ತುಮಕೂರು: ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ನಿಧನ

ತುಮಕೂರು, ಅಕ್ಟೋಬರ್ 18: ರಾಜ್ಯದ ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಶುಕ್ರವಾರ ಬೆಳಗಿನ ಜಾವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ತುಮಕೂರಿನ ಹೆಬ್ಬೂರು ಹೋಬಳಿಯ ಸುಗ್ಗನಹಳ್ಳಿ-ಕೆಂಕೆರೆ ಬಳಿಯ ತಮ್ಮ ತೋಟಕ್ಕೆ ಹೋಗುವ ಸಂದರ್ಭದಲ್ಲಿ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ, ಸಿದ್ದಯ್ಯ ಅವರಿಗೆ ತೀವ್ರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

ಸಿದ್ದಯ್ಯ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದರು. ಸಿದ್ದಯ್ಯ ಅವರಿಗೆ ಅಪಘಾತವಾದ ನಂತರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

Seniour Kannada Poet KB Siddayya Passed Away

ತುಮಕೂರಿನ ಸಿದ್ದಾರ್ಥ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಸಿದ್ದಯ್ಯ ಅವರು ಇಬ್ಬರು ಪುತ್ರಿಯರು, ಒಬ್ಬ ಪುತ್ರ ಮತ್ತು ಪತ್ನಿಯನ್ನು ಅಗಲಿದ್ದಾರೆ.

ಸಿದ್ದಯ್ಯ ಮಾಗಡಿ ಮೂಲದವರಾಗಿದ್ದರು ಆದರೆ ತುಮಕೂರನ್ನು ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದರು. ದಲಿತ ಚಳುವಳಿಗಳಲ್ಲಿ ಭಾಗವಹಿಸಿದ್ದ ಸಿದ್ದಯ್ಯ, ದಲಿತ ಸಾಹಿತ್ಯದಲ್ಲಿ ಪ್ರಮುಖ ಹೆಸರು.

ದಕ್ಕಲ ಕಥಾದೇವಿ, ಬಕಾಲ, ಗಲ್ಲೆಭಾನಿ ಸೇರಿದಂತೆ ಹಲವು ಖಂಡಕಾವ್ಯವನ್ನು ಸಿದ್ದಯ್ಯ ಅವರು ರಚಸಿದ್ದರು‌. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಸಿದ್ದಯ್ಯ ಭಾಜನರಾಗಿದ್ದರು.

ಸಿದ್ದಯ್ಯ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ ತುಮಕೂರಿಗೆ ತಂದು ಟೌನ್‌ ಹಾಲ್ ಬಳಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಸಂಜೆ ತೋಟದಲ್ಲಿ ಅಂತಿಮಕ್ರಿಯೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+