• search
 • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತುಮಕೂರು: 'ಸೂಪರ್ ಸೀಡ್' ಗೆದ್ದು ಮೀಸೆ ತಿರುವಿದ ಕೆ ಎನ್ ರಾಜಣ್ಣ

|
   'ಸೂಪರ್ ಸೀಡ್' ಗೆದ್ದು ಮೀಸೆ ತಿರುವಿದ ಕೆ ಎನ್ ರಾಜಣ್ಣ | Oneindia Kannada

   ತುಮಕೂರು, ಜುಲೈ 27: ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆದ ಒಂದೇ ವಾರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಮತ್ತೆ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

   ಡಿಸಿಸಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿ ನೇಮಕ ಮಾಡಿದ್ದನ್ನು ಸಹಕಾರ ಇಲಾಖೆಯ ಹೆಚ್ಚುವರಿ ನಿಬಂಧಕರು ತಡೆ ಹಿಡಿದ ನಂತರ, ರಾಜಣ್ಣ ನೇತೃತ್ವದ ಆಡಳಿತ ಮಂಡಳಿ ಮತ್ತೆ ಅಧಿಕಾರ ಹಿಡಿದಿದೆ.

   ತುಮಕೂರಲ್ಲಿ ರಾಜಣ್ಣ ಗುರ್ ಅಂದರೆ ಪರಮೇಶ್ವರ್ ಗೆ ಏಕೆ ಢವ ಢವ?ತುಮಕೂರಲ್ಲಿ ರಾಜಣ್ಣ ಗುರ್ ಅಂದರೆ ಪರಮೇಶ್ವರ್ ಗೆ ಏಕೆ ಢವ ಢವ?

   ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ನಂತರ, ಸರಕಾರ, ಪರಮೇಶ್ವರ್, ದೇವೇಗೌಡ್ರ ಕುಟುಂಬದ ವಿರುದ್ದ ಕಿಡಿಕಾರುತ್ತಲೇ ಇದ್ದ ರಾಜಣ್ಣ, ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಹಿಂದೆ, ಪರಮೇಶ್ವರ್ ಅವರ ಕೈವಾಡವಿದೆ ಎಂದು ಬಹಿರಂಗವಾಗಿಯೇ ಆರೋಪಿಸಿದ್ದರು.

   ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಯಡಿಯೂರಪ್ಪನವರ ಪದಗ್ರಹಣ ಸಮಾರಂಭದಲ್ಲಿ ಯಾವ ಕಾಂಗ್ರೆಸ್ ಮುಖಂಡರೂ ಭಾಗವಹಿಸಬಾರದು ಎನ್ನುವ ಕಟ್ಟುನಿಟ್ಟಿನ ಸೂಚನೆಯ ನಡುವೆಯೂ ಕೆ ಎನ್ ರಾಜಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

   ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ. ಎನ್. ರಾಜಣ್ಣ ಅಧ್ಯಕ್ಷರಾಗಿದ್ದ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ (ಡಿಸಿಸಿ), ಶನಿವಾರ (ಜುಲೈ 20) ರಾತ್ರಿ 8.30ಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

   ಕೆ.ಎನ್‌.ರಾಜಣ್ಣಗೆ ಶಾಕ್, ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಕೆ.ಎನ್‌.ರಾಜಣ್ಣಗೆ ಶಾಕ್, ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್

   2019ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದ ಮುದ್ದ ಹುನುಮೇಗೌಡರಿಗೆ ಟಿಕೆಟ್ ನಿರಾಕರಿಸಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಕೆ. ಎನ್. ರಾಜಣ್ಣ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

   ಎಚ್. ಡಿ. ದೇವೇಗೌಡರು ಚುನಾವಣಾ ಕಣಕ್ಕಿಳಿದ ಬಳಿಕ ಅವರ ಅಸಮಾಧಾನ ಇನ್ನೂ ಹೆಚ್ಚಾಗಿತ್ತು. ಪಕ್ಷೇತರ ಅಭ್ಯರ್ಥಿಯಾಗಿ ದೇವೇಗೌಡರ ವಿರುದ್ಧ ಕಣಕ್ಕಿಳಿದ ರಾಜಣ್ಣ ಕಾಂಗ್ರೆಸ್ ವರಿಷ್ಠರ ಸಂಧಾನದ ಬಳಿಕ ನಾಮಪತ್ರ ವಾಪಸ್ ಪಡೆದಿದ್ದರು.

   English summary
   Senior Congress leader and former MLA from Madhugiri, K N Rajanna again taken control in DCC Bank, Tumakuru. DCC bank was superceeded on last Saturday (July 20)
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X