ತಿ ವಾಪಸ್ಸು ನೀಡಿದರು. ಇದೀಗ ಪಠ್ಯದ ಲೇಖನ ವಾಪಸ್ಸಿಗೆ ಪತ್ರ ಬರೆಯುತ್ತಿದ್ದಾರೆ. ಇದು ಕಾಂಗ್ರೆಸ್ ಅವರಿಂದ ಉಪಕೃತರಾದವರ ಕೆಲವರ ನಾಟಕ. ಕೆಲವರು ಕೈ ಬಿಟ್ಟ ಮೇಲೆ ನಮ್ಮ ಪಠ್ಯ ಕೈ ಬಿಡಿ ಅಂತಿದ್ದಾರೆ. ದೇವನೂರು ಅವರ ಪಠ್ಯವನ್ನು ಹಿಂದೆ ಯುವಕರು ತುಂಬಾ ಓದಿದ್ದಾರೆ. ಕಳೆದ 15 ವರ್ಷದಿಂದ ಇವರ ಸಾಹಿತ್ಯ ಕೃಷಿ ನಿಂತು ಹೋಗಿದೆ. ಕಾಂಗ್ರೆಸ್ ಪರ ನಿಲ್ಲಲು ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡ್ತಿದ್ದಾರೆ. ಅವರೆಲ್ಲಾ ಅದ್ಬುತ ಸಾಹಿತಿಗಳು ಅಂದುಕೊಳ್ಳುವುದು ಬೇಡ ಎಂದರು.

1 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಭವನ
ತುಮಕೂರು ನಗರದ ಹೊರವಲಯದ ಕ್ಯಾತ್ಸಂದ್ರದ ಮೈದಾಳ ರಸ್ತೆಯ (ಬಸವಾಪಟ್ಟಣ)ಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿ. ದೇವರಾಜ ಅರಸು ಭವನವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆಗೊಳಿಸಿದರು.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿ. ದೇವರಾಜ ಅರಸು ಭವನ ನೂತನ ಕಟ್ಟಡವನ್ನು ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೇವರಾಜ ಅರಸು ಭವನ ಹಿಂದುಳಿದ ವರ್ಗದ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಭವನವನ್ನು ಇಂದು ಉದ್ಘಾಟನೆ ಮಾಡಿದ್ದೇನೆ ಎಂದರು.

ಹಿಂದುಳಿದ ವರ್ಗದವರನ್ನು ಮೇಲೆತ್ತುವ ಆಶಯವನ್ನು ಸಾಕಾರಗೊಳಿಸಲಿ
ನಗರದಲ್ಲಿ ಜಿಪಂ ಕೆಡಿಪಿ ಸಭೆಗೂ ಮುನ್ನ ಕ್ಯಾತ್ಸಂದ್ರದ ಮೈದಾಳ ರಸ್ತೆಯ (ಬಸವಾಪಟ್ಟಣ)ಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿ. ದೇವರಾಜ ಅರಸು ಭವನ ಉದ್ಘಾಟಿಸಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ ಅವರು, ಬಿಸಿಎಂ ಇಲಾಖೆಯಿಂದ ಹಿಂದುಳಿದ ವರ್ಗದ ಜನರನ್ನು ಮೇಲೆತ್ತುವ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸಕ್ಕೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದೆ. ಇಂತಹ ಭವನಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದುಳಿದ ವರ್ಗದ ಜನರಿಗೆ ಬೇಕಾಗಿರುವ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಕೆಲಸ ನಡೆಯುತ್ತಿದೆ ಎಂದರು.
ಈ ಭವನದ ಪಕ್ಕದಲ್ಲೇ ಬಿಸಿಎಂ ಹಾಸ್ಟೆಲ್ ಸಹ ಇದೆ. ಇದರಲ್ಲಿ ಹಿಂದುಳಿದ ವರ್ಗದ ಮಕ್ಕಳು, ದಲಿತ ಸಮುದಾಯಕ್ಕೆ ಸೇರಿದ ಮಕ್ಕಳು ಎಲ್ಲರೂ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ ಎಂದರು. ಮನುಷ್ಯನ ಜೀವನದಲ್ಲಿ ಶಿಕ್ಷಣ ಬಹಳ ಪ್ರಮುಖವಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ಕೊಡುವ ಕೆಲಸವನ್ನು ಇಲಾಖೆ ಮಾಡುತ್ತಿದೆ ಎಂದ ಅವರು, ದೇವರಾಜ ಅರಸು ಭವನ ಹಿಂದುಳಿದ ವರ್ಗದವರನ್ನು ಮೇಲೆತ್ತುವ ಆಶಯವನ್ನು ಸಾಕಾರಗೊಳಿಸಲಿ ಎಂದು ಆಶಿಸುತ್ತೇನೆ ಎಂದರು.
(ಒನ್ಇಂಡಿಯಾ ಸುದ್ದಿ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications