ತುಮಕೂರು : ಸೀಟ್‌ಬೆಲ್ಟ್ ಹಾಕಿಕೊಳ್ಳಿ, ಇಲ್ಲ ದಂಡ ಕಟ್ಟಿ
ತುಮಕೂರು, ಏ. 13 : ತುಮಕೂರು ನಗರದಲ್ಲಿ ಕಾರು ಚಾಲಕರು ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಏ.25ರ ನಂತರ ಸೀಟ್ ಬೆಲ್ಟ್ ಧರಿಸದಿದ್ದರೆ ದಂಡ ಪಾವತಿ ಮಾಡಬೇಕಾಗುತ್ತದೆ.
ತುಮಕೂರು ಜಿಲ್ಲಾ ಪೊಲೀಸರು ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಕಾರು ಚಾಲಕರು ಇನ್ನು ಮುಂದೆ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಾಲಕರು ಮತ್ತು ಮುಂಭಾಗದ ಸೀಟಿನಲ್ಲಿ ಕುಳಿತು ಪ್ರಯಾಣಿಸುವ ವ್ಯಕ್ತಿಗಳು ಸೀಟ್ ಬೆಲ್ಟ್ ಧರಿಸಬೇಕು, ಏ.25ರಿಂದ ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. [ತುಮಕೂರು-ಅರಸೀಕೆರೆ ಜೋಡಿ ಮಾರ್ಗಕ್ಕೆ ಒಪ್ಪಿಗೆ]
ಮದ್ಯಪಾನ ಮಾಡಿ ಚಾಲನೆ ಮಾಡುವುದು, ಅತಿ ವೇಗದ ಚಾಲನೆ, ಸಿಗ್ನಲ್ ಜಂಪ್, ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡಿದರೆ ಅಂತಹ ಚಾಲಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. [ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ಪ್ರಸಿದ್ಧಿ ಪಡೆದಿದ್ದು ಹೇಗೆ?]
ಈಗಾಗಲೇ ಬೆಂಗಳೂರು, ಮೈಸೂರು, ಮಂಗಳೂರು ಮುಂತಾದ ನಗರಗಳಲ್ಲಿ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಇದನ್ನು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ಈ ನಿಯಮ ತುಮಕೂರಿನಲ್ಲೂ ಜಾರಿಗೆ ಬರುತ್ತಿದೆ.












Click it and Unblock the Notifications